ಬೆಂಗಳೂರು: ಕೇಂದ್ರ ಪರಿಸರ ಮತ್ತು ಅರಣ್ಯ, ವಾರ್ತಾ, ಬೃಹತ್ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಅವರೊಂದಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪಶ್ಚಿಮ ಘಟ್ಟಗಳಲ್ಲಿ ಪರಿಸರ ಸೂಕ್ಷ್ಮ ವಲಯಗಳು ಎಂದು ಘೋಷಿತಗೊಂಡಿರುವ ಪ್ರದೇಶಗಳ ಕುರಿತ ಕರಡು ಅಧಿಸೂಚನೆ ಬಗ್ಗೆ ವಿಡಿಯೋ ಸಂವಾದ ನಡೆಸಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ವಿಡಿಯೋ ಸಂವಾದದಲ್ಲಿ ಅರಣ್ಯ ಸಚಿವ ಆನಂದ್ ಸಿಂಗ್, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಅಪರ ಮುಖ್ಯ ಕಾರ್ಯದರ್ಶಿ ಡಾ.ಸಂದೀಪ್ ದವೆ ಮತ್ತಿತರರು ಉಪಸ್ಥಿತರಿದ್ದರು.