ETV Bharat / state

ಯಾವುದೇ ಕಾರಣಕ್ಕೂ ಸರ್ಕಾರ ರೈತರನ್ನು ನಿರ್ಲಕ್ಷ್ಯಿಸುವುದಿಲ್ಲ: ಬಿ.ಎಸ್.ಯಡಿಯೂರಪ್ಪ ಭರವಸೆ - ರಾಜ್ಯದಲ್ಲಿ ರೈತರ ಸಮಸ್ಯೆ

ಸರ್ಕಾರದ ಇತಿಮಿತಿಯಲ್ಲಿ ಎಲ್ಲ ರೈತರಿಗೂ ಬೆಂಬಲ ನೀಡಲಾಗುವುದು ಎಂದಿರುವ ಸಿಎಂ, ನಮ್ಮದು ರೈತ ಪರ ಸರ್ಕಾರ. ಯಾವುದೇ ಕಾರಣಕ್ಕೂ ರೈತರನ್ನು ನಿರ್ಲಕ್ಷ್ಯ ಮಾಡುವುದಿಲ್ಲ ಎಂದು ಭರವಸೆ ನೀಡಿದ್ದಾರೆ.

BSY Press meet
BSY Press meet
author img

By

Published : May 7, 2020, 7:49 PM IST

ಬೆಂಗಳೂರು: ಕೃಷಿ ಕ್ಷೇತ್ರದ ಸಮಸ್ಯೆಗಳ ಸಂಬಂಧ ಸರ್ಕಾರದ ಇತಿಮಿತಿಯಲ್ಲಿ ರೈತರಿಗೆ ಸಕಲ ರೀತಿಯಲ್ಲೂ ಬೆಂಬಲ ನೀಡಲಾಗುವುದು. ಈ ಸಂಬಂಧ ಶೀಘ್ರದಲ್ಲೇ ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಲಾಗುತ್ತದೆ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಕೋವಿಡ್-19 ಹಾಗೂ ಲಾಕ್​ಡೌನ್​ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕೃತ ಗೃಹ ಕಚೇರಿ ಕೃಷ್ಣಾದಲ್ಲಿಂದು ರೈತ ಮುಖಂಡರೊಂದಿಗೆ ಸಭೆ ನಡೆಸಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.

ರೈತರ ಸಮಸ್ಯೆ, ಸಲಹೆಗಳನ್ನು ಆಲಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೋವಿಡ್​ ಹಿನ್ನೆಲೆಯಲ್ಲಿ ರೈತರಿಗಾಗಿ ಸರ್ಕಾರ ಕೈಗೊಂಡಿರುವ ಕ್ರಮಗಳ ಕುರಿತು ವಿವರಿಸಿದರು.

ಬಿಎಸ್​ವೈ ಸುದ್ದಿಗೋಷ್ಠಿ

ಸಿಎಂ ನೀಡಿದ ಮಾಹಿತಿಯ ವಿವರ:

ಲಾಕ್​ಡೌನ್​ ಘೋಷಣೆಯಾದಾಗ ಕೃಷಿ ಮತ್ತು ಪೂರಕ ಚಟುವಟಿಕೆಗಳನ್ನು ಯಾವುದೇ ಅಡಚಣೆಯಿಲ್ಲದೆ ಮುಂದುವರೆಸಲು ಅನುಮತಿ ನೀಡಲಾಗಿದೆ. ಮುಂಗಾರು ಹಂಗಾಮಿನ ಚಟುವಟಿಕೆಗಳು ಸುಲಲಿತವಾಗಿ ನಡೆಯುತ್ತಿವೆ. ಇದಲ್ಲದೆ ಕೃಷಿ ಚಟುವಟಿಕೆಗಳಿಗೆ ಪೂರಕವಾಗಿ ಕೃಷಿ ಇಲಾಖೆ ಕಚೇರಿಗಳು, ರೈತ ಸಂಪರ್ಕ ಕೇಂದ್ರಗಳು ಹಾಗೂ ಬಾಡಿಗೆ ಆಧಾರಿತ ಯಂತ್ರೋಪಕರಣಗಳ ಸೇವಾ ಕೇಂದ್ರಗಳು, ಕೃಷಿ ಪರಿಕರಗಳ ಮಾರಾಟ ಕೇಂದ್ರ ತೆರೆಯಲು ಅನುಮತಿ ನೀಡಲಾಗಿದೆ.

ಹಿಂಗಾರು-ಬೇಸಿಗೆ ಹಂಗಾಮಿನ ಬೆಳೆಗಳ ಕಟಾವು ಕಾರ್ಯ ಪ್ರಗತಿಯಲ್ಲಿದ್ದು, ಶೇ. 80 ರಷ್ಟು ಕಟಾವು ಪೂರ್ಣಗೊಂಡಿದೆ. ಇದಕ್ಕೆ ಬೇರೆ ರಾಜ್ಯಗಳಿಂದ ಕಟಾವು ಯಂತ್ರ ತರಿಸಲು ಸಹ ವ್ಯವಸ್ಥೆ ಮಾಡಲಾಗಿದೆ. ರೈತರ ಸಮಸ್ಯೆ ಬಗೆಹರಿಸಲು ಅಗ್ರಿ ವಾರ್ ರೂಂ ಸ್ಥಾಪಿಸಲಾಗಿದೆ. ಈ ಬಗ್ಗೆ ರೈತ ಮುಖಂಡರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದರು.

ಮುಂಗಾರು ಹಂಗಾಮಿಗೆ ಬಿತ್ತನೆ ಬೀಜ, ರಸಗೊಬ್ಬರ ದಾಸ್ತಾನು ಲಭ್ಯವಿದೆ. ರಾಜ್ಯದಲ್ಲಿ ಬೆಳೆಯುವ ಹೂವು-ಹಣ್ಣು ತರಕಾರಿಗಳನ್ನು ಇತರ ರಾಜ್ಯಗಳಿಗೆ ಸಾಗಿಸಲು ಅವಕಾಶ ಮಾಡಿಕೊಡಲಾಗಿದೆ. ಹಾಪ್ ಕಾಮ್ಸ್ ಮೂಲಕ ಹಣ್ಣು, ತರಕಾರಿ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದೆ. ರೈತ ಉತ್ಪಾದನಾ ಸಂಸ್ಥೆಗಳ ಮೂಲಕ ಕೃಷಿ ಉತ್ಪನ್ನಗಳ ಮಾರಾಟಕ್ಕೆ ಅನುವು ಮಾಡಿಕೊಡಲಾಗಿದೆ.

ಬೆಳೆ ಪರಿಹಾರ ನೀಡಲು ಕ್ರಮ:

ರಾಯಚೂರು, ಕೊಪ್ಪಳ, ಬಳ್ಳಾರಿ ಮೊದಲಾದ ಜಿಲ್ಲೆಗಳಲ್ಲಿ ಇತ್ತೀಚೆಗೆ ಅಕಾಲಿಕ ಮಳೆಯಿಂದ ನಾಶವಾಗಿರುವ ಭತ್ತದ ಬೆಳೆಗೆ ಪರಿಹಾರ ನೀಡಲು ಕ್ರಮ ವಹಿಸಲಾಗಿದೆ. ಕೇಂದ್ರ ಸರ್ಕಾರದ ಪಿಎಂ-ಕಿಸಾನ್ ಯೋಜನೆಯಡಿ ವಿವಿಧ ಕಂತುಗಳಲ್ಲಿ 50.77 ಲಕ್ಷ ರೈತರಿಗೆ ಒಟ್ಟು 3,755.16 ಕೋಟಿ ರೂ. ಆರ್ಥಿಕ ನೆರವು ನೀಡಲಾಗಿದೆ.

2020-21ನೇ ಸಾಲಿನಲ್ಲಿ 47.81 ಲಕ್ಷ ರೈತರಿಗೆ ಎರಡು ಸಾವಿರ ರೂಪಾಯಿಯಂತೆ ಒಟ್ಟು 956.32 ಕೋಟಿ ರೂ. ವರ್ಗಾಯಿಸಲಾಗಿದೆ. ರಾಜ್ಯ ಸರ್ಕಾರದ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಈವರೆಗೆ 44.67 ಲಕ್ಷ ರೈತರಿಗೆ 893.95 ಕೋಟಿ ರೂ. ಆರ್ಥಿಕ ನೆರವು ಒದಗಿಸಲಾಗಿದೆ. ಮೆಕ್ಕೆಜೋಳ ಖರೀದಿಗೆ ಕೆಎಂಎಫ್​​ಗೆ ಸೂಚಿಸಲಾಗಿದೆ ಎಂದರು.

ಸಭೆಯಲ್ಲಿ ಕೃಷಿ ಸಚಿವ ಬಿ.ಸಿ. ಪಾಟೀಲ್, ತೋಟಗಾರಿಕೆ ಸಚಿವ ನಾರಾಯಣ ಗೌಡ, ಕಂದಾಯ ಸಚಿವ ಆರ್. ಅಶೋಕ್ ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಅಭಿವೃದ್ಧಿ ಆಯುಕ್ತರಾದ ವಂದಿತಾ ಶರ್ಮಾ ಇದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.