ETV Bharat / state

ರಾಜ್ಯ ವಿಧಾನಸಭೆ ಚುನಾವಣೆಗೆ ಬಿಆರ್​ಎಸ್​ ಸ್ಪರ್ಧಿಸಲ್ಲ.. ಜೆಡಿಎಸ್​ಗೆ ಬೆಂಬಲ: ಹೆಚ್​ಡಿ ಕುಮಾರಸ್ವಾಮಿ - ತೆಲಂಗಾಣ ಸಿಎಂ ಚಂದ್ರಶೇಖರ ರಾವ್

2023ರ ಕರ್ನಾಟಕ ವಿಧಾನಸಭೆ ಚುನಾವಣೆ ಹಾಗೂ 2024ರ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಆರ್​ಎಸ್ ಪಕ್ಷಗಳು ಒಟ್ಟಾಗಿ ಕೆಲಸ ಮಾಡಲಿವೆ ಎಂದು ಜೆಡಿಎಸ್​ ನಾಯಕ ಹೆಚ್​ಡಿ ಕುಮಾರಸ್ವಾಮಿ ತಿಳಿಸಿದರು.

brs-is-not-contesting-the-state-assembly-elections-says-hd-kumaraswamy
ರಾಜ್ಯ ವಿಧಾನಸಭೆ ಚುನಾವಣೆಗೆ ಬಿಆರ್​ಎಸ್​ ಸ್ಪರ್ಧಿಸಲ್ಲ... ಜೆಡಿಎಸ್​ಗೆ ಬೆಂಬಲ: ಹೆಚ್​ಡಿ ಕುಮಾರಸ್ವಾಮಿ
author img

By

Published : Oct 6, 2022, 5:26 PM IST

ಬೆಂಗಳೂರು: ಕರ್ನಾಟಕದ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಆಸಕ್ತಿ ಬಿಆರ್​ಎಸ್ (ಭಾರತ್​ ರಾಷ್ಟ್ರ ಸಮಿತಿ)ಗೆ ಇಲ್ಲ.‌ ಆದರೆ, ಜೆಡಿಎಸ್‌‌ ಅಭ್ಯರ್ಥಿಗಳನ್ನೇ ಬೆಂಬಲಿಸುವ ನಿರ್ಧಾರಕ್ಕೆ ತೆಲಂಗಾಣ ಮುಖ್ಯಮಂತ್ರಿಗಳು ಬಂದಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2024ರ ಲೋಕಸಭೆಯಲ್ಲಿ 150 ಕ್ಷೇತ್ರದಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ತೆಲಂಗಾಣ ಸಿಎಂ ಚಂದ್ರಶೇಖರ ರಾವ್ ಚಿಂತನೆ ನಡೆಸಿದ್ದಾರೆ. ಅದರಂತೆ ರಾಜ್ಯದ ಗಡಿ ಭಾಗದಲ್ಲಿ ಎರಡು ಮೂರು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಹಾಕಲಿದ್ದಾರೆ. ತಮ್ಮ ಶಾಸಕರ ಜೊತೆ ಸೇರಿ ಕೆಸಿಆರ್​ ಅವರೊಂದಿಗೆ ಹಲವಾರು ವಿಷಯಗಳ ಕುರಿತು ಚರ್ಚೆ ನಡೆಸಿದ್ದೇನೆ. ಎಲ್ಲವೂ ಹೇಳಲು ಆಗುವುದಿಲ್ಲ ಎಂದರು.

2006ರ 20 ತಿಂಗಳ ಆಡಳಿತ ನೋಡಿದ್ದೇನೆ. ಈಗಿನ ಸರ್ಕಾರಗಳು ನಿಮ್ಮ ವಿರುದ್ಧ ಏನೇ ಆರೋಪ ಮಾಡಿದರೂ ನಿಮಗೆ ಯಾವುದೇ ಕಪ್ಪು ಚುಕ್ಕೆ ಇಲ್ಲದ ರೀತಿ ಆಡಳಿತ ನಡೆಸಿದ್ದೀರಿ. ಅದೇ ರೀತಿ ಮುಂದುವರೆಯಿರಿ ಎಂದು ಅವರು ಹೇಳಿದ್ದಾರೆ. 2023ರ ಕರ್ನಾಟಕ ವಿಧಾನಸಭೆ ಚುನಾವಣೆ ಹಾಗೂ 2024ರ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಆರ್​ಎಸ್ ಪಕ್ಷಗಳು ಒಟ್ಟಾಗಿ ಕೆಲಸ ಮಾಡಲಿವೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಹೊರತಾದ ಪೂರ್ಣ ಬಹುಮತದ ಸರ್ಕಾರ ರಚನೆ ಮಾಡುವ ಬಗ್ಗೆ ಎರಡೂ ಪಕ್ಷಗಳು ಸದೃಢವಾಗಿ ಕೆಲಸ ಮಾಡಲಿವೆ. ಸಂಪೂರ್ಣ ಬೆಂಬಲ ನೀಡುವುದಾಗಿ ಕೆಸಿಆರ್ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.

ಲೋಕಸಭೆ ಚುನಾವಣೆಗೆ ಹೊಸ ದಿಕ್ಸೂಚಿ: 2023ರ ಚುನಾವಣೆಯಲ್ಲಿ ಫಲಿತಾಂಶ ಜೆಡಿಎಸ್ ಪರವಾಗಿ ಬಂದರೆ, ಅದು 2024ರ ಲೋಕಸಭೆ ಚುನಾವಣೆಗೆ ಹೊಸ ದಿಕ್ಸೂಚಿಯಾಗಲಿದೆ. ಕರ್ನಾಟಕವೂ ರಾಷ್ಟ್ರ ರಾಜಕಾರಣದಲ್ಲಿ ಪ್ರಬಲ ಶಕ್ತಿಯಾಗಿ ಹೊರಹೊಮ್ಮಲಿದೆ. ಕರ್ನಾಟಕದಲ್ಲಿ ಕನ್ನಡಿಗರದ್ದೇ ಆದ ಸ್ವಾಭಿಮಾನದ ಸರ್ಕಾರ ತರುವ ನಿಟ್ಟಿನಲ್ಲಿಯೂ ನಾವಿಬ್ಬರೂ ಚರ್ಚೆ ನಡೆಸಿದ್ದೇವೆ ಎಂದು ಹೆಚ್​ಡಿಕೆ ಹೇಳಿದರು.

ದೃಢ ನಾಯಕತ್ವದ ಕೆಸಿಆರ್ ತಮ್ಮ ಸಂಕಲ್ಪ ಬಲದಿಂದಲೇ ತೆಲಂಗಾಣದ ಜನರನ್ನು ಒಟ್ಟಾಗಿ ಕರೆದೊಯ್ದು ಪ್ರತ್ಯೇಕ ರಾಜ್ಯದ ಸಾಧನೆ ಮಾಡಿದರು. ನಂತರ ತಮ್ಮ ಆಡಳಿತಾವಧಿಯಲ್ಲಿ ಅನೇಕ ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತಂದರು. ರೈತಬಂಧು, ದಲಿತ ಬಂಧು ದಂತಹ ಕ್ರಾಂತಿಕಾರಿ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತಂದು ಸರ್ಕಾರದ ಕಾರ್ಯಕ್ರಮಗಳು ಪ್ರತಿ ಜನರಿಗೂ ತಲುಪುವಂತೆ ಮಾಡಿದರು. ಇದೇ ರೀತಿಯಲ್ಲಿ ಕರ್ನಾಟಕದಲ್ಲಿ ಜೆಡಿಎಸ್ ಕೂಡ ಮಾಡಿತ್ತು. ಮುಂದಿನ ದಿನಗಳಲ್ಲಿ ಅಂತಹ ಜನಪರ ಕಾರ್ಯಕ್ರಮಗಳನ್ನು ಕರ್ನಾಟಕದಲ್ಲೂ ಜಾರಿಗೆ ತರಲಾಗುವುದು ಎಂದು ತಿಳಿಸಿದರು.

ರಾಷ್ಟ್ರ ರಾಜಕಾರಣದಲ್ಲಿ ಪರ್ಯಾಯ ರಾಜಕೀಯ ಶಕ್ತಿಯ ಅಗತ್ಯ ಇತ್ತು. ಕೆಲವೇ ಪಕ್ಷಗಳ ರಾಜಕೀಯ ಏಕಸ್ವಾಮ್ಯತೆಗೆ ಅಂತ್ಯ ಹಾಡುವ ನಿಟ್ಟಿನಲ್ಲಿ ಹೊಸ ರಾಜಕೀಯ ಶಕ್ತಿ ಬೇಕಿತ್ತು. ಅದಕ್ಕೆ ಬಿಆರ್​​ಎಸ್ ಒಂದು ಪ್ರಬಲ ಪರ್ಯಾಯ ಎನ್ನುವುದು ನನ್ನ ಭಾವನೆ. ಮುಖ್ಯವಾಗಿ ದೇಶದ ಸಂಪತ್ತು ಕೆಲವರಲ್ಲಿಯೇ ಸಂಗ್ರಹವಾಗದೇ ಅದು ಸಮಾನ ಹಂಚಿಕೆ ಆಗಬೇಕು. ಸಾಮಾನ್ಯನಿಗೂ ಆ ಸಂಪತ್ತಿನಲ್ಲಿ ಪಾಲಿರಬೇಕು ಎನ್ನುವ ಗುರಿಯೊಂದಿಗೆ ಅವರು ಕೆಲಸ ಮಾಡುತ್ತಿದ್ದಾರೆ ಎಂದರು.

ಕನ್ನಡ ರಾಜ್ಯೋತ್ಸವದಂದು ಪಂಚರತ್ನಕ್ಕೆ ಚಾಲನೆ: ಹತ್ವಾಕಾಂಕ್ಷೆಯ ಪಂಚರತ್ನ ರಥಯಾತ್ರೆಗೆ ನವೆಂಬರ್ 1ರ ಕನ್ನಡ ರಾಜ್ಯೋತ್ಸವ ದಿನದೊಂದು ಚಾಲನೆ ನೀಡಲಾಗುವುದು. ಈಗಾಗಲೇ ಪೂರ್ವ ಸಿದ್ಧತೆ ಕಾರ್ಯಗಳು ನಡೆಯುತ್ತಿವೆ. ಇದಕ್ಕಾಗಿ ವಾಹನಗಳು ಸಹ ಸಿದ್ದಗೊಳ್ಳುತ್ತಿವೆ ಎಂದು ಹೆಚ್​ಡಿಕೆ ಹೇಳಿದರು.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಈಗಾಗಲೇ ಸಂಘಟನೆ‌ ಆರಂಭಿಸಿದ್ದೇವೆ. ಉತ್ತರ ಕರ್ನಾಟಕ ಭಾಗದಲ್ಲಿ ಜೆಡಿಎಸ್ ಅಸ್ತಿತ್ವ ಏನು ಎಂಬುದನ್ನು ಈ‌ ಕಾರ್ಯಕ್ರಮಗಳ ಮೂಲಕ ತೋರಿಸುತ್ತೇವೆ. ಮಳೆಯಿಂದಾಗಿ ಜನತಾ ಮಿತ್ರ ಸಮಾರೋಪ ಕಾರ್ಯಕ್ರಮ ಎರಡು ಬಾರಿ ಮುಂದೂಡಿಕೆ ಆಗಿತ್ತು. ಈಗ ಅಕ್ಟೋಬರ್ 8ಕ್ಕೆ ಜನತಾ‌ಮಿತ್ರ ಸಮಾರೋಪ ಸಮಾರಂಭ ಬಸವನಗುಡಿ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ಮದ್ಯಾಹ್ನ 3 ಗಂಟೆಗೆ ಆಯೋಜಿಸಿದ್ದೇವೆ. ಮುಂದಿನ ಬಿಬಿಎಂಪಿ ಚುನಾವಣಾ ಪ್ರಚಾರದ ಸಮಾವೇಶ ಕೂಡ ಇದೇ ಕಾರ್ಯಕ್ರಮದಿಂದ ಪ್ರಾರಂಭವಾಗಲಿದೆ ಎಂದು ತಿಳಿಸಿದರು.

ಸಿಎಂ ಬೊಮ್ಮಾಯಿ ವಿರುದ್ಧ ಗರಂ: ಇದೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಟೀಕಿಸಿದ ಕುಮಾರಸ್ವಾಮಿ, ಸಿಎಂಗೆ ಮೆಚ್ಯುರಿಟಿ ಇದೆಯೇ ಎಂದು ಕೇಳಬೇಕಿದೆ. ಶಾಸಕರ ಶಿಷ್ಟಾಚಾರ ನೀವೇ ಮಾಡಿದ್ದು, ಆದರೆ ಈಗ ಏನಾಯ್ತು. ಕಲಾವಿದರ ಕೋಟಾದಿಂದ ಬಂದವರಿಗೆ 50 ಕೋಟಿ ಅನುದಾನ ಕೊಡುವುದೆಂದರೆ ಹೇಗೆ?. ಕಾರ್ಯಕ್ರಮ ರದ್ದಾಗಿದೆ ಅಂತ ಹಿಂದಿನ ದಿನ ಹೇಳಿದ್ದಾರೆ. ಆದರೆ ಮತ್ತೆ ಯಾಕೆ ಕಾರ್ಯಕ್ರಮ ಮಾಡಿದರು ಎಂದು ಗರಂ ಆದರು.

ಸರ್ಕಾರಿ ಕಾರ್ಯಕ್ರಮ ಶಾಸಕರ ನೇತೃತ್ವದಲ್ಲಿ ನಡೆಯಬೇಕು. ನಾನು ಇದನ್ನು ಇಲ್ಲಿಗೆ ಬಿಡುವುದಿಲ್ಲ. ಕಲ್ಲು ತೂರಾಟ ಯಾಕೆ ಆಯ್ತು?. ಬೇರೊಂದು ಕಾರ್ಯಕ್ರಮಕ್ಕೆ ಬೇರೆ ಮಾರ್ಗದಲ್ಲಿ ಹೋಗಬಹುದಿತ್ತು. ಶಾಂತಿಯುತವಾಗಿ ಇದ್ದವರನ್ನು ಲಾಠಿ ಚಾರ್ಜ್ ಮಾಡಿದ್ದು ಪೊಲೀಸರು. ಗಲಭೆ ಸೃಷ್ಟಿ ಮಾಡಿದ್ದು ಯಾರು ಹಾಗಾದರೆ?. ತಾಕತ್ ಇದೆ ಅನ್ನುವ ಭಾಷಣ ಮಾಡಿದರಲ್ಲಾ, ನಿಮ್ಮ ಶಾಸಕರನ್ನು ಹದ್ದು ಬಸ್ತಿನಲ್ಲಿ ಇಡದೇ ನನ್ನ ಬಗ್ಗೆ ಮಾತನಾಡ್ತೀರಾ ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ಜೆಡಿಎಸ್ ಅಧಿಕಾರಕ್ಕೆ ಬಂದರೆ ಕೃಷಿ ಪಂಪ್​ಸೆಟ್​ಗಳಿಗೆ 24/7 ಉಚಿತ ವಿದ್ಯುತ್ : ಹೆಚ್ ಡಿ ಕುಮಾರಸ್ವಾಮಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.