ETV Bharat / state

ಯಾವುದೇ ರೀತಿ ತನಿಖೆಗೆ ನಾವು ಸಿದ್ಧ: ಬಸವರಾಜ ಬೊಮ್ಮಾಯಿ‌

ಬಿಜೆಪಿ ಕಾಲದ ಅಕ್ರಮಗಳ ತನಿಖೆ ನಡೆಸುವಂತೆ ಟಿಪ್ಪಣಿ ಬರೆದ ಸಿಎಂ ಸಿದ್ದರಾಮಯ್ಯರ ನಡೆಗೆ ಮಾಜಿ ಮುಖ್ಯಮಂತ್ರಿ ಪ್ರತಿಕ್ರಿಯಿಸಿದ್ದಾರೆ.

Basavaraj Bommai
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌
author img

By

Published : May 30, 2023, 1:36 PM IST

ಬೆಂಗಳೂರು: ಬಿಜೆಪಿ ಅವಧಿಯಲ್ಲಿ ನಡೆದ ಭ್ರಷ್ಟಾಚಾರ, ಅಕ್ರಮಗಳ ತನಿಖೆ ನಡೆಸುವಂತೆ ಸಿಎಂ ಸಿದ್ದರಾಮಯ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾಗೆ ಪತ್ರ ಬರೆದು 15 ದಿನಗಳಲ್ಲಿ ವರದಿ ನೀಡುವಂತೆ ಆದೇಶಿಸಿದ್ದಾರೆ. ಯಾವುದೇ ರೀತಿ ತನಿಖೆ ನಡೆಸಲಿ, ಅದನ್ನು ಎದುರಿಸಲು ನಾವು ಸಿದ್ಧರಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ತಿರುಗೇಟು ನೀಡಿದ್ದಾರೆ.

ರೇಸ್ ಕೋರ್ಸ್ ರಸ್ತೆಯಲ್ಲಿರುವ ಅಧಿಕೃತ ನಿವಾಸದಲ್ಲಿಂದು ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಬಿಜೆಪಿ ಅವಧಿಯಲ್ಲಿ ಆದ ಹಗರಣ ತನಿಖೆ ವಿಚಾರಕ್ಕೆ ಹೆದರಲ್ಲ. ಯಾವುದೇ ಆರೋಪ ಇರಲಿ, ದೂರು ಇರಲಿ, ಯಾವುದೇ ತನಿಖೆ ಮಾಡಬಹುದು. ಸಮಾಜ ಕಲ್ಯಾಣ ಇಲಾಖೆಯಲ್ಲಿ ಸಿಐಡಿ ತನಿಖೆ ಮಾಡಬಹುದು ಅಂತ ಸಿಐಡಿ ತನಿಖೆಗೆ ನಾನೇ ಹಿಂದೆ ದೂರು ನೀಡಿದ್ದೆ.

ಚುನಾವಣಾ ನೀತಿ ಸಂಹಿತೆ ಇದ್ದ ಹಿನ್ನೆಲೆಯಲ್ಲಿ ಎಫ್ಐಆರ್ ಆಗಿರಲಿಲ್ಲ. ಹೊಸ ಸರ್ಕಾರ ಬಂದಿದೆ, ಯಾವುದೇ ರೀತಿ ತನಿಖೆ ನಡೆಸಲಿ, ಎದುರಿಸಲು ನಾವು ಸಿದ್ಧ. ತನಿಖೆ ಪಾರದರ್ಶಕವಾಗಿರಲಿ. ತನಿಖೆ ಕಾಮಗಾರಿಗೆ ಅಡ್ಡಿ ಆಗಬಾರದು, ಟಾರ್ಗೆಟ್ ಮಾಡಿ ಕಾಮಗಾರಿ ಬದಲಾವಣೆ ಮಾಡುವ ದುರುದ್ದೇಶ ಆಗಬಾರದು ಎಂದರು‌.

ಪಠ್ಯ ಪುಸ್ತಕ ಬದಲಾವಣೆ ಬೇಡ: ನಮ್ಮ ಭಾರತದ ಸಂಸ್ಕೃತಿ, ಸಾಹಿತ್ಯ, ವಿಚಾರಗಳ ಆಧಾರ ಮೇಲೆ ಕೆಲವು ಹೊಸದಾಗಿ ಪಠ್ಯ ಪುಸ್ತಕದಲ್ಲಿ ಅಳವಡಿಕೆ ಮಾಡಿದ್ದೆವು. ಅವರು ಅದೇ ಜಾಡನ್ನು ಹಿಡಿದು ಹೊಸ ಕಮಿಟಿ ಮಾಡಲು ಹೊರಟಿದ್ದಾರೆ. ಇದಕ್ಕೆ ಸಮಾಜವೇ ಪ್ರತಿಕ್ರಿಯೆ ನೀಡಲಿದೆ. ಮಕ್ಕಳಿಗೆ ಶಿಕ್ಷಣ ನೀಡುವ ಬಗ್ಗೆ ಪೋಷಕರು ಗಮನಿಸುತ್ತಿದ್ದಾರೆ. ಪಠ್ಯ ಪದೇ ಪದೇ ಬದಲಾವಣೆಯಿಂದ ಮಕ್ಕಳಿಗೆ ಸಮಸ್ಯೆ ಆಗಬಾರದು ಜವಾಬ್ದಾರಿ ಸರ್ಕಾರದ ಮೇಲಿದೆ, ಸರ್ಕಾರ ಏನು ಮಾಡಲಿದೆ ನೋಡೋಣ ಎಂದು ಮಾಜಿ ಸಿಎಂ ಹೇಳಿಕೆ ನೀಡಿದರು.

ಮುಂದುವರೆದು, ಎನ್.ಇ.ಪಿ ರದ್ದು ವಿಚಾರದ ಕುರಿತು ಪ್ರತಿಕ್ರಿಯೆ ನೀಡಿದ ಬೊಮ್ಮಾಯಿ‌, ಈಗ ಮಕ್ಕಳು ಅಧ್ಯಯನ ಶುರು ಮಾಡಿದ್ದಾರೆ. ಎನ್.ಇ.ಪಿ ಮಾಡುವಾಗಲೇ ಸಮಿತಿ ಮಾಡಿ, ರಾಜ್ಯದ ಅಭಿಪ್ರಾಯ ತೆಗೆದುಕೊಳ್ಳಲಾಗಿದೆ. ಎಲ್ಲ ಎಕ್ಸ್‌ಪರ್ಟ್ ಅಭಿಪ್ರಾಯ ಪಡೆದು ಜಾರಿಗೆ ತರಲಾಗಿದೆ. ಈಗ ರದ್ದು ಮಾಡುವುದು ಸರಿಯಲ್ಲ ಎಂದರು.

ಉಚಿತ ಯೋಜನೆ ವಿಚಾರ: ನಿನ್ನೆ ಸಿಎಂ ಸಭೆ ಮಾಡಿದ್ದಾರೆ. ಸುದೀರ್ಘ ಸಭೆಯಲ್ಲಿ ಏನಾಗಿದೆ ಗೊತ್ತಿಲ್ಲ. ಮಾಧ್ಯಮದಿಂದ ತಿಳಿದ ವಿಚಾರವೆಂದರೆ ಎಲ್ಲ ಉಚಿತ ನೀಡಿದರೆ, ಅಭಿವೃದ್ಧಿ ಕಾರ್ಯ ಕುಂಟಿತ ಆಗಲಿದೆ. ಆಶ್ವಾಸನೆ ನೀಡಿದ್ದು ಎಲ್ಲರಿಗೂ ಸಿಗುತ್ತದೆ ಅಂತ. ಅತ್ತೆಗೋ, ಸೊಸೆಗೋ ಅಂತ ಮೊದಲು ಹೇಳಿರಲಿಲ್ಲ. ಏನು ಮಾಡಲಿದ್ದಾರೆ ಅಂತ ಕರ್ನಾಟಕದ ಜನತೆಗೆ ಕಾಡುತ್ತಿದೆ. ಒಂದನೇ ತಾರೀಖು ಕ್ಯಾಬಿನೆಟ್ ಇದೆ. ಅಲ್ಲಿ ಎಲ್ಲವೂ ಸ್ಪಷ್ಟವಾಗಲಿದೆ. ಆರ್ಥಿಕವಾಗಿ ಕಷ್ಟ ಅನ್ನೋದು ಮೇಲ್ನೋಟಕ್ಕೆ ಗೊತ್ತಾಗ್ತಿದೆ. ಜನರನ್ನು ಯಾಮಾರಿಸಿ ಗೆಲ್ಲಬೇಕು ಅಂತ ಮಾಡಿದ್ದಾರೆ. ಜನ ಈಗ ಅಧಿಕಾರ ಕೊಟ್ಟಿದ್ದಾರೆ. ಏನು ಮಾಡುತ್ತಾರೆ ಕಾದು ನೋಡೋಣ ಎಂದು ತಿಳಿಸಿದರು.

  • ಕಳೆದ 9 ವರ್ಷಗಳಲ್ಲಿ ಪ್ರಧಾನಮಂತ್ರಿ ಶ್ರೀ @narendramodi ಸರ್ಕಾರವು ದೇಶದ ಬ್ಯಾಂಕಿಂಗ್ ಸೌಲಭ್ಯ ವಂಚಿತರಿಗೆ "ಜನಧನ್" ಯೋಜನೆ ಮೂಲಕ ಬ್ಯಾಂಕಿಂಗ್ ಸೌಲಭ್ಯ ಹಾಗೂ ಫಲಾನುಭವಿಗಳಿಗೆ "ಡಿಬಿಟಿ" ಯೋಜನೆ ಜಾರಿಗೊಳಿಸುವ ಮೂಲಕ ಸೋರಿಕೆಯನ್ನು ತಡೆಗಟ್ಟಿ, ನಾಗರೀಕರ ಸಬಲೀಕರಣಕ್ಕೆ ಒತ್ತು ನೀಡಿದೆ.#9YearsOfSeva

    — Basavaraj S Bommai (@BSBommai) May 30, 2023 " class="align-text-top noRightClick twitterSection" data=" ">

9 ವರ್ಷ ಪೂರೈಸಿದ ಮೋದಿ ಸರ್ಕಾರದ ಕುರಿತು ಬೊಮ್ಮಾಯಿ ಟ್ವೀಟ್​: ನರೇಂದ್ರ ಮೋದಿ ಪ್ರಧಾನ ಮಂತ್ರಿಯಾಗಿ 9 ವರ್ಷ ಪೂರೈಸಿರುವುದಕ್ಕೆ ದೇಶಾದ್ಯಂತ ಬಿಜೆಪಿ ಸಂಭ್ರಮಾಚರಣೆ ನಡೆಸುತ್ತಿದ್ದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಮೋದಿ ಆಡಳಿತವನ್ನು ಹಾಡಿ ಹೊಗಳಿದ್ದಾರೆ. ಭಾರತದಲ್ಲಿನ ಬಡವರ ಬದುಕಿನ ಮಟ್ಟ, ಕಳೆದ 9 ವರ್ಷಗಳಲ್ಲಿ ಪ್ರಧಾನಮಂತ್ರಿ ಮೋದಿ ಅವರ ದೂರದೃಷ್ಟಿಯಿಂದ ಸಬಲೀಕರಣಗೊಂಡಿದೆ ಎಂದು ಬಣ್ಣಿಸಿದ್ದಾರೆ. ನಾಡಿನ ನೇಗಿಲಯೋಗಿಗಳ ಸರ್ವಾಂಗೀಣ ಪ್ರಗತಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕನಸಾಗಿದ್ದು, ಪಿಎಂ ಕಿಸಾನ್ ಸಮ್ಮಾನ್ ಯೋಜನೆ ಸೇರಿದಂತೆ, ಜಾರಿಗೊಳಿಸಿದ ಅನೇಕ ಯೋಜನೆಗಳು ರೈತರ ಆದಾಯವನ್ನು ದ್ವಿಗುಣಗೊಳಿಸಲು ಸಹಕಾರಿಯಾಗಿವೆ ಎಂದು ಮಾಜಿ ಸಿಎಂ ಬೊಮ್ಮಾಯಿ‌ ಟ್ವೀಟ್ ಮಾಡಿದ್ದಾರೆ. ಕಳೆದ 9 ವರ್ಷಗಳಲ್ಲಿ ಭಾರತದ ಆರ್ಥಿಕತೆಯು ಗಣನೀಯ ಪ್ರಮಾಣದಲ್ಲಿ ಸುಧಾರಣೆ ಕಂಡಿದ್ದು, ಇಂದು ವಿಶ್ವದ 5 ನೇ ಅತಿದೊಡ್ಡ ಆರ್ಥಿಕತೆಯ ದೇಶವಾಗಿ ಹೊರಹೊಮ್ಮಿದೆ.

ಪ್ರಧಾನಮಂತ್ರಿ ಮೋದಿ ಅವರ ದೂರದೃಷ್ಟಿ ಯೋಜನೆಗಳು ಹಾಗೂ ಡಿಜಿಟಲ್ ಆರ್ಥಿಕತೆಯು, ಭಾರತದ ಆರ್ಥಿಕತೆಯ ಬೆಳವಣಿಗೆಗೆ ಪೂರಕವಾಗಿವೆ. ಪ್ರಧಾನಮಂತ್ರಿ ಮೋದಿ ಸರ್ಕಾರವು ದೇಶದ ಬ್ಯಾಂಕಿಂಗ್ ಸೌಲಭ್ಯ ವಂಚಿತರಿಗೆ "ಜನಧನ್" ಯೋಜನೆ ಮೂಲಕ ಬ್ಯಾಂಕಿಂಗ್ ಸೌಲಭ್ಯ ಹಾಗೂ ಫಲಾನುಭವಿಗಳಿಗೆ "ಡಿಬಿಟಿ" ಯೋಜನೆ ಜಾರಿಗೊಳಿಸುವ ಮೂಲಕ ಸೋರಿಕೆಯನ್ನು ತಡೆಗಟ್ಟಿ, ನಾಗರೀಕರ ಸಬಲೀಕರಣಕ್ಕೆ ಒತ್ತು ನೀಡಿದೆ. ಅಧಿಕಾರದ 9 ವರ್ಷಗಳಲ್ಲಿ ಪ್ರಧಾನಮಂತ್ರಿ ಮೋದಿಯವರು ದೇಶದ "ನಾರಿ-ಶಕ್ತಿ"ಯ ಪ್ರಗತಿಗೆ ವಿಶೇಷ ಆದ್ಯತೆ ನೀಡಿದ್ದು, ಅದರ ಪರಿಣಾಮ, ಇಂದು ಭಾರತೀಯ ಮಹಿಳೆಯರು ನವೋದ್ಯಮಗಳಲ್ಲಿ, ಶಿಕ್ಷಣ ಕ್ಷೇತ್ರದಲ್ಲಿ ಮತ್ತು ರಕ್ಷಣಾ ವಿಭಾಗದಲ್ಲಿ ತಮ್ಮ ಛಾಪನ್ನು ಮೂಡಿಸಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.

ಬಡವರಿಗೆ ಪಕ್ಕಾ ಮನೆ, ವಿದ್ಯುತ್ ಸಂಪರ್ಕ, ಶುದ್ಧ ಕುಡಿಯುವ ನೀರಿನ ನಳದ ಸಂಪರ್ಕ, ಉಜ್ವಲ ಯೋಜನೆಯಿಂದ ಹೊಗೆ ಮುಕ್ತ ಅಡುಗೆ ಮನೆ, ಶೌಚಾಲಯ, ಆಯುಷ್ಮಾನ್ ಭಾರತ ಕಾರ್ಡ್, ಹೀಗೆ ಭಾರತೀಯರ ಜೀವನಮಟ್ಟ ಮೋದಿ ಅವರ ಆಡಳಿತದಲ್ಲಿ ಬದಲಾಗಿದೆ, ಇನ್ನಷ್ಟು ಬದಲಾಗಲಿದೆ ಎಂದು ಆಶಿಸಿದ್ದಾರೆ. ಜಲಜೀವನ್ ಮಿಷನ್ ಯೋಜನೆಯಡಿ ನೀರಿನ ನಳದ ಸಂಪರ್ಕಗಳು, ಉಜ್ವಲ ಯೋಜನೆಯಡಿ ಎಲ್.ಪಿ.ಜಿ ಗ್ಯಾಸ್ ಕನೆಕ್ಷನ್ ಗಳು, ಸ್ವಚ್ಛ್ ಭಾರತ್ ಯೋಜನೆಯಡಿ ಶೌಚಾಲಯಗಳು ಹೀಗೆ ಭಾರತದಲ್ಲಿನ ಬಡವರ ಬದುಕಿನ ಮಟ್ಟ, ಕಳೆದ 9 ವರ್ಷಗಳಲ್ಲಿ ಪ್ರಧಾನಮಂತ್ರಿ ಮೋದಿ ಅವರ ದೂರದೃಷ್ಟಿಯಿಂದ ಸಬಲೀಕರಣಗೊಂಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ದೇಶದ ಬೆಳವಣಿಗೆಗೆ 9 ವರ್ಷಗಳ ನಿರಂತರ ಸೇವೆ: ಪ್ರಧಾನಿ ಮೋದಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.