ETV Bharat / state

ಸಿಎಂ ರಾಜಕೀಯ ಕಾರ್ಯದರ್ಶಿ ಸಂತೋಷ್ ​ ಆತ್ಮಹತ್ಯೆಗೆ ಯತ್ನ : ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಬಿಎಸ್​ವೈ

ಇತ್ತೀಚಿನ ದಿನಗಳಲ್ಲಿ ಅರಸೀಕೆರೆ ವಿಧಾನಸಭಾ ಕ್ಷೇತ್ರವನ್ನು ಹೇಗಾದರೂ ಮಾಡಿ ಮುಂದಿನ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡಿ ಶಾಸಕನಾಗಬೇಕು ಎಂಬ ಆಸೆಯನ್ನು ಹೊತ್ತಿದ್ದ ಸಂತೋಷ್ ಮೂರ್ನಾಲ್ಕು ತಿಂಗಳಿನಿಂದ ಅರಸೀಕೆರೆ ಕ್ಷೇತ್ರದ ಸಾಮಾಜಿಕ ಚಟುವಟಿಕೆಗಳಲ್ಲಿ ಮತ್ತು ರಾಜಕೀಯವಾಗಿ ಮುಂಚೂಣಿಯಲ್ಲಿದ್ದರು.

ಬಿಎಸ್​ ಯಡಿಯೂರಪ್ಪ
ಬಿಎಸ್​ ಯಡಿಯೂರಪ್ಪ
author img

By

Published : Nov 28, 2020, 3:18 AM IST

Updated : Nov 28, 2020, 3:52 PM IST

ಬೆಂಗಳೂರು: ಆತ್ಮಹತ್ಯೆಗೆ ಯತ್ನಿಸಿರುವ ತಮ್ಮ ಆಪ್ತ ಹಾಗೂ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್​ ದಾಖಲಾಗಿರುವ ಎಂಎಸ್​ ರಾಮಯ್ಯ ಆಸ್ಪತ್ರೆಗೆ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಭೇಟಿ ನೀಡಿ ವೈದ್ಯರಿಂದ ಸಂತೋಷ್ ಆರೋಗ್ಯ ಸ್ಥಿತಿ ಬಗ್ಗೆ ಮಾಹಿತಿ ಪಡೆದಿದ್ದಾರೆ.

ಶುಕ್ರವಾರ ಸಂಜೆ 7:30ರ ಸಮಯದಲ್ಲಿ ತಮ್ಮ ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮಲಗಿದ್ದ ಅವರ ಪತ್ನಿ ಜಾಹ್ನವಿ ಎಬ್ಬಿಸಲು ಪ್ರಯತ್ನಿಸಿದ ಸಂದರ್ಭದಲ್ಲಿ ಸಂತೋಷ್ ನಿದ್ದೆ ಮಾತ್ರೆ ಸೇವಿಸಿರುವುದು ಬೆಳಕಿಗೆ ಬಂದಿದೆ.​

ಈ ವಿಷಯ ತಿಳಿದ ತಕ್ಷಣ ಸಿಎಂ ಯಡಿಯೂರಪ್ಪ ತಮ್ಮ ಮಗ ಹಾಗೂ ಸಂಸದ ಬಿವೈ ರಾಘವೇಂದ್ರ ಅವರ ಜೊತೆ ರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿ ಸಂತೋಷ್ ಅರೋಗ್ಯ ವಿಚಾರಿಸಿದ್ದಾರೆ. ನಂತರ ಪತ್ರಕರ್ತರೊಂದಿಗೆ ಮಾತನಾಡಿ "ಸಂತೋಷ್​ಗೆ ವೈದ್ಯರು ಚಿಕಿತ್ಸೆ ನೀಡುತಿದ್ದಾರೆ, ಯಾವುದೇ ಸಮಸ್ಯೆ ಇಲ್ಲ ಎಂದು ತಿಳಿಸಿದ್ದಾರೆ. ಸಂತೋಷ್ ಕುಟುಂಬದವರ ಜೊತೆ ಮಾತನಾಡಿೆದ್ದೇನೆ. ನಿನ್ನೆತಾನೇ ಚೆನ್ನಾಗಿದ್ದ, ಬೆಳಿಗ್ಗೆಯೂ ನನ್ನ ಜೊತೆ ಒಂದು ಗಂಟೆಗೂ ಹೆಚ್ಚು ಕಾಲ ವಾಕಿಂಗ್ ಮಾಡಿ, ಸಾಕಷ್ಟು ಮಾತನಾಡಿದ್ದ, ಆದರೆ ಆತ್ಮಹತ್ಯೆಗೆ ಯಾಕೆ ಪ್ರಯತ್ನಿಸಿದ್ದಾನೋ ಗೊತ್ತಿಲ್ಲ" ಎಂದಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಅರಸೀಕೆರೆ ವಿಧಾನಸಭಾ ಕ್ಷೇತ್ರವನ್ನು ಹೇಗಾದರೂ ಮಾಡಿ ಮುಂದಿನ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡಿ ಶಾಸಕನಾಗಬೇಕು ಎಂಬ ಆಸೆಯನ್ನು ಹೊತ್ತಿದ್ದ ಸಂತೋಷ್ ಮೂರ್ನಾಲ್ಕು ತಿಂಗಳಿನಿಂದ ಅರಸೀಕೆರೆ ಕ್ಷೇತ್ರದ ಸಾಮಾಜಿಕ ಚಟುವಟಿಕೆಗಳಲ್ಲಿ ಮತ್ತು ರಾಜಕೀಯವಾಗಿ ಮುಂಚೂಣಿಯಲ್ಲಿದ್ದರು.

ಆಸ್ಪತ್ರೆಗೆ ಯಡಿಯೂರಪ್ಪ ಭೇಟಿ

ಮೇ 28ರಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಹಾಸನ ಜಿಲ್ಲೆಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳಿಗೆ ಸ್ಪಂದಿಸಿದ್ದರು. ಇಷ್ಟೇ ಅಲ್ಲದೆ ಜೆಡಿಎಸ್ ಶಾಸಕ ಶಿವಲಿಂಗೇಗೌಡ ಅವರನ್ನ ಪ್ರತಿ ಕಾರ್ಯಕ್ರಮಗಳಲ್ಲಿಯೂ ವಿರೋಧಿಸುತ್ತ ಬಂದಿದ್ದ ಸಂತೋಷ್, ಶಿವಲಿಂಗೇಗೌಡರ ಲೋಪದೋಷಗಳನ್ನು ಎತ್ತಿ ಹಿಡಿಯುವ ಮೂಲಕ ಅವರ ವಿರುದ್ಧ ಹರಿಹಾಯ್ದಿದ್ದರು.

ಇದಲ್ಲದೆ ಅರಸೀಕೆರೆ ಕ್ಷೇತ್ರಕ್ಕೆ ಬಂದ ಬಳಿಕ ಸ್ವಪಕ್ಷೀಯರ ಜೊತೆ ಹೊಂದಾಣಿಕೆ ಇಲ್ಲದೆ ಬಿಜೆಪಿ ಪಕ್ಷದಲ್ಲಿ ಎರಡು ಬಣಗಳಾಗಿತ್ತು. ಸಂತೋಷ್ ವಿರೋಧಿ ಬಣ ವಾಗಿರುವ ಮತ್ತೊಂದು ಬಿಜೆಪಿ ತಂಡ ಸಂತೋಷ್ ಸಾಂಸಾರಿಕ ಜೀವನದ ವಿಚಾರವನ್ನ ಎಳೆದು ಅವರಿಗೆ ಹಿಂದೆಯೇ ಅಪಮಾನ ಮಾಡಿದ್ದರು ಎಂದು ತಿಳಿದುಬಂದಿದೆ. ಇದಾದ ಬಳಿಕ ಅವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಜೊತೆಗೆ ಇತ್ತೀಚಿನ ದಿನಗಳಲ್ಲಿ ಮುಖ್ಯಮಂತ್ರಿ ಬಿಎಸ್​ವೈ ಜೊತೆಗಿನ ಒಡನಾಟದಲ್ಲಿ ಬಿರುಕು ಬಿಟ್ಟಿತ್ತು ಎಂಬ ಮಾತುಗಳು ಕೇಳಿಬಂದಿವೆ.

Last Updated : Nov 28, 2020, 3:52 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.