ಬೆಂಗಳೂರು : ಮೀನು ಹಿಡಿಯಲು ಹೋಗಿ ಕ್ವಾರಿ ಬಂಡೆಯ ನೀರಿನಲ್ಲಿ ಮುಳುಗಿ ಬಾಲಕ ಸಾವನ್ನಪ್ಪಿರುವ ಘಟನೆ ಕೂಡ್ಲು ಗ್ರಾಮದಲ್ಲಿ ನಡೆದಿದೆ.
ನೇಪಾಳ ಮೂಲದ ದಂಪತಿ ಪುತ್ರ ವಿಷ್ಣು(9) ಮೃತ ಬಾಲಕ ಎಂದು ಗುರುತಿಸಲಾಗಿದೆ. ಕೆಲ ವರ್ಷಗಳ ಹಿಂದೆ ಕೆಲಸಕ್ಕೆಂದು ಬಂದ ನೇಪಾಳ ಮೂಲದ ದಂಪತಿ ಕೂಡ್ಲು ಬಳಿಯ ಸಿಂಗಸಂದ್ರದಲ್ಲಿ ನೆಲೆಸಿದೆ.
ನಿನ್ನೆ ಸಹೋದರ ಜೊತೆಗೆ ಮೀನು ಹಿಡಿಯಲು ಹೋಗಿದ್ದ ವೇಳೆ ಇಳಿಜಾರಿನಲ್ಲಿ ಕಾಲು ಜಾರಿ ಕ್ವಾರಿಯಲ್ಲಿದ್ದ ನೀರಿನಲ್ಲಿ ಬಾಲಕ ಮುಳುಗಿ ಹೋಗಿದ್ದಾನೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಸಂಜೆಯವರೆಗೂ ಕಾರ್ಯಾಚರಣೆ ನಡೆಸಿತ್ತು.
ಆದರೆ, ಬಾಲಕನ ಮೃತದೇಹ ಸಿಕ್ಕಿರಲಿಲ್ಲ. ಇಂದು ಮುಂಜಾನೆ ಸ್ಥಳೀಯ ಈಜುಗಾರರು ಮತ್ತು ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬಾಲಕನ ಮೃತದೇಹ ಹೊರ ತೆಗೆದಿದ್ದಾರೆ. ಈ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಾಹೀರಾತು: ಜಾಹೀರಾತು: ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ