ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆ ವತಿಯಿಂದ 'ಪೊಲೀಸ್ ಲಹರಿ' ಎಂಬ ಮಾಸ ಪತ್ರಿಕೆಯನ್ನು ಗೃಹ ಸಚಿವ ಬಸವರಾಜ ಬೊಮ್ಮಾಯಿ ಬಿಡುಗಡೆ ಮಾಡಿದರು.
ಡಿಐಜಿ ಡಿಸಿ ರಾಜಪ್ಪ ಸಂಪಾದಕತ್ವದ ಪತ್ರಿಕೆ ಇದಾಗಿದೆ. ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್, ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಹಾಗೂ ಇತರೆ ಅಧಿಕಾರಿಗಳು ಸಮಾರಂಭದಲ್ಲಿ ಭಾಗಿಯಾಗಿದ್ದರು.