ETV Bharat / state

ಚಾಮರಾಜಪೇಟೆಯ ಈದ್ಗಾ ಮೈದಾನ ವಿವಾದ..ಹೈಕೋರ್ಟ್ ತೀರ್ಪು ಸ್ವಾಗತಿಸಿದ ಬಿ ಎಸ್ ಯಡಿಯೂರಪ್ಪ

ಚಾಮರಾಜಪೇಟೆಯ ಈದ್ಗಾ ಮೈದಾನ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಒಳ್ಳೆಯ ತೀರ್ಮಾನ ತೆಗೆದುಕೊಂಡಿದೆ. ‌ಗಣೇಶನ ಕೂರಿಸುವುದೇ ಒಗ್ಗಟ್ಟು ಮೂಡಿಸಲು. ಆದರೆ, ಕೆಲವರು ಅನಗತ್ಯವಾಗಿ ಗೊಂದಲ ಮಾಡುತ್ತಿದ್ದಾರೆ. ಅದಕ್ಕೆ ಅರ್ಥ ಇಲ್ಲ, ಶಾಂತ ರೀತಿಯಲ್ಲಿ ಗಣೇಶ ಉತ್ಸವ ಮಾಡಲು ಎಲ್ಲರು ಸಹಕಾರ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.

bs yediyurappa
ಬಿ ಎಸ್ ಯಡಿಯೂರಪ್ಪ
author img

By

Published : Aug 27, 2022, 7:01 AM IST

ಬೆಂಗಳೂರು: ಚಾಮರಾಜಪೇಟೆ ಈದ್ಗಾ ಆಟದ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ಕುರಿತು ಹೈಕೋರ್ಟ್ ನೀಡಿರುವ ತೀರ್ಪನ್ನು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸ್ವಾಗತ ಮಾಡಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕೋರ್ಟ್ ಒಳ್ಳೆಯ ತೀರ್ಮಾನ ತೆಗೆದುಕೊಂಡಿದೆ. ‌ಗಣೇಶನ ಕೂರಿಸುವುದೇ ಒಗ್ಗಟ್ಟು ಮೂಡಿಸಲು. ಆದರೆ, ಕೆಲವರು ಅನಗತ್ಯವಾಗಿ ಗೊಂದಲ ಮಾಡುತ್ತಿದ್ದಾರೆ. ಅದಕ್ಕೆ ಅರ್ಥ ಇಲ್ಲ, ಶಾಂತ ರೀತಿಯಲ್ಲಿ ಗಣೇಶ ಉತ್ಸವ ಮಾಡಲು ಎಲ್ಲರು ಸಹಕಾರ ನೀಡಬೇಕು. ಆ ಜಾಗ, ಈ ಜಾಗ ಎಂದು ಬಡಿದಾಡುವ ಅಗತ್ಯವಿಲ್ಲ. ಎಲ್ಲಿ ಬೇಕಾದರೂ ಗಣೇಶನ ಕೂರಿಸಬಹುದು. ಈ ವಿಚಾರದಲ್ಲಿ ಕೋರ್ಟ್ ನೀಡಿದ ತೀರ್ಪನ್ನು ಸ್ವಾಗತ ಮಾಡಲಿದ್ದೇನೆ ಎಂದರು.

ಸುದ್ದಿಗಾರರೊಂದಿಗೆ ಮಾತನಾಡಿದ ಬಿ ಎಸ್ ಯಡಿಯೂರಪ್ಪ

ಇದನ್ನೂ ಓದಿ: ಈದ್ಗಾ ಮೈದಾನದಲ್ಲಿ ಗಣೇಶೋತ್ಸವ: ಹೈಕೋರ್ಟ್ ಆದೇಶಕ್ಕೆ ಸಿಎಂ ಪ್ರತಿಕ್ರಿಯೆ ಹೀಗಿದೆ..

ವರಿಷ್ಠರ ಭೇಟಿ: ದೆಹಲಿ ಪ್ರವಾಸದಲ್ಲಿರುವ ಯಡಿಯೂರಪ್ಪ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ. ಮೊದಲು ಪ್ರಧಾನಿ ಮೋದಿ ನಂತರ ಜೆಪಿ ನಡ್ಡಾ ಬಳಿಕ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

bs yediyurappa
ಪ್ರಧಾನಿ ಮೋದಿ ಭೇಟಿ ಮಾಡಿದ ಬಿ ಎಸ್ ಯಡಿಯೂರಪ್ಪ

ಇದನ್ನೂ ಓದಿ: ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಹೈಕಮಾಂಡ್ ಜೊತೆ ಚರ್ಚೆ: ಬಿಎಸ್​ವೈ

ವರಿಷ್ಠರ ಭೇಟಿ ಬಳಿಕ ಮಾತನಾಡಿದ ಯಡಿಯೂರಪ್ಪ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದು, ರಾಜ್ಯ ರಾಜಕೀಯ ಪರಿಸ್ಥಿತಿ ಕುರಿತು ಚರ್ಚೆ ಮಾಡಿ ಬಂದಿದ್ದೇನೆ. ನಂತರ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಜೊತೆ ಚರ್ಚೆ ನಡೆಸಿದ್ದು, ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ರಾಜ್ಯದಲ್ಲಿ ಓಡಾಡಬೇಕು, ಹೆಚ್ಚಿನ ಸಮಯ ಕೊಡಿ ಎಂದಿದ್ದೇನೆ, ಅವರು ಒಪ್ಪಿಕೊಂಡಿದ್ದಾರೆ. ಮಂಗಳೂರಿನಲ್ಲಿ ಪ್ರಧಾನಿ ಕಾರ್ಯಕ್ರಮವನ್ನ ದೊಡ್ಡ ಮಟ್ಟದಲ್ಲಿ ಮಾಡಲಿದ್ದೇವೆ. ಮೋದಿ, ನಡ್ಡಾ, ಅಮಿತ್ ಶಾ ಎಲ್ಲರೂ ರಾಜ್ಯಕ್ಕೆ ಹೆಚ್ಚು ಸಮಯ ನೀಡಲಿದ್ದಾರೆ ಎಂದರು.

bs yediyurappa
ಜೆಪಿ ನಡ್ಡಾ ಭೇಟಿ ಮಾಡಿದ ಬಿ ಎಸ್ ಯಡಿಯೂರಪ್ಪ

ಇದನ್ನೂ ಓದಿ: ಬಿಜೆಪಿ ಅತ್ಯುನ್ನತ ಸಮಿತಿ ಸದಸ್ಯರಾಗಿ ಮೊದಲ ಬಾರಿಗೆ ಯಡಿಯೂರಪ್ಪ ದೆಹಲಿ ಪ್ರವಾಸ.. ಸಚಿವ ಆಕಾಂಕ್ಷಿಗಳಲ್ಲಿ ಕುತೂಹಲ

ಸದ್ಯಕ್ಕೆ ಅಮಿತ್ ಶಾ ಭೇಟಿ ಬಾಕಿ ಇದ್ದು ರಾತ್ರಿಯ ಅವರನ್ನು ಭೇಟಿಯಾಗಿ ಅವರ ಜೊತೆ ಕೂಡ ಚರ್ಚಿಸಲಿದ್ದೇನೆ, ಬೆಳಗ್ಗೆ ವಾಪಸ್​ ಆಗಲಿದ್ದೇನೆ. ಆರ್.ಎಸ್.ಎಸ್ ಪ್ರಮುಖರಾದ ದತ್ತಾತ್ರೇಯ ಹೊಸಬಾಳೆ ಅವರ ಭೇಟಿಗೆ ಪ್ರಯತ್ನ ನಡೆಸಿದೆ. ಆದರೆ, ಅವರು ಮಹಾರಾಷ್ಟ್ರದಲ್ಲಿದ್ದಾರೆ. ಇಂದು ವಾಪಸ್​ ಆಗಲಿಲ್ಲ. ಹಾಗಾಗಿ, ಅವರನ್ನು ಭೇಟಿ ಮಾಡಲಾಗಲಿಲ್ಲ, ವರಿಷ್ಠರ ಭೇಟಿಗೆ ಬಂದಿದ್ದೆ, ಭೇಟಿ ಆಯಿತು. ಪೂರ್ವ ನಿಗದಿತ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಶನಿವಾರ ಬೆಳಗ್ಗೆಯೇ ವಾಪಸ್​ ಆಗಲಿದ್ದೇನೆ ಎಂದರು.

ರಾಜ್ಯಾಧ್ಯಕ್ಷರ ಬದಲಾವಣೆ ಕುರಿತು ಪಕ್ಷದ ನಾಯಕರು ತೀರ್ಮಾನ ಮಾಡಲಿದ್ದಾರೆ. ಈ ವಿಷಯದ ಕುರಿತು ನಾನು ಯಾವುದೇ ಚರ್ಚೆ ನಡೆಸಿಲ್ಲ ಎಂದರು.

ಇದನ್ನೂ ಓದಿ: ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಗ್ರೀನ್​ ಸಿಗ್ನಲ್​ ನೀಡಿದ ಹೈಕೋರ್ಟ್ ​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.