ETV Bharat / state

ಬೊಮ್ಮಾಯಿ ಅವರದ್ದು ನಮ್ಮನ್ನು ಇಕ್ಕಟ್ಟಿಗೆ ಸಿಲುಕಿಸುವ ಸಲಹೆ: ಡಿಸಿಎಂ ಡಿ.ಕೆ.ಶಿವಕುಮಾರ್

ಬಸವರಾಜ ಬೊಮ್ಮಾಯಿ ಅವರು ರಾಜಕಾರಣ ಬದಿಗಿಟ್ಟು, ಕಾವೇರಿ ನೀರು ಬೀಡುಗಡೆ ಕುರಿತು ಪ್ರಧಾನಿ ಮೋದಿ ಅವರು ಮಧ್ಯಸ್ತಿಕೆ ವಹಿಸುವಂತೆ ಒತ್ತಡ ತರಲಿ ಎಂದು ಡಿಕೆಶಿ ಹೇಳಿದ್ದಾರೆ.

DCM D K Shivakumar
ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್​
author img

By ETV Bharat Karnataka Team

Published : Sep 19, 2023, 11:48 AM IST

Updated : Sep 19, 2023, 1:34 PM IST

ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್​

ಬೆಂಗಳೂರು: ಕಾವೇರಿ ನದಿ ನೀರು ಬಿಡುಗಡೆ ವಿಚಾರವಾಗಿ ಸುಪ್ರೀಂ ಕೋರ್ಟ್​ನಲ್ಲಿ ನಮ್ಮನ್ನು ಇಕ್ಕಟ್ಟಿಗೆ ಸಿಲುಕಿಸುವ ಸಲಹೆಯನ್ನು ಬಸವರಾಜ ಬೊಮ್ಮಾಯಿ ನೀಡುತ್ತಿದ್ದಾರೆ. ನೀರು ಬಿಡಲು ನಾವು ತಯಾರಿಲ್ಲ. ಹೀಗಾಗಿ ಕಾನೂನು ಹೋರಾಟ ನಡೆಸುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದರು.

ಸದಾಶಿವನಗರದ ನಿವಾಸದ ಬಳಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನೀರು ಬಿಡುಗಡೆ ಮಾಡದೆ ಕಾನೂನು ಹೋರಾಟ ನಡೆಸಬೇಕು ಎಂಬ ಬೊಮ್ಮಾಯಿ ಹೇಳಿಕೆಗೆ ಪ್ರತಿಕ್ರಿಯಿಸಿ, ಬೊಮ್ಮಾಯಿ ಅವರ ಕಾಲದಲ್ಲಿ ಎಷ್ಟು ನೀರು ಬಿಟ್ಟಿದ್ದರು ಎನ್ನುವ ದಾಖಲೆಗಳು ನಮ್ಮ ಬಳಿ ಇವೆ. ಆದರೆ ಸುಪ್ರೀಂ ಕೋರ್ಟ್ ಅನ್ನೂ ನಾವು ಗಮನದಲ್ಲಿ ಇರಿಸಿಕೊಳ್ಳಬೇಕಾಗುತ್ತದೆ. ನೀರು ಬಿಡಬೇಡಿ ಎಂದು ಬೊಮ್ಮಾಯಿ ಹೇಳುತ್ತಾರೆ. ಕಾವೇರಿ ನೀರು ನಿರ್ವಹಣಾ ಸಮಿತಿಯ ಆದೇಶ ಪಾಲನೆ ಮಾಡಿಲ್ಲ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದರೆ, ಬೊಮ್ಮಾಯಿ ಹಾಗೂ ನನ್ನ ಬಳಿ ಯಾವ ಆಯ್ಕೆ ಇದೆ? ಎಂದರು.

ಬೊಮ್ಮಾಯಿ ಕೂಡಲೇ ಈ ವಿಚಾರದಲ್ಲಿ ಪ್ರಧಾನಿಗಳಿಗೆ ಮಧ್ಯಸ್ತಿಕೆ ವಹಿಸುವಂತೆ ಒತ್ತಡ ತರಲಿ. ನೀರು ನಿರ್ವಹಣಾ ಸಮಿತಿಗೂ ಮನವಿ ಸಲ್ಲಿಸಲಿ. ರಾಜ್ಯದ ಹಿತವನ್ನು ಅವರು ಮೊದಲು ಕಾಪಾಡಲಿ, ರಾಜಕಾರಣ ಬದಿಗಿಡಲಿ. ನಾನು ಶೀಘ್ರದಲ್ಲೇ ದೆಹಲಿಗೆ ಹೋಗಲಿದ್ದು, ಸಂಸದರನ್ನು ಭೇಟಿ ಮಾಡಿ ಮನವಿ ಮಾಡಲಿದ್ದೇನೆ.‌ ಮಧ್ಯಸ್ತಿಕೆ ವಹಿಸಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುತ್ತೇವೆ ಎಂದು ತಿಳಿಸಿದರು.

ರಾಜ್ಯಸಭೆಯಲ್ಲಿ ಸೋಮವಾರ ಮಾತನಾಡಿದ್ದ ಪ್ರಧಾನಿ ಹೆಚ್.ಡಿ.ದೇವೇಗೌಡರು ನ್ಯಾಯಲಯದ ಹೊರಗಡೆ ಇತ್ಯರ್ಥ ಮಾಡಿಕೊಳ್ಳಿ ಎಂದು ಸಲಹೆ ನೀಡಿರುವುದು ಸರಿಯಾಗಿದೆ. ಹಿರಿತನದ ಅನುಭವದ ಮೇಲೆ ಮಾತನಾಡಿದ್ದಾರೆ. ಅವರ ಸಲಹೆ ಸ್ವೀಕಾರಾರ್ಹ. ನೀರಾವರಿ ಸಚಿವರಾಗಿದ್ದ ಬಸವರಾಜ ಬೊಮ್ಮಾಯಿ ಉಪಯುಕ್ತ ಸಲಹೆ ನೀಡಲಿ. ಅವರೇ ನೇಮಕ ಮಾಡಿದ ಕಾನೂನು ತಜ್ಞರೇ ಈಗಲೂ ಇದ್ದಾರೆ. ಅವರ ಮಾತನ್ನು ಕೇಳಬೇಕೋ ಅಥವಾ ಇವರ ಮಾತನ್ನು ಕೇಳಬೇಕೋ? ಒಳ್ಳೆ ಸಲಹೆ ನೀಡಿದರೆ ಮಾತ್ರ ಅವರ ಮಾತು ಕೇಳುತ್ತೇವೆ ಎಂದು ತಿಳಿಸಿದರು.

ಹಿರಿಯ ವಕೀಲ ನಾರಿಮನ್ ಸಲಹೆ ಕೇಳಿದ್ದೀರಾ ಎನ್ನುವ ಪ್ರಶ್ನೆಗೆ, "ಈಗ ಇರುವ ತಂಡದಲ್ಲಿ ಅವರ ಶಿಷ್ಯರೇ ಇದ್ದಾರೆ, ಸಲಹೆ ಕೇಳಿದ್ದೇವೆ. ಇದರ ಬಗ್ಗೆ ಆ ನಂತರ ಮಾತನಾಡುವೆ" ಎಂದರು.

ಇದನ್ನೂ ಓದಿ : ಕೆಆರ್​ಎಸ್‌ನಿಂದ ತಮಿಳುನಾಡಿಗೆ 5,000 ಕ್ಯೂಸೆಕ್ ನೀರು ಹರಿಸಿದ ಸರ್ಕಾರ: ವಿಡಿಯೋ

Last Updated : Sep 19, 2023, 1:34 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.