ETV Bharat / state

ನರ, ಮಾನಸಿಕ ರೋಗಿಗಳ ಸಂಖ್ಯೆ ಹೆಚ್ಚಳ ಕಳವಳಕಾರಿ: ಸಚಿವ ಸುಧಾಕರ್ - T MANAS

ನಿಮ್ಹಾನ್ಸ್‌ ನೇತೃತ್ವದಲ್ಲಿ ಬ್ರೈನ್‌ ಹೆಲ್ತ್‌ ಇನಿಷೆಯೇಟಿವ್‌ ಕಾರ್ಯಕ್ರಮ ನಡೆಯಿತು.

Etv Bharat
Etv Bharat
author img

By

Published : Dec 9, 2022, 7:49 PM IST

ಬೆಂಗಳೂರು: ಮಾನಸಿಕ ಆರೋಗ್ಯ ಉತ್ತಮವಾಗಿದ್ದರೆ ಮಾತ್ರ ಮನುಷ್ಯ ಸದೃಢನಾಗಿರುತ್ತಾನೆ. ಇತ್ತೀಚಿನ 10 ವರ್ಷಗಳಲ್ಲಿ ನರ ಹಾಗೂ ಮಾನಸಿಕ ರೋಗಿಗಳ ಸಂಖ್ಯೆ ಹೆಚ್ಚುತ್ತಿರುವುದು ಆತಂಕದ ವಿಷಯ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಹೇಳಿದ್ದಾರೆ. ಬೆಂಗಳೂರಿನಲ್ಲಿ ನಿಮ್ಹಾನ್ಸ್‌ ನೇತೃತ್ವದಲ್ಲಿ ನಡೆದ ಬ್ರೈನ್‌ ಹೆಲ್ತ್‌ ಇನಿಷೆಯೇಟಿವ್‌ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಎಷ್ಟು ವರ್ಷ ಬದುಕುತ್ತೇವೆ ಅನ್ನುವುದರ ಜತೆಗೆ ಹೇಗೆ ಬದುಕುತ್ತೇವೆ ಅನ್ನುವುದು ಬಹಳ ಮುಖ್ಯ. ಮಾನಸಿಕ ಆರೋಗ್ಯದಲ್ಲಿ ಏರುಪೇರು, ಮನುಷ್ಯನ ಆರೋಗ್ಯದಲ್ಲಿ ಸಮಸ್ಯೆ ಸೃಷ್ಟಿಸುವ ಜತೆಗೆ ಆತಂಕ ತರುತ್ತಿದೆ. ಬೆಂಗಳೂರಿನಲ್ಲಿ ನಿಮ್ಹಾನ್ಸ್‌ ಸಂಸ್ಥೆ ಇರುವುದು ನಮ್ಮ ಸೌಭಾಗ್ಯ. ಸಾಂಕ್ರಾಮಿಕವಲ್ಲದ ರೋಗಗಳಿಂದಲೂ ಬ್ರೈನ್‌ಗೆ ಸಂಬಂಧಿಸಿದ ಕಾಯಿಲೆಗಳು ಹೆಚ್ಚಾಗುತ್ತಿವೆ. ಕಳೆದ 10 ವರ್ಷಗಳಿಂದ ಮಾನಸಿಕ, ನರರೋಗಗಳು, ಸ್ಟ್ರೋಕ್‌, ತಲೆನೋವಿನಿಂದ ನರಳುತ್ತಿರುವ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಅಂಕಿಅಂಶಗಳ ಪ್ರಕಾರ, ಮಾನಸಿಕ ರೋಗದಿಂದ ಸುಮಾರು 7-8% ಜನರು ಸಾವಿಗೀಡಾಗುತ್ತಿದ್ದು, ಸಾವಿನ ಅಂಶಗಳ ಪೈಕಿ 2ನೇ ಸ್ಥಾನ ಪಡೆದಿದೆ ಎಂದು ಹೇಳಿದರು.

ಮಾನಸಿಕ ರೋಗಗಳಿಗೆ ಸಂಬಂಧಿಸಿದಂತೆ ಜಾಗೃತಿಯನ್ನು ಭಾರತ ಸರ್ಕಾರ T MANAS ರಾಷ್ಟ್ರೀಯ ಅಭಿಯಾನ ಮಾಡುತ್ತಿದೆ. ರಾಜ್ಯ ಸರ್ಕಾರ ಹಬ್‌ & ಸ್ಪೋಕ್‌ ಮಾಡೆಲ್‌ ಮೂಲಕ ಈಗಾಗಲೇ ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರದಲ್ಲಿ ನಿಮ್ಹಾನ್ಸ್‌ ನೆರವಿನೊಂದಿಗೆ ಪೈಲಟ್‌ ಪ್ರಾಜೆಕ್ಟ್‌ ಮಾಡುತ್ತಿದೆ. ಈ ಸೇವೆಯನ್ನು ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲ ಕಡೆ ಸಿಗುವಂತೆ ಮಾಡಲು ಯೋಜನೆ ರೂಪಿಸಲಾಗಿದೆ ಎಂದರು.

ಪಿಎಚ್‌ ಸಿ ವೈದ್ಯರಿಗೆ ಮಾನಸಿಕ ರೋಗಿಗಳಿಗೆ ಕೌನ್ಸೆಲಿಂಗ್ ಹಾಗೂ ಚಿಕಿತ್ಸೆ ನೀಡುವ ಬಗ್ಗೆ ಈಗಾಗಲೇ 3 ತಿಂಗಳ ತರಬೇತಿ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಎಎನ್‌ಎಂ, ಸಿಎಚ್‌ಒಗಳಿಗೆ ಹಾಗೂ ಆಶಾ ಕಾರ್ಯಕರ್ತೆಯರಿಗೆ ಈ ಸಂಬಂಧ ತರಬೇತಿ ನೀಡಿ ಮಾನಸಿಕ ರೋಗಿಗಳಿಗೆ ಹೇಗೆ ಚಿಕಿತ್ಸೆ ನೀಡುವ ಕುರಿತು ಯೋಜನೆ ರೂಪಿಸಲಾಗಿದೆ ಎಂದು ಸಚಿವು ಸುಧಾಕರ್ ತಿಳಿಸಿದರು.

ಇದನ್ನೂಓದಿ: ಏನಿದು ಆಯುಷ್ಮಾನ್ ಭಾರತ್ ಯೋಜನೆ? ; ಅರ್ಹರು ಯಾರು?

ETV Bharat Logo

Copyright © 2025 Ushodaya Enterprises Pvt. Ltd., All Rights Reserved.