ETV Bharat / state

ಕಾರು ಹೊಂದಿರುವವರ ಬಿಪಿಎಲ್ ಕಾರ್ಡ್ ರದ್ದು ಆದೇಶಕ್ಕೆ ಸರ್ಕಾರ ಬ್ರೇಕ್ - car owners bpl card cacel order

ನಾಲ್ಕು ಚಕ್ರದ ವೈಯಕ್ತಿಕ ವಾಹನ ಹೊಂದಿರುವವರ ಬಿಪಿಎಲ್ ಕಾರ್ಡ್ ರದ್ದು ಮಾಡುವ ಆದೇಶಕ್ಕೆ ರಾಜ್ಯ ಸರ್ಕಾರ ತಡೆ ನೀಡಿದೆ. ಈ ಸಂಬಂಧ ಆಹಾರ ಹಾಗೂ ನಾಗರಿಕ ಪೂರೈಕೆ ಇಲಾಖೆ ಆಯುಕ್ತರು ಆದೇಶ ಹೊರಡಿಸಿದ್ದಾರೆ.

break-to-government-order-of-cancel-car-owners-bpl-card
ಬಿಪಿಎಲ್ ಕಾರ್ಡ್ ರದ್ದು ಆದೇಶ
author img

By

Published : Aug 25, 2022, 10:44 PM IST

ಬೆಂಗಳೂರು: ನಾಲ್ಕು ಚಕ್ರದ ವೈಯಕ್ತಿಕ ವಾಹನ ಹೊಂದಿರುವ ಅಂತ್ಯೋದಯ ಅನ್ನ/ಆದ್ಯತಾ ಪಡಿತರ ಚೀಟಿದಾರರ ಮೇಲೆ ಕ್ರಮ ಕೈಗೊಳ್ಳುವ ಆದೇಶವನ್ನು ಸರ್ಕಾರ ತಡೆ ಹಿಡಿದಿದೆ. ಆಹಾರ ಹಾಗೂ ನಾಗರಿಕ ಪೂರೈಕೆ ಇಲಾಖೆ ಆಯುಕ್ತರು ಈ ಸಂಬಂಧ ಆದೇಶ ಹೊರಡಿಸಿದ್ದು, ಸದ್ಯ ಬಿಪಿಎಲ್ ಕಾರ್ಡ್ ರದ್ದು ಆದೇಶಕ್ಕೆ ಬ್ರೇಕ್ ಬಿದ್ದಿದೆ.

ಜುಲೈ 12, 2022ರಲ್ಲಿ ನಾಲ್ಕು ಚಕ್ರದ ವೈಯಕ್ತಿಕ ವಾಹನ ಹೊಂದಿರುವ ಬಿಪಿಎಲ್ ಕಾರ್ಡ್​ಗಳನ್ನು ಎಪಿಎಲ್ ಪಡಿತರ ಕಾರ್ಡ್​ಗಳನ್ನಾಗಿ ಪರಿವರ್ತಿಸಿ ವರದಿ ನೀಡಲು ಸೂಚಿಸಲಾಗಿತ್ತು. ನಾಲ್ಕು ಚಕ್ರಗಳ ವಾಹನ ಹೊಂದಿರುವವರು ಅಂತ್ಯೋದಯ, ಬಿಪಿಎಲ್‌ ಪಡಿತರ ಚೀಟಿ ಹೊಂದಿದ್ದರೆ, ಅಂಥವರು ದಂಡ ರಹಿತವಾಗಿ 2019ರ ಸೆ. 3ರೊಳಗೆ ಆಯಾ ತಾಲೂಕು ಕಚೇರಿಯ ಆಹಾರ ಶಾಖೆಗೆ ತೆರಳಿ ಪಡಿತರ ಕಾರ್ಡ್​​ ವಾಪಸ್‌ ಕೊಟ್ಟು, ರದ್ದು ಮಾಡಿಸುವಂತೆ ಸರ್ಕಾರ ಸೂಚನೆ ನೀಡಿತ್ತು.

ಬಳಿಕ ಅವಧಿಯನ್ನು ಅ.15ರ ತನಕ ವಿಸ್ತರಿಸಲಾಗಿತ್ತು. ಹೀಗೆ ಒಟ್ಟು ನಾಲ್ಕಾರು ಬಾರಿ ಸರೆಂಡರ್‌ಗೆ ಅವಕಾಶ ನೀಡಲಾಗಿತ್ತು. ಆದರೂ ರದ್ದು ಮಾಡದೇ ಸೌಲಭ್ಯ ಪಡೆಯುತ್ತಿರುವ ಅನರ್ಹ ಪಡಿತರ ಚೀಟಿದಾರರಿಗೆ ದಂಡ ವಿಧಿಸಲು ಕ್ರಮ ಕೈಗೊಳ್ಳಲಾಗಿತ್ತು.

ನಾಲ್ಕು ಚಕ್ರಗಳ ವಾಹನ‌ ಹೊಂದಿರುವ ರಾಜ್ಯದ 12,584 ಪಡಿತರ ಚೀಟಿದಾರರಿಗೆ ದಂಡ ಪಾವತಿಸುವಂತೆ ನೋಟಿಸ್‌ ಜಾರಿ ಮಾಡಲಾಗಿತ್ತು. ಸರ್ಕಾರವು ಈ ಪಡಿತರ ಚೀಟಿ ಹಿಂದೊಪ್ಪಿಸಲು ಹಲವು ಅವಕಾಶ ನೀಡಿದ್ದರೂ ನಿರ್ಲಕ್ಷಿಸಿದ ಅನರ್ಹರ ಮಾಹಿತಿ ಸಂಗ್ರಹಿಸಿ, ಅವರಿಂದ ಈ ತನಕ ಪಡೆದ ಆಹಾರ ಸಾಮಗ್ರಿಗೆ ದಂಡ ವಸೂಲಿ ಮಾಡಲು ನಿರ್ಧರಿಸಿತ್ತು. ಆಹಾರ ಇಲಾಖೆಯ ಈ ಆದೇಶದ ವಿರುದ್ಧ ಸಾಕಷ್ಟು ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಇದೀಗ ಆ ಆದೇಶವನ್ನು ಸರ್ಕಾರ ತಡೆ ಹಿಡಿದಿದೆ.

ಇದನ್ನೂ ಓದಿ: ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ ಶಾಲೆಗಳಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ: ಸಚಿವ ಬಿ ಸಿ ನಾಗೇಶ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.