ETV Bharat / state

'ಸಿಂಪಲ್ ಸಿಎಂ'ಗೆ ಹುಟ್ಟು ಹಬ್ಬದ ಸಂಭ್ರಮ: ಶುಭ ಕೋರಿದ ಬಿಎಸ್​ವೈ, ಕಟೀಲ್ - ಸಿಎಂ ಹುಟ್ಟುಹಬ್ಬದ ಶುಭಾಶಯ ಕೋರಿದ ನಳಿನ್ ಕುಮಾರ್ ಕಟೀಲ್

'ಮುಖ್ಯಮಂತ್ರಿಗಳು, ಆತ್ಮೀಯರೂ ಆಗಿರುವ ಬಸವರಾಜ ಬೊಮ್ಮಾಯಿ ಅವರಿಗೆ ಜನ್ಮ ದಿನದ ಹಾರ್ದಿಕ ಶುಭಾಶಯಗಳು. ದೇವರ ಅನುಗ್ರಹ ಸದಾ ತಮ್ಮ ಮೇಲಿರಲಿ ಎಂದು ಹಾರೈಸುತ್ತೇನೆ' ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿ ಶುಭ ಕೋರಿದ್ದಾರೆ.

BS Yeddyurappa and nalin kumar kateel extends birthday wishes to CM Bommai
'ಸಿಂಪಲ್ ಸಿಎಂ'ಗೆ ಹುಟ್ಟು ಹಬ್ಬದ ಸಂಭ್ರಮ: ಶುಭ ಕೋರಿದ ಬಿಎಸ್​ವೈ, ಕಟೀಲ್
author img

By

Published : Jan 28, 2022, 9:29 AM IST

ಬೆಂಗಳೂರು: 62ನೇ ವಸಂತಕ್ಕೆ ಕಾಲಿಡುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಸಂಪುಟ ಸಹೋದ್ಯೋಗಿಗಳು ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.

  • ಮಾನ್ಯ ಮುಖ್ಯಮಂತ್ರಿಗಳು, ಆತ್ಮೀಯರೂ ಆಗಿರುವ ಶ್ರೀ ಬಸವರಾಜ ಬೊಮ್ಮಾಯಿ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರ ಅನುಗ್ರಹ ಸದಾ ತಮ್ಮ ಮೇಲಿರಲಿ ಎಂದು ಹಾರೈಸುತ್ತೇನೆ.@BSBommai pic.twitter.com/wDQ1SJt3is

    — B.S. Yediyurappa (@BSYBJP) January 28, 2022 " class="align-text-top noRightClick twitterSection" data=" ">

ಮುಖ್ಯಮಂತ್ರಿ ಆದ ನಂತರ ಬೊಮ್ಮಾಯಿ ಅವರಿಗೆ ಇದು ಚೊಚ್ಚಲ ಹುಟ್ಟು ಹಬ್ಬವಾಗಿದ್ದು, ಆಚರಣೆಯಂತಹ ವ್ಯವಸ್ಥೆ ಬದಿಗೊತ್ತಿ ಕೇವಲ ಶುಭಾಶಯ ಸ್ವೀಕರಿಸುತ್ತಿದ್ದಾರೆ. ಬೆಳಗ್ಗೆಯೇ ಬೊಮ್ಮಾಯಿ ಅವರ ರಾಜಕೀಯ ಗುರು, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿ ಶುಭ ಕೋರಿದ್ದಾರೆ. 'ಮುಖ್ಯಮಂತ್ರಿಗಳು, ಆತ್ಮೀಯರೂ ಆಗಿರುವ ಬಸವರಾಜ ಬೊಮ್ಮಾಯಿ ಅವರಿಗೆ ಜನ್ಮ ದಿನದ ಹಾರ್ದಿಕ ಶುಭಾಶಯಗಳು. ದೇವರ ಅನುಗ್ರಹ ಸದಾ ತಮ್ಮ ಮೇಲಿರಲಿ ಎಂದು ಹಾರೈಸುತ್ತೇನೆ' ಎಂದಿದ್ದಾರೆ.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕೂಡ ಟ್ವೀಟ್ ಮಾಡಿ ಸಿಎಂಗೆ ಶುಭಾಶಯ ಕೋರಿದ್ದಾರೆ. ಕರ್ನಾಟಕದ ಮುಖ್ಯಮಂತ್ರಿಗಳು, ಜನಾನುರಾಗಿ ಜನಸೇವಕರು ಹಾಗೂ ನಮ್ಮೆಲ್ಲರ ಮಾರ್ಗದರ್ಶಕರಾಗಿರುವ ಬಸವರಾಜ ಬೊಮ್ಮಾಯಿ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು ಎಂದು ಹಾರೈಸಿದ್ದಾರೆ.

  • ಕರ್ನಾಟಕದ ಮುಖ್ಯಮಂತ್ರಿಗಳು, ಜನಾನುರಾಗಿ ಜನಸೇವಕರು ಹಾಗೂ ನಮ್ಮೆಲ್ಲರ ಮಾರ್ಗದರ್ಶಕರಾಗಿರುವ ಸನ್ಮಾನ್ಯ ಶ್ರೀ ಬಸವರಾಜ ಎಸ್ ಬೊಮ್ಮಾಯಿ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.@BSBommai#HBDayBommai#HappyBirthdayBommai pic.twitter.com/5LDziRz9ur

    — Nalinkumar Kateel (@nalinkateel) January 28, 2022 " class="align-text-top noRightClick twitterSection" data=" ">

ಇದರೊಂದಿಗೆ ಬೊಮ್ಮಾಯಿ ಅವರ ಸಂಪುಟ ಸಹೋದ್ಯೋಗಿಗಳು, ರಾಜ್ಯ ಬಿಜೆಪಿ ನಾಯಕರು ಕೂಡ ಟ್ವೀಟ್ ಮಾಡಿ ಹುಟ್ಟುಹಬ್ಬದ ಶುಭ ಕೋರಿದ್ದಾರೆ. ಇನ್ನು ಬೆಳಗ್ಗೆಯೇ ಆರ್.ಟಿ ನಗರದ ಖಾಸಗಿ ನಿವಾಸಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ ನೀಡಿ ಸಿಎಂಗೆ ಹುಟ್ಟುಹಬ್ಬದ ಶುಭ ಕೋರಿದರು. ಕೆಲ ಸಚಿವರು, ಹಿತೈಷಿಗಳು ಸಿಎಂ ನಿವಾಸಕ್ಕೆ ಭೇಟಿ ನೀಡಿ ಶುಭ ಕೋರುತ್ತಿದ್ದಾರೆ.

ಇದನ್ನೂ ಓದಿ: ಮತಾಂತರ ಒತ್ತಾಯಕ್ಕೆ ನೊಂದ ವಿದ್ಯಾರ್ಥಿನಿ ಆತ್ಮಹತ್ಯೆ: ಸತ್ಯಶೋಧನಾ ಸಮಿತಿ ರಚಿಸಿದ ಬಿಜೆಪಿ ಹೈಕಮಾಂಡ್

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.