ETV Bharat / state

ದೀರ್ಘಾವಧಿ ಆರ್ಥಿಕ ಅಭಿವೃದ್ಧಿ ಗುರಿ ಹೊಂದಿದ ಬಜೆಟ್ : ಬಿಎಸ್​ವೈ ವ್ಯಾಖ್ಯಾನ - B.S. Yediyurappa reaction about Union Budget 2022

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ 2022-23ನೇ ಸಾಲಿನ ಆಯವ್ಯಯವು ಕೋವಿಡ್-19 ಯಿಂದ ಉಂಟಾದ ಆರ್ಥಿಕ ಹಿಂಜರಿತವನ್ನು ಸರಿಪಡಿಸುವ ದೃಷ್ಟಿಯಲ್ಲಿ ಹಾಗೂ ದೀರ್ಘಾವಧಿ ಆರ್ಥಿಕ ಅಭಿವೃದ್ಧಿಯ ಗುರಿಯನ್ನು ಹೊಂದಿದೆ. ಗ್ರಾಮೀಣ ಹಾಗೂ ನಗರಾಭಿವೃದ್ಧಿ ಎರಡು ಕ್ಷೇತ್ರಗಳ ಅಭಿವೃದ್ಧಿಗೆ ಪೂರಕವಾಗಿದೆ..

ಬಿ.ಎಸ್. ಯಡಿಯೂರಪ್ಪ
ಬಿ.ಎಸ್. ಯಡಿಯೂರಪ್ಪ
author img

By

Published : Feb 1, 2022, 1:37 PM IST

ಬೆಂಗಳೂರು : ಆರ್ಥಿಕ ಹಿಂಜರಿತವನ್ನು ಸರಿಪಡಿಸುವ ದೃಷ್ಟಿಯಲ್ಲಿ ಹಾಗೂ ದೀರ್ಘಾವಧಿ ಆರ್ಥಿಕ ಅಭಿವೃದ್ಧಿಯ ಗುರಿಯನ್ನು ಹೊಂದಿದೆ ಎಂದು 2022-23ನೇ ಸಾಲಿನ ಕೇಂದ್ರ ಬಜೆಟ್​ ಕುರಿತು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ 2022-23ನೇ ಸಾಲಿನ ಆಯವ್ಯಯವು ಕೋವಿಡ್-19ಯಿಂದ ಉಂಟಾದ ಆರ್ಥಿಕ ಹಿಂಜರಿತವನ್ನು ಸರಿಪಡಿಸುವ ದೃಷ್ಟಿಯಲ್ಲಿ ಹಾಗೂ ದೀರ್ಘಾವಧಿ ಆರ್ಥಿಕ ಅಭಿವೃದ್ಧಿಯ ಗುರಿಯನ್ನು ಹೊಂದಿದೆ.

ಗ್ರಾಮೀಣ ಹಾಗೂ ನಗರಾಭಿವೃದ್ಧಿ ಎರಡು ಕ್ಷೇತ್ರಗಳ ಅಭಿವೃದ್ಧಿಗೆ ಪೂರಕವಾಗಿದೆ. ಡಿಜಿಟಲೀಕರಣ ಮತ್ತು ಸ್ವಾವಲಂಬನೆಗೆ ಒತ್ತು ನೀಡಿದೆ. ವಿಶೇಷವಾಗಿ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ದೇಶದ ಆರ್ಥಿಕ ಅಭಿವೃದ್ಧಿಗೆ ಪೂರಕವಾದ ಬಜೆಟ್ ಆಗಿದೆ ಎಂದು ಪತ್ರಿಕಾ ಹೇಳಿಕೆ ಮೂಲಕ ತಿಳಿಸಿದ್ದಾರೆ.

ಪ್ರತಿ ಹಳ್ಳಿಗಳಿಗೆ ಆಪ್ಟಿಕಲ್ ಫೈಬರ್ ಒದಗಿಸುವುದು, ನಗರ ಪ್ರದೇಶದಲ್ಲಿ ವಿದ್ಯುತ್ ಚಾಲಿತ ವಾಹನಗಳಿಗೆ ಬ್ಯಾಟರಿ ಸ್ವಾಪಿಂಗ್ ಕೇಂದ್ರ ಸ್ಥಾಪನೆ ಉದ್ದೇಶಿಸಿರುವುದು ಸ್ವಾಗತರ್ಹ ವಿಷಯ. ದೇಶದ ಪ್ರಮುಖ ನದಿಗಳ ಜೋಡಣೆ, ಪ್ರತಿ ಮನೆಗಳಿಗೂ ಶುದ್ಧ ಕುಡಿಯುವ ನೀರಿನ ಸಂಪರ್ಕ ಒದಗಿಸುವುದು ಹಾಗೂ ಪ್ರಧಾನಮಂತ್ರಿ ಆವಾಸ್ ಯೋಜನೆಗೆ ಒತ್ತು ನೀಡಿ, 2023ರ ವರ್ಷವನ್ನು 'ಅಂತಾರಾಷ್ಟ್ರೀಯ ಸಿರಿಧಾನ್ಯ' ವರ್ಷವೆಂದು ಘೋಷಣೆ ಮಾಡಲಾಗಿದೆ. ಒಟ್ಟಾರೆ ಜನಪರವಾದ ಆಯವ್ಯಯ ಮಂಡಿಸಿರುವ ವಿತ್ತ ಸಚಿವರನ್ನು ಹಾಗೂ ನೆಚ್ಚಿನ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಅಭಿನಂದಿಸುತ್ತೇನೆ ಎಂದು ಬಿಎಸ್‌ವೈ ಹೇಳಿದ್ದಾರೆ.

ಓದಿ: ಮುಂದಿನ 3 ವರ್ಷಗಳಲ್ಲಿ ಹೊಸ ತಲೆಮಾರಿನ 400 ವಂದೇ ಭಾರತ್‌ ರೈಲುಗಳ ಸೇವೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.