ETV Bharat / state

ಬೆಂಗಳೂರು: ಅಸಮಾಧಾನಿತ ಶಾಸಕ ಸೋಮಶೇಖರ್ ಜೊತೆ ಬಿಎಸ್​ವೈ ಮಾತುಕತೆ - ಯಶವಂತಪುರ ಕ್ಷೇತ್ರದ ಶಾಸಕ ಎಸ್ ಟಿ ಸೋಮಶೇಖರ್

ST Somashekhar meets Yediyurappa: ಯಶವಂತಪುರ ಕ್ಷೇತ್ರದ ಶಾಸಕ ಎಸ್ ಟಿ ಸೋಮಶೇಖರ್ ಜೊತೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮಾತುಕತೆ ನಡೆಸಿ, ಅಸಮಾಧಾನ ಶಮನ ಮಾಡಲು ಯತ್ನಿಸಿದ್ದಾರೆ.

Etv Bharat
Etv Bharat
author img

By ETV Bharat Karnataka Team

Published : Nov 16, 2023, 9:27 PM IST

ಬೆಂಗಳೂರು: ರಾಜಕೀಯ ಪಕ್ಷದಲ್ಲಿ ಅಸಮಾಧಾನಗಳು ಸಹಜ ಅದಕ್ಕಾಗಿ ಪಕ್ಷದ ಜೊತೆ ಅಂತರ ಕಾಯ್ದುಕೊಳ್ಳುವುದು ಸರಿಯಲ್ಲ. ಸಮಸ್ಯೆಗಳನ್ನು ಸರಿಪಡಿಸೋಣ, ಪಕ್ಷದ ಕಾರ್ಯಕ್ರಮಗಳಿಂದ ದೂರ ಉಳಿಯಬೇಡಿ ಎಂದು ಯಶವಂತಪುರ ಕ್ಷೇತ್ರದ ಶಾಸಕ ಎಸ್ ಟಿ ಸೋಮಶೇಖರ್ ಅವರಿಗೆ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸಲಹೆ ನೀಡಿದ್ದಾರೆ.

ಪಕ್ಷದಲ್ಲಿ ಶಾಸಕ ಎಸ್ ಟಿ ಸೋಮಶೇಖರ್ ಮುನಿಸು ವಿಚಾರ ಸಂಬಂಧ ತಮ್ಮ ನಿವಾಸಕ್ಕೆ ಬರುವಂತೆ ಯಡಿಯೂರಪ್ಪ ನೀಡಿದ್ದ ಬುಲಾವ್ ಹಿನ್ನೆಲೆಯಲ್ಲಿ ಡಾಲರ್ಸ್ ಕಾಲೋನಿಯಲ್ಲಿರುವ ಧವಳಗಿರಿ ನಿವಾಸಕ್ಕೆ ಶಾಸಕ ಎಸ್ ಟಿ ಸೋಮಶೇಖರ್ ಆಗಮಿಸಿದರು. ತಮಗಿರುವ ಅಸಮಾಧಾನದ ಕುರಿತಾಗಿ ಯಡಿಯೂರಪ್ಪ ಜೊತೆ ಮಾತುಕತೆ ನಡೆಸಿದರು. ಕ್ಷೇತ್ರದಲ್ಲಿ ಸ್ವಪಕ್ಷೀಯರಿಂದಲೇ ಸಮಸ್ಯೆಯಾಗುತ್ತಿದ್ದರೂ ಸರಿಪಡಿಸುತ್ತಿಲ್ಲ ಎನ್ನುವ ಅಸಮಾಧಾನ ಹೊರಹಾಕಿದರು. ಬಿಜೆಪಿ ತೊರೆಯುವ ಆಲೋಚನೆ ಇಲ್ಲದೇ ಇದ್ದರೂ ಕೆಲವರು ಪಕ್ಷದಿಂದ ಹೋಗಬಹುದು ಎನ್ನುತ್ತಿರುವುದಕ್ಕೆ ಬೇಸರ ವ್ಯಕ್ತಪಡಿಸಿದರು ಎಂದು ತಿಳಿದುಬಂದಿದೆ.

ಸೋಮಶೇಖರ್​ಗೆ ಬಿಎಸ್​ವೈ ಸೂಚನೆ ಏನು? : ಸಮಸ್ಯೆ ಆಲಿಸಿದ ಯಡಿಯೂರಪ್ಪ ರಾಜಕೀಯ ಕ್ಷೇತ್ರದಲ್ಲಿ ಸಣ್ಣಪುಟ್ಟ ಅಸಮಾಧಾನಗಳು ಸಹಜ, ಸಮಸ್ಯೆಗಳನ್ನು ಪರಿಹರಿಸಲಾಗುತ್ತದೆ. ಗೌರವದಿಂದ ಕರೆಸಿಕೊಂಡ ನಿಮ್ಮನ್ನು ಗೌರವದಿಂದಲೇ ನಡೆಸಿಕೊಳ್ಳಲಿದ್ದೇವೆ. ಪಕ್ಷದಿಂದ ದೂರ ಉಳಿಯದೇ ಕಾರ್ಯಕ್ರಮಗಳಲ್ಲಿ ಸಕ್ರಿಯರಾಗಿ, ಸಮಸ್ಯೆಗಳನ್ನೆಲ್ಲ ಪರಿಹರಿಸುತ್ತೇವೆ ಎಂದು ಯಡಿಯೂರಪ್ಪ ಸಲಹೆ ನೀಡಿದ್ದಾರೆ. ನಾಳಿನ ಶಾಸಕಾಂಗ ಪಕ್ಷದ ಸಭೆಯಲ್ಲಿ ಪಾಲ್ಗೊಳ್ಳುವಂತೆ ಸೋಮಶೇಖರ್​ಗೆ ಬಿಎಸ್​ವೈ ಸೂಚನೆ ನೀಡಿದ್ದಾರೆ ಎಂಬ ಮಾಹಿತಿ ಇದೆ.

ಬಿಜೆಪಿ ಕಚೇರಿಗೆ ಅರವಿಂದ ಬೆಲ್ಲದ್ ಭೇಟಿ : ಮತ್ತೊಂದೆಡೆ ಯಡಿಯೂರಪ್ಪ ಕುಟುಂಬದ ವಿರುದ್ಧ ಅಸಮಾಧಾನಿತ ಶಾಸಕ ಅರವಿಂದ ಬೆಲ್ಲದ್ ಬಿಜೆಪಿ ಕಚೇರಿಗೆ ಭೇಟಿ ನೀಡಿದರು. ವಿಜಯೇಂದ್ರ ಪದಗ್ರಹಣ ಕಾರ್ಯಕ್ರಮದಿಂದ ದೂರ ಉಳಿದು ಅಸಮಾಧಾನ ವ್ಯಕ್ತಪಡಿಸಿದ್ದ ಬೆಲ್ಲದ್ ಇಂದು ಮಲ್ಲೇಶ್ವರದಲ್ಲಿರುವ ಕಚೇರಿಗೆ ಭೇಟಿ ನೀಡಿ, ಮುಖಂಡರ ಜೊತೆ ಮಾತುಕತೆ ನಡೆಸಿದರು.

ಬಿಜೆಪಿ ಕಚೇರಿಯಿಂದ ಹೊರಟ ಶಾಸಕ ಅರವಿಂದ್ ಬೆಲ್ಲದ್, ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು. ಮಾತನಾಡುವಾಗ ಮಾತನಾಡುತ್ತೇನೆ ಅಂತ ಮಾಧ್ಯಮಗಳತ್ತ ಕೈ ಮುಗಿದು ಹೊರಟರು. ನಾಳೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆದಿರುವ ಹಿನ್ನೆಲೆಯಲ್ಲಿ ಇಂದು ಬಿಜೆಪಿ ಕಚೇರಿಗೆ ಬೆಲ್ಲದ್ ಬಂದಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ಶುಕ್ರವಾರ ಶಾಸಕಾಂಗ ಪಕ್ಷದ ಸಭೆ ಕರೆದ ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.