ಬೆಂಗಳೂರು : ಬಿಬಿಎಂಪಿ ವತಿಯಿಂದ ನಿರ್ಮಾಣವಾಗಿದ್ದ ಕೆಂಪೇಗೌಡ ಉದ್ಯಾನವನದ ಪಾರ್ಕ್‌ನಲ್ಲಿರುವ ಹೊಂಡದಲ್ಲಿ ಬಿದ್ದು ಬಾಲಕನೋರ್ವ ಮೃತಪಟ್ಟಿದ್ದಾನೆ. ನಗರದ ಟಿ.ದಾಸರಹಳ್ಳಿಯ ಮಲ್ಲಸಂದ್ರದಲ್ಲಿ ಈ ಘಟನೆ ನಡೆದಿದೆ. ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಪ್ರತಾಪ್ ಎಂಬ 8 ವರ್ಷದ ಬಾಲಕ ಆಟವಾಡುವ ವೇಳೆ ಹೊಂಡಕ್ಕೆ ಬಿದ್ದು ಸಾವಿಗೀಡಾಗಿದ್ದಾನೆ. ಬಾಲಕನು ರುದ್ರಮುನಿ ಹಾಗೂ ಕಾಂತಮಣಿ ಎಂಬ ದಂಪತಿ ಮಗ ಎಂದು ಗುರುತಿಸಲಾಗಿದೆ. ಮಳೆಯಿಂದ ಪಾರ್ಕ್ನ ತಗ್ಗು ಪ್ರದೇಶದಲ್ಲಿ ನೀರು ನಿಂತಿತ್ತು. ಹೀಗಾಗಿ, ಬಾಲಕ ಆಟವಾಡುವಾಗ ನೀರಿನ ಹೊಂಡಕ್ಕೆ ಬಿದ್ದು ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.
ಸದ್ಯ ದಾಸರಹಳ್ಳಿ ಶಾಸಕ ಆರ್ ಮಂಜುನಾಥ್ ಮೃತ ಬಾಲಕನ ಕುಟುಂಬಕ್ಕೆ 50 ಸಾವಿರ ರೂ. ಆರ್ಥಿಕ ನೆರವು ನೀಡಿದ್ದಾರೆ. ಜೊತೆಗೆ ಬಿಬಿಎಂಪಿ ವತಿಯಿಂದ ಪರಿಹಾರ ಕೊಡಿಸುವುದಾಗಿಯೂ ಕೂಡ ಭರವಸೆ ನೀಡಿದ್ದಾರೆ. ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ.
ಇದನ್ನೂ ಓದಿ: ಬಂಟ್ವಾಳ ಬಾಲಕಿ ಮೇಲೆ ಗ್ಯಾಂಗ್ ರೇಪ್ : ನಾಲ್ವರು ಆರೋಪಿಗಳ ಬಂಧನ