ETV Bharat / state

ಸಿಎಂ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ: ರಾಜ್ಯಪಾಲರಿಗೆ ಹಸ್ತಾಂತರ - BS Yeddyurappa resigns

ಬಿ.ಎಸ್.ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್ ​​ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ಬಿ.ಎಸ್​. ಯಡಿಯೂರಪ್ಪ
ಬಿ.ಎಸ್​. ಯಡಿಯೂರಪ್ಪ
author img

By

Published : Jul 26, 2021, 12:43 PM IST

Updated : Jul 26, 2021, 1:05 PM IST

ಬೆಂಗಳೂರು: ಬಿಜೆಪಿ ಸರ್ಕಾರ ರಚನೆಯಾಗಿ ಇಂದಿಗೆ ಎರಡು ವರ್ಷ ಪೂರೈಸಿದ ಸಂಭ್ರಮದ ದಿನವೇ ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ಸಲ್ಲಿಸಿದ್ದಾರೆ. ಸಂಪುಟ ಸಹೋದ್ಯೋಗಿಗಳ ಜೊತೆ ರಾಜಭವನಕ್ಕೆ ಆಗಮಿಸಿ ಪದತ್ಯಾಗ ಮಾಡಿದ್ದಾರೆ.

ವಿಧಾನಸೌಧದಲ್ಲಿ ನಡೆದ ಸರ್ಕಾರದ ಸಾಧನಾ ಕಾರ್ಯಕ್ರಮದ ನಂತರ ನೇರವಾಗಿ ರಾಜಭವನಕ್ಕೆ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಡಿಸಿಎಂ ಲಕ್ಷ್ಮಣ ಸವದಿ, ಸಚಿವರಾದ ಮಾಧುಸ್ವಾಮಿ, ಬಿ.ಸಿ.ಪಾಟೀಲ್ ಆಗಮಿಸಿ, ಯಡಿಯೂರಪ್ಪಗಾಗಿ ಕಾದು ಕುಳಿತರು.

ನಂತರ ರಾಜಭವನಕ್ಕೆ ಆಗಮಿಸಿದ ಸಿಎಂ ಯಡಿಯೂರಪ್ಪ, ಸಂಪುಟ ಸಹೋದ್ಯೋಗಿಗಳ ಸಮ್ಮುಖದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ಗೆ ರಾಜೀನಾಮೆ ಪತ್ರ ಸಲ್ಲಿಸಿದರು.

ಇದನ್ನೂ ಓದಿ: ಸಿಎಂ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಬಿಎಸ್​​ವೈ... ಭಾವುಕರಾದ ರಾಜಾಹುಲಿ

2019 ರ ಜುಲೈ 26 ರ ಸಂಜೆ 6 ಗಂಟೆಗೆ ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಯಡಿಯೂರಪ್ಪ ಏಕಾಂಗಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಸರಿಯಾಗಿ ಎರಡು ವರ್ಷಕ್ಕೆ ಪದತ್ಯಾಗ ಮಾಡಿದ್ದಾರೆ.

Last Updated : Jul 26, 2021, 1:05 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.