ETV Bharat / state

ವಿದೇಶ ಪ್ರವಾಸ ಮುಗಿಸಿ ಬಂದ ಬಿಎಸ್​ವೈ: ಸಿಎಂ ಭೇಟಿ, ರಾಜಕೀಯ ವಿದ್ಯಮಾನ ಕುರಿತು ಮಾತುಕತೆ - ಮಾಜಿ ಸಿಎಂ ಬಿ ಎ ಸ್​ ಯಡಿಯೂರಪ್ಪ ಭೇಟಿ ಮಾಡಿದ ಸಿಎಂ ಬೊಮ್ಮಾಯಿ

ಯೂರೋಪ್ ಪ್ರವಾಸ ಮುಗಿಸಿ ರಾಜ್ಯಕ್ಕೆ ಮರಳಿದ ಮಾಜಿ ಸಿಎಂ- ಬಿಎಸ್​ವೈ ಭೇಟಿಯಾದ ಬೊಮ್ಮಾಯಿ- ರಾಜಕೀಯ ವಿದ್ಯಮಾನ ಕುರಿತು ಚರ್ಚೆ

ಮಾಜಿ ಸಿಎಂ ಬಿ ಎ ಸ್​ ಯಡಿಯೂರಪ್ಪ ಭೇಟಿ ಮಾಡಿದ ಸಿಎಂ ಬೊಮ್ಮಾಯಿ

author img

By

Published : Jul 7, 2022, 5:16 PM IST

ಬೆಂಗಳೂರು: ಎರಡು ವಾರಗಳ ವಿದೇಶ ಪ್ರವಾಸ ಮುಗಿಸಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರಾಜ್ಯಕ್ಕೆ ವಾಪಸ್​ ಆಗಿದ್ದಾರೆ. ಇಂದು ಅವರ ನಿವಾಸಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಿ, ಮಾತುಕತೆ ನಡೆಸಿದರು. ಪ್ರಸಕ್ತ ರಾಜಕೀಯ ವಿದ್ಯಮಾನಗಳು, ಹೈಕಮಾಂಡ್​ನಿಂದ ಬಂದಿರುವ ನಿರ್ದೇಶನಗಳ ಕುರಿತು ಸಮಾಲೋಚನೆ ನಡೆಸಿದರು.

ಜೂನ್ 21 ರಂದು ಯೂರೋಪ್ ಪ್ರವಾಸಕ್ಕೆ ತೆರಳಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ 15 ದಿನಗಳ ಪ್ರವಾಸ ಮುಗಿಸಿ ವಾಪಸ್​ ಆಗಿದ್ದಾರೆ. ಅವರ ಅಧಿಕೃತ ನಿವಾಸ ಕಾವೇರಿಗೆ ಆಗಮಿಸಿದ ಮುಖ್ಯಮಂತ್ರಿ ಅವರು ಬಿ ಎಸ್​ವೈ ಅವರನ್ನು ಭೇಟಿ ಮಾಡಿದರು. ಕಳೆದ ವಾರ ಹೈದರಾಬಾದ್​ನಲ್ಲಿ ನಡೆದ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಿರ್ಣಯಗಳನ್ನು ಬಿಎಸ್​ವೈ ಗಮನಕ್ಕೆ ತಂದರು.

ಚುನಾವಣಾ ವರ್ಷವಾಗಿರುವ ಹಿನ್ನೆಲೆ ರಾಜ್ಯದ ನಾಯಕರಿಗೆ ಹೈಕಮಾಂಡ್ ನಾಯಕರು ನೀಡಿದ ಸಲಹೆ, ಸೂಚನೆ, ನಿರ್ದೇಶನಗಳ ಕುರಿತು ಸಮಾಲೋಚನೆ ನಡೆಸಿದರು. ಆಡಳಿತಾತ್ಮಕ ವಿಷಯಗಳ ಕುರಿತು ಸಮಾಲೋಚನೆ ನಡೆಸಿದರು ಎನ್ನಲಾಗ್ತಿದೆ.

ಇದನ್ನೂ ಓದಿ: ಪ್ರತಿಭಟನಾನಿರತ ಗುತ್ತಿಗೆ ಸಿಬ್ಬಂದಿ ಬೇಡಿಕೆ ಬಗ್ಗೆ ಚರ್ಚಿಸಿ ತೀರ್ಮಾನ: ಸಚಿವ ಡಾ. ಸುಧಾಕರ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.