ಬೆಂಗಳೂರು: ನಾಯಿ ಮೇಲೆ ಹಲ್ಲೆ ನಡೆಸಿ ವಿಕೃತಿ ಮೆರೆದಿರುವ ಘಟನೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಪ್ರಾಣಿಪ್ರಿಯರ ಆಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.
ನಾಯಿಯ ಮೇಲೆ ವಿಕೃತಿ ಮೆರೆದ ವಿಡಿಯೋವನ್ನು ವ್ಯಕ್ತಿ ತನ್ನ ಸಾಮಾಜಿಕ ಖಾತೆಯಲ್ಲಿ ಪೋಸ್ಟ್ ಮಾಡಿದ್ದು, ಇದಕ್ಕೆ ನಟ ಅನಿರುದ್ಧ ವಿರೋಧ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಈ ರೀತಿ ವಿಕೃತಿ ಮೆರೆದ ವ್ಯಕ್ತಿಯ ಮೇಲೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.