ETV Bharat / state

ಕರ್ನಾಟಕ - ಭಾರತ್‌ ಗೌರವ್ ಕಾಶಿ ದರ್ಶನ ರೈಲಿಗೆ ಬುಕ್ಕಿಂಗ್‌ ಆರಂಭ : 5 ಸಾವಿರ ರೂ. ಸಹಾಯಧನ

ಕರ್ನಾಟಕ – ಭಾರತ್‌ ಗೌರವ್‌ ಕಾಶಿ ದರ್ಶನ ಪ್ಯಾಕೇಜ್‌ ಟೂರ್‌ ಗೆ ಬುಕ್ಕಿಂಗ್‌ ಪ್ರಾರಂಭವಾಗಿದೆ. ಈ ಯಾತ್ರೆಯ ಮೊದಲ ರೈಲು ನವೆಂಬರ್‌ 11 ರಂದು ಬೆಂಗಳೂರಿನಿಂದ ಹೊರಡಲಿದೆ ಎಂದು ಹೇಳಿದ್ದಾರೆ.

booking-for-karnataka-bharat-gaurav-kashi-darshan-has-started
ಕರ್ನಾಟಕ - ಭಾರತ್‌ ಗೌರವ್ ಕಾಶಿ ದರ್ಶನ ರೈಲಿಗೆ ಬುಕ್ಕಿಂಗ್‌ ಆರಂಭ : 5 ಸಾವಿರ ಸಹಾಯಧನ
author img

By

Published : Oct 29, 2022, 8:17 PM IST

ಬೆಂಗಳೂರು : ಕರ್ನಾಟಕ ಸರ್ಕಾರದ ಮುಜರಾಯಿ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆ ಕರ್ನಾಟಕ – ಭಾರತ್‌ ಗೌರವ್‌ ಕಾಶಿ ದರ್ಶನ ಪ್ಯಾಕೇಜ್‌ ಟೂರ್‌ ಗೆ ಬುಕ್ಕಿಂಗ್‌ ಪ್ರಾರಂಭವಾಗಿದೆ. ಈ ಯೋಜನೆಯ ಮೊದಲ ರೈಲು ನವೆಂಬರ್‌ 11 ರಂದು ಬೆಂಗಳೂರಿನಿಂದ ಹೊರಡಲಿದ್ದು, ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡುವ ನಿಟ್ಟಿನಲ್ಲಿ ಯೋಜಿಸಲಾಗುತ್ತಿದೆ ಎಂದು ಮುಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವರಾದ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಪ್ರಕಟಣೆ ನೀಡಿರುವ ಅವರು, ದಿವ್ಯ ಕಾಶಿ - ಭವ್ಯಕಾಶಿಯ ಅಡಿಯಲ್ಲಿ ರಾಜ್ಯದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾಶಿಗೆ ಭೇಟಿ ನೀಡಿ ವಿ‍ಶ್ವನಾಥನ ದರ್ಶನ ಪಡೆಯಲಿ ಎನ್ನುವ ಉದ್ದೇಶದಿಂದ ಈ ವಿಶೇಷ ಪ್ಯಾಕೇಜ್‌ ಟೂರನ್ನು ಆಯೋಜಿಸಲಾಗಿದೆ. ಕೇಂದ್ರ ಸರ್ಕಾರದ ಭಾರತ್‌ ಗೌರವ್‌ ಯೋಜನೆಯ ಅಡಿಯಲ್ಲಿ ರೈಲನ್ನು ಮುಜರಾಯಿ ಇಲಾಖೆ ಗುತ್ತಿಗೆಗೆ ಪಡೆದು ಈ ಯೋಜನೆ ಕಾರ್ಯತಗೊಳಿಸುತ್ತಿದ್ದಾರೆ. ಕೇಂದ್ರ ರೈಲ್ವೇ ಸಚಿವರ ಸಂಪೂರ್ಣ ಸಹಕಾರದೊಂದಿಗೆ ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಈ ಯಾತ್ರೆಯ ಮೊದಲ ರೈಲು ನವೆಂಬರ್‌ 11 ರಂದು ಬೆಂಗಳೂರಿನಿಂದ ಹೊರಡಲಿದೆ ಎಂದು ಹೇಳಿದ್ದಾರೆ.

ಕರ್ನಾಟಕ – ಭಾರತ್‌ ಗೌರವ್‌ ಕಾಶಿ ದರ್ಶನ ರೈಲು ಯೋಜನೆ : ಕರ್ನಾಟಕ – ಭಾರತ್‌ ಗೌರವ್‌ ಕಾಶಿ ದರ್ಶನ ರೈಲು ಯೋಜನೆಯ ಬುಕ್ಕಿಂಗ್‌ ಈಗಾಗಲೇ ಪ್ರಾರಂಭವಾಗಿದೆ. ಐಆರ್‌ಸಿಟಿಸಿ ಹಾಗೂ ಐಟಿಎಂಎಸ್‌ ವೆಬ್‌ಸೈಟ್ ಗಳ ಮೂಲಕ ಬುಕ್ಕಿಂಗ್‌ ಗೆ ಅವಕಾಶ ನೀಡಲಾಗಿದ್ದು, ಈಗಾಗಲೇ ಹಲವಾರು ಜನರು ಬುಕ್ಕಿಂಗ್‌ ಮಾಡಿಕೊಳ್ಳುತ್ತಿದ್ದಾರೆ. ಈ ಲಿಂಕ್‌ ಗಳ ಮೂಲಕ ಬುಕ್ಕಿಂಗ್‌ ಮಾಡಬಹುದಾಗಿದೆ.

https://www.irctctourism.com/pacakage_description?packageCode=SZKBG01

http://itms.kar.nic.in/hrcehome/index.php

ಉತ್ತರ ಕರ್ನಾಟಕದಲ್ಲೂ ರೈಲು ಹತ್ತುವ ಅವಕಾಶ : ಬೆಂಗಳೂರಿನಿಂದ ಹೊರಡುವ ಈ ರೈಲನ್ನು ಹತ್ತಲು ಉತ್ತರ ಕರ್ನಾಟಕದ ಪ್ರಮುಖ ನಿಲ್ದಾಣಗಳಲ್ಲೂ ಅವಕಾಶ ಕಲ್ಪಿಸಲಾಗಿದೆ. ಈ ರೈಲು ಬೆಂಗಳೂರು, ಬಿರೂರ್‌, ಹಾವೇರಿ, ಹುಬ್ಬಳ್ಳಿ, ಬೆಳಗಾವಿ ಹಾಗೂ ರಾಯಭಾಗ ಮಾರ್ಗವಾಗಿ ಕಾಶಿ, ಅಯೋಧ್ಯೆ ಮತ್ತು ಪ್ರಯಾಗರಾಜ್‌ ಗೆ ಸಂಚರಿಸಲಿದೆ.

ಅತ್ಯಂತ ಕಡಿಮೆ ವೆಚ್ಚದಲ್ಲಿ ಕಾಶಿ ವಿಶ್ವನಾಥ ಹಾಗೂ ಅಯೋಧ್ಯ ರಾಮಲಲ್ಲಾ ದೈವ ಭೂಮಿಯ ವೈಭವ ಸವಿಯುವ ಅವಕಾಶ ಇದಾಗಿದೆ. 8 ದಿನಗಳ ಕಾಲದ ಈ ಟೂರ್‌ ಪ್ಯಾಕೇಜ್‌ನಲ್ಲಿ ಎಲ್ಲಾ ಸವಲತ್ತುಗಳನ್ನು ಒಳಗೊಂಡಿರಲಿದೆ. ಟ್ರೈನ್‌ ದರ, ಪ್ರವಾಸಿ ಸ್ಥಳಗಳಲ್ಲಿ ಅಗತ್ಯವಿರುವ ಬಸ್‌ ವ್ಯವಸ್ಥೆ, ಉಳಿದುಕೊಳ್ಳಲು ಹೋಟೆಲ್‌, ಮತ್ತು 8 ದಿನಗಳಲ್ಲಿ ಊಟ ಮತ್ತು ತಿಂಡಿ ವ್ಯವಸ್ಥೆ ಹಾಗೂ ವಿಮೆಯನ್ನು ಸಹ ಈ ಪ್ಯಾಕೇಜ್‌ ಒಳಗೊಂಡಿರಲಿದೆ.

5 ಸಾವಿರ ರೂ ಸಹಾಯಧನ : ಐಆರ್‌ಸಿಟಿಸಿ ಸಹಭಾಗಿತ್ವದ ಈ ಟೂರ್‌ ಪ್ಯಾಕೇಜ್‌ ತಗೆದುಕೊಳ್ಳುವ ಪ್ರತಿ ವ್ಯಕ್ತಿಗೂ 5 ಸಾವಿರ ರೂಪಾಯಿಗಳ ಸಹಾಯಧನವನ್ನು ಕರ್ನಾಟಕ ಸರ್ಕಾರ ನೀಡಲಿದೆ. ಈ ಪ್ಯಾಕೇಜ್‌ ನ ದರ ಮೂಲತಃ 20 ಸಾವಿರ ರೂಪಾಯಿಗಳಾಗಿದ್ದು, ಪ್ರಯಾಣಿಕರು ಕೇವಲ 15,000 ರೂಪಾಯಿಗಳನ್ನು ನೀಡಿದರೆ ಸಾಕು. ಉಳಿದ 5000 ರೂಗಳನ್ನು ಕರ್ನಾಟಕ ಸರ್ಕಾರ ಸಹಾಯಧನದ ರೂಪದಲ್ಲಿ ನೀಡಲಿದೆ.

ಇದನ್ನೂ ಓದಿ : ಹಾವೇರಿ: 86ನೇ ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.