ETV Bharat / state

'ಈ ದೇಶವನ್ನು ಆಳುವ ನಾಯಕತ್ವ ಬಿಜೆಪಿ ಬಿಟ್ಟು ಬೇರೆ ಪಕ್ಷಗಳಲ್ಲಿಲ್ಲ ': ಬಿಎಸ್​ವೈ - Yediyurappa

Four states Election results: ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶದ ಕುರಿತು ಬಿ.ಎಸ್.ಯಡಿಯೂರಪ್ಪ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

BS Yediyurappa
ಬಿ.ಎಸ್ ಯಡಿಯೂರಪ್ಪ
author img

By ETV Bharat Karnataka Team

Published : Dec 3, 2023, 2:06 PM IST

Updated : Dec 3, 2023, 2:15 PM IST

ಬಿ.ಎಸ್.ಯಡಿಯೂರಪ್ಪ

ಬೆಂಗಳೂರು: ಪಂಚ ರಾಜ್ಯಗಳಿಗೆ ನಡೆದ ವಿಧಾನಸಭಾ ಚುನಾವಣೆಗಳ ಫಲಿತಾಂಶ ಇಂದು ಪ್ರಕಟಗೊಳ್ಳುತ್ತಿದೆ. ಇಂದು ನಾಲ್ಕು ರಾಜ್ಯಗಳ ಫಲಿತಾಂಶ ಹೊರ ಬೀಳುತ್ತಿದೆ. ಈ ಹಿನ್ನೆಲೆಯಲ್ಲಿ ಮಾಜಿ ಸಿಎಂ ಬಿ.ಎಸ್​.ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಈ ದೇಶವನ್ನು ಆಳುವ ನಾಯಕತ್ವ ಬಿಜೆಪಿ ಬಿಟ್ಟು ಇತರ ಪಕ್ಷಗಳಲ್ಲಿಲ್ಲ ಎನ್ನುವುದನ್ನು ಫಲಿತಾಂಶ ಸ್ಪಷ್ಟಪಡಿಸಿದೆ. ಮೋದಿ ನಾಯಕತ್ವಕ್ಕೆ ಜನರು ಜೈ ಅಂದಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ ಎಲ್ಲ ಸ್ಥಾನಗಳನ್ನು ಗೆದ್ದು ಮೋದಿ ಅವರಿಗೆ ಉಡುಗೊರೆಯಾಗಿ ನೀಡುತ್ತೇವೆ ಎಂದು ರಾಜ್ಯ ಬಿಜೆಪಿಯ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಡಾಲರ್ಸ್ ಕಾಲೋನಿಯಲ್ಲಿರುವ ನಿವಾಸ ಧವಳಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಸ್ಥಾನದಲ್ಲಿ 115 ಸೀಟುಗಳನ್ನು ಪಡೆದಿದ್ದೇವೆ. ಅಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿತ್ತು, ಇದೀಗ ಬಿಜೆಪಿ ಅಧಿಕಾರಕ್ಕೆ ಬರುತ್ತಿದೆ. ಮಧ್ಯಪ್ರದೇಶದಲ್ಲಿ 161 ಸ್ಥಾನ ಪಡೆದು ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯುತ್ತಿದ್ದೇವೆ. ಛತ್ತೀಸ್​ಗಢದಲ್ಲಿ 52 ಸ್ಥಾನಗಳನ್ನು ಪಡೆದು ಗೆಲುವಿನತ್ತ ದಾಪುಗಾಲು ಹಾಕಿದ್ದೇವೆ. ತೆಲಂಗಾಣದಲ್ಲಿ 8 ಸ್ಥಾನಗಳನ್ನು ಪಡೆದು ಹಿಂದೆಂದಿಗಿಂತಲೂ ಉತ್ತಮ ಪ್ರದರ್ಶನ ನೀಡಿದ್ದೇವೆ. ಇದಕ್ಕೆಲ್ಲ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಕಾರಣ. ಹಾಗಾಗಿ ಆ ಮೂವರಿಗೂ ನಾನು ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸುತ್ತೇನೆ ಎಂದು ಮಾಜಿ ಸಿಎಂ ಹೇಳಿದರು.

ಕರ್ನಾಟಕದಲ್ಲಿ ಎಲ್ಲ 28 ಲೋಕಸಭಾ ಕ್ಷೇತ್ರಗಳನ್ನು ಗೆಲ್ಲುವ ಮೂಲಕ ಮೋದಿ ಅವರಿಗೆ ನಮ್ಮ ಕೊಡುಗೆ ನೀಡುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ. ಈ ಅಧಿವೇಶನ ಮುಗಿದ ನಂತರ ರಾಜ್ಯದ ಉದ್ದಗಲಕ್ಕೂ ಪ್ರವಾಸ ಕೈಗೊಳ್ಳುತ್ತೇವೆ. ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾದ ಬಳಿಕ ಎಲ್ಲ ಕಡೆಗಳಲ್ಲೂ ಬಹಳ ದೊಡ್ಡ ಸ್ವಾಗತ ಸಿಕ್ಕಿದೆ. ಜನರಲ್ಲಿ ವಿಶ್ವಾಸ ಮೂಡಿದೆ. ಅದರ ಲಾಭವನ್ನು ಪಡೆದು ಪಕ್ಷವನ್ನು ಬಲಪಡಿಸಲಿದ್ದೇವೆ. ಸಂಘಟನೆಯನ್ನು ಮತ್ತಷ್ಟು ಬಲಪಡಿಸಿ ಎಸ್ಸಿ, ಎಸ್ಟಿ, ಒಬಿಸಿಯನ್ನು ನಮ್ಮ ಜೊತೆ ತೆಗೆದುಕೊಂಡು ಹೋಗುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದು ಬಿ ಎಸ್​ ಯಡಿಯೂರಪ್ಪ ತಿಳಿಸಿದರು.

ಇದನ್ನೂ ಓದಿ: ತೆಲಂಗಾಣದ ಜನರು ಅಭಿವೃದ್ಧಿಗೆ ಬದಲಾವಣೆ ಬಯಸಿದ್ದಾರೆ: ಡಿಸಿಎಂ ಡಿ ಕೆ ಶಿವಕುಮಾರ್​

ಕಾಂಗ್ರೆಸ್ ಧೂಳಿಪಟ ಮಾಡುವ ಪ್ರಯತ್ನಕ್ಕೆ ಇಂದಿನ ಫಲಿತಾಂಶ ನಾಂದಿ ಹಾಕಿದೆ. ಈ ಕಾಂಗ್ರೆಸ್ ಸರ್ಕಾರದ ವೈಫಲ್ಯತೆಗಳನ್ನು ಇಟ್ಟುಕೊಂಡು ಮುಂದಿನ ಅಧಿವೇಶನದಲ್ಲಿ ಸಾಕಷ್ಟು ಚರ್ಚೆಗಳನ್ನು ನಮ್ಮ ಶಾಸಕರು ಮಾಡಲಿದ್ದಾರೆ. ಇದರ ಜೊತೆಗೆ ಸಂಘಟನಾತ್ಮಕವಾಗಿಯೂ ಬಲಗೊಳ್ಳುವ ಮೂಲಕ ಲೋಕಸಭೆ ಗೆಲ್ಲುವ ಕಡೆ ಗಮನ ಹರಿಸಲಿದ್ದೇವ ಎಂದು ಅವರು ಇದೇ ವೇಳೆ ಹೇಳಿದರು. ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ರಾಜಸ್ಥಾನದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ತೆಲಂಗಾಣದಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.

ಇದನ್ನೂ ಓದಿ: ರಾಜಸ್ಥಾನದಲ್ಲಿ ಬಿಜೆಪಿಗೆ ಅಧಿಕಾರ: ಆಧ್ಯಾತ್ಮಿಕ ನಾಯಕನಿಗೆ ಸಿಎಂ ಹುದ್ದೆ?

Last Updated : Dec 3, 2023, 2:15 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.