ETV Bharat / state

25 ಕ್ಷೇತ್ರಗಳಲ್ಲಿ ಬ್ರಾಹ್ಮಣರಿಗೆ ಟಿಕೆಟ್ ನೀಡಲು ಬ್ರಾಹ್ಮಣ ಮಹಾಸಭಾ ಆಗ್ರಹ

ಮುಂಬರುವ ವಿಧಾನಸಭಾ ಚುನಾವಣೆ 2023ರಲ್ಲಿ ವಿಪ್ರ ಸಮುದಾಯವರು ಹೆಚ್ಚಿರುವ ರಾಜ್ಯದ ಸುಮಾರು 25 ವಿಧಾನಸಭಾ ಕ್ಷೇತ್ರಗಳಲ್ಲಿ ಬ್ರಾಹ್ಮಣರಿಗೆ ಟಿಕೆಟ್ ನೀಡಬೇಕೆಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಒತ್ತಾಯಿಸಿದೆ.

brahmin mahasabha
ಬ್ರಾಹ್ಮಣ ಮಹಾಸಭಾ
author img

By

Published : Feb 12, 2023, 8:47 AM IST

ಬೆಂಗಳೂರು: ನಗರದಲ್ಲಿ ಶನಿವಾರ ಕರ್ನಾಟಕ ಬ್ರಾಹ್ಮಣ ಮಹಾಸಭಾದ ರಾಜ್ಯ ಕಾರ್ಯಕಾರಣಿ ಸಭೆ ನಡೆಯಿತು. ಈ ಸಂದರ್ಭದಲ್ಲಿ, ಮುಂದಿನ ವಿಧಾನಸಭಾ ಚುನಾವಣೆಗೆ ಸಮುದಾಯವರು ಹೆಚ್ಚಿರುವ ರಾಜ್ಯದ ಸುಮಾರು 25 ವಿಧಾನಸಭಾ ಕ್ಷೇತ್ರಗಳಲ್ಲಿ ಬ್ರಾಹ್ಮಣರಿಗೆ ಮಾತ್ರ ಟಿಕೆಟ್ ನೀಡಬೇಕೆಂದು ಮಹಾಸಭಾ ಆಗ್ರಹಿಸಿತು. ಮಹಾಸಭಾ ಅಧ್ಯಕ್ಷರಾದ ಅಶೋಕ ಹಾರನಹಳ್ಳಿ ನೇತೃತ್ವದಲ್ಲಿ ಎಲ್ಲಾ ಜಿಲ್ಲೆಗಳಿಂದ ಆಗಮಿಸಿದ ಸಮುದಾಯದ ಮುಖಂಡರು ರಾಜಕೀಯ ಸ್ಥಾನಮಾನದ ಕುರಿತು ಚರ್ಚಿಸಿದರು.

ಕಲಬುರಗಿ ಜಿಲ್ಲೆಯಲ್ಲಿ ವಿಪ್ರರು ಒಂದು ಲಕ್ಷ ಜನರಿದ್ದು, ಅದರಲ್ಲೂ ಕಲಬುರಗಿ ದಕ್ಷಿಣ ಕ್ಷೇತ್ರದಲ್ಲಿ 35 ರಿಂದ 40 ಸಾವಿರ ಮತದಾರರು ನಿರ್ಣಾಯಕರಾಗಿದ್ದಾರೆ. ಅದೇ ರೀತಿ, ಬೆಂಗಳೂರಿನ ಜಯನಗರ, ಮಲ್ಲೇಶ್ವರಂ, ಬಸವನಗುಡಿ, ರಾಜಾಜಿನಗರ, ಉಡುಪಿ, ಶಿವಮೊಗ್ಗ, ಮಂಗಳೂರು ಸೇರಿದಂತೆ ಒಟ್ಟು 25 ಕ್ಷೇತ್ರಗಳಲ್ಲಿ ಬ್ರಾಹ್ಮಣರು ಅಧಿಕ ಸಂಖ್ಯೆಯಲ್ಲಿದ್ದಾರೆ. ಅವರನ್ನು ಪರಿಗಣಿಸಿ ಈ ಬಾರಿ ಟಿಕೆಟ್ ನೀಡಬೇಕು ಎಂದು ಸಭೆಯಲ್ಲಿ ಒತ್ತಾಯಿಸಲಾಗಿದೆ.

ಇದನ್ನೂ ಓದಿ: ಬ್ರಾಹ್ಮಣ‌ ಸಮುದಾಯಕ್ಕೆ ಬಿಜೆಪಿಯಿಂದ ಮೋಸ, ಕುಮಾರಸ್ವಾಮಿಯಿಂದ ಅಲ್ಲ: ಶಾಸಕ ರವೀಂದ್ರ ಶ್ರೀಕಂಠಯ್ಯ

ರಾಜಕೀಯ ಪಕ್ಷಗಳಿಗೆ ಅಧಿಕೃತ ಮನವಿ: ಈಗಾಗಲೇ ರಾಜಕೀಯ ಪಕ್ಷಗಳ ವರಿಷ್ಠರೊಂದಿಗೆ ಔಪಚಾರಿಕವಾಗಿ ಮಾತುಕತೆ ನಡೆಸಿ ಮನವಿ ಮಾಡಲಾಗಿದೆ. ಶೀಘ್ರದಲ್ಲೇ ಪತ್ರದ ಮುಖೇನ ಅಧಿಕೃತವಾಗಿ ಟಿಕೆಟ್ ನೀಡುವಂತೆ ಒತ್ತಾಯಿಸಲಾಗುವುದು ಎಂದು ಸಭೆಯಲ್ಲಿ ಅಶೋಕ ಹಾರನಹಳ್ಳಿ ಹೇಳಿದರು.

ಇದನ್ನೂ ಓದಿ: ಬ್ರಾಹ್ಮಣ ಸಮುದಾಯವೂ ಸೇರಿ ನಾನು ಯಾವುದೇ ಸಮಾಜಕ್ಕೆ ಅಗೌರವ ತೋರಿಲ್ಲ: ಹೆಚ್​ಡಿಕೆ ಸ್ಪಷ್ಟನೆ

ವೋಟ್ ಬ್ಯಾಂಕ್​ನಂತೆ ಬಳಕೆ: ಮಹಾಸಭಾದ ಉಪಾಧ್ಯಕ್ಷ ಸಿ.ಕೆ.ರಾಮಮೂರ್ತಿ ಮಾತನಾಡಿ, "ಕೆಲ ಭಾಗದಲ್ಲಿ ಸಮುದಾಯದ ನಾಯಕರು ಶಾಸಕರಾಗಿ, ವಿಧಾನ ಪರಿಷತ್ತಿನ ಸದಸ್ಯರಾಗಿ, ಸಂಸದರು, ಸಚಿವರಾಗಿ ಸಾರ್ವಜನಿಕ ಸೇವೆ ಸಲ್ಲಿಸಿದ್ದಾರೆ. ಆದರೆ, ಸದ್ಯದ ಪರಿಸ್ಥಿತಿಯಲ್ಲಿ ರಾಜಕೀಯ ಪಕ್ಷಗಳು ಬ್ರಾಹ್ಮಣರನ್ನು ಮತ ಬ್ಯಾಂಕ್‌ ರೀತಿ ಬಳಸಿಕೊಳ್ಳುತ್ತಿದ್ದಾರೆ. ರಾಜಕೀಯ ಸ್ಥಾನಮಾನ ಕಲ್ಪಿಸುತ್ತಿಲ್ಲ" ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದನ್ನೂ ಓದಿ: ಏಳು ದೊಡ್ಡ ಧರ್ಮಗಳು, 3500 ಜಾತಿ, 19 ಸಾವಿರ ಭಾಷೆ ಇರುವ ದೇಶ ನಮ್ಮದು: ಬಿ.ಕೆ. ಹರಿಪ್ರಸಾದ್

ಬೆಂಗಳೂರಿನ ಹಲವೆಡೆ ಹೆಚ್ಚು ಮಾತದಾರರು: ಬೆಂಗಳೂರಿನಲ್ಲಿಯೇ ಹಲವು ವಿಧಾನಸಭಾ ಕ್ಷೇತ್ರಗಳಲ್ಲಿ ಬ್ರಾಹ್ಮಣ ಸಮುದಾಯದ ಮತದಾರರು ಹೆಚ್ಚಿದ್ದಾರೆ. ಕೇವಲ ಬಿಜೆಪಿ ಮಾತ್ರವಲ್ಲದೇ, ಎಲ್ಲಾ ಪಕ್ಷಗಳು ಜಾತಿ-ಭೇದವಿಲ್ಲದೆ ಬ್ರಾಹ್ಮಣರಿಗೆ ರಾಜಕೀಯ ಶಕ್ತಿ ತುಂಬಲು ಮುಂದೆ ಬರಬೇಕು ಎಂದು ಒತ್ತಾಯಿಸಿದರು. ಮಹಾಸಭಾದ ಸಂಘಟನಾ ಕಾರ್ಯದರ್ಶಿ ರಾಘವೇಂದ್ರ ಭಟ್ ಸೇರಿದಂತೆ ಪ್ರಮುಖರು ಸಭೆಯಲ್ಲಿ ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.