ETV Bharat / state

ನಾಯಕತ್ವ ಬದಲಾವಣೆ ಇಲ್ಲ, ಬಿಎಸ್​​ವೈ ಸಿಎಂ ಆಗಿ ಮುಂದುವರೆಯಲಿದ್ದಾರೆ: ಡಿಸಿಎಂ ಅಶ್ವತ್ಥ ನಾರಾಯಣ - DCM Ashwath narayana

ಬಸನಗೌಡ ಪಾಟೀಲ್ ಯತ್ನಾಳ್​​ ಅವರು ಏಕೆ ಆ ರೀತಿ ಹೇಳಿಕೆ ನೀಡಿದ್ದಾರೆಂದು ಗೊತ್ತಿಲ್ಲ. ರಾಜ್ಯದಲ್ಲಿ ನಾಯಕತ್ವದ ಬದಲಾವಣೆ ಪ್ರಶ್ನೆಯೇ ಇಲ್ಲ. ಯಡಿಯೂರಪ್ಪನವರೇ ಮುಖ್ಯಮಂತ್ರಿ ಆಗಿ ಮುಂದುವರೆಯಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

DCM Ashwath narayana
ಡಿಸಿಎಂ ಅಶ್ವತ್ಥನಾರಾಯಣ
author img

By

Published : Oct 20, 2020, 2:36 PM IST

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವದ ಬದಲಾವಣೆ ಪ್ರಶ್ನೆಯೇ ಇಲ್ಲ. ಯಡಿಯೂರಪ್ಪ ಅವರೇ ನಮ್ಮ ನಾಯಕ. ಅವರೇ ಮುಖ್ಯಮಂತ್ರಿ ಆಗಿ ಮುಂದುವರೆಯಲಿದ್ದಾರೆ. ನಾಯಕತ್ವ ಬದಲಾವಣೆ ಹೇಳಿಕೆ ನೀಡಿರುವ ಬಸನಗೌಡ ಪಾಟೀಲ್ ಯತ್ನಾಳ್​​ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಪಕ್ಷ ನಿರ್ಧರಿಸಲಿದೆ ಎಂದು ಡಿಸಿಎಂ ಡಾ. ಅಶ್ವತ್ಥ ನಾರಾಯಣ ಹೇಳಿದ್ದಾರೆ.

ನಗರ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಡಿಸಿಎಂ, ಬಸನಗೌಡ ಪಾಟೀಲ್ ಯತ್ನಾಳ್​​ ಅವರು ಏಕೆ ಆ ರೀತಿ ಹೇಳಿಕೆ ನೀಡಿದ್ದಾರೆಂದು ಗೊತ್ತಿಲ್ಲ. ಇದನ್ನು ಅವರೇ ಹೇಳಬೇಕು. ಯತ್ನಾಳ್​​ ಇಂತಹ ಹೇಳಿಕೆ‌ ಕೊಡುತ್ತಲೇ ಇರುತ್ತಾರೆ. ಇದಕ್ಕೆ ಉತ್ತರ ಕೊಡುತ್ತಿರಲು ಸಾಧ್ಯವಿಲ್ಲ.

ಆದರೆ ಯಡಿಯೂರಪ್ಪ ನಮ್ಮ ನಾಯಕ. ಅದರಲ್ಲಿ ಯಾವುದೇ ಅನುಮಾನ ಇಲ್ಲ. ಅವರು ಸಿಎಂ ಆಗಿಯೇ ಇರಲಿದ್ದಾರೆ ಎಂದರು. ಪಕ್ಷದ ಅಧ್ಯಕ್ಷರು, ವರಿಷ್ಠರು ಯತ್ನಾಳ್ ವಿರುದ್ಧ ಕ್ರಮದ ಬಗ್ಗೆ ನೋಡಿಕೊಳ್ಳಲಿದ್ದಾರೆ. ಈ ವಿಚಾರದಲ್ಲಿ ನಾಯಕರು ಗಮನ ಹರಿಸಲಿದ್ದು, ತೀರ್ಮಾನಿಸಲಿದ್ದಾರೆ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.