ಬೆಂಗಳೂರು: ಮುಖ್ಯಮಂತ್ರಿ ಹುದ್ದೆಗೆ ಯಡಿಯೂರಪ್ಪ ರಾಜೀನಾಮೆ ನೀಡಿದ ಬಳಿಕ ಸಚಿವ ಸಂಪುಟ ದರ್ಜೆಯ ಸ್ಥಾನಮಾನಗಳನ್ನು ನೀಡಿ ಸರ್ಕಾರ ಆದೇಶ ಹೊರಡಿಸಿತ್ತು. ಆದರೆ ಈ ಸ್ಥಾನಮಾನವನ್ನು ವಾಪಸ್ ಪಡೆಯುವಂತೆ ಸಿಎಂ ಬೊಮ್ಮಾಯಿ ಅವರಿಗೆ ಬಿಎಸ್ವೈ ಪತ್ರ ಬರೆದಿದ್ದಾರೆ.
ನಿಕಟ ಪೂರ್ವ ಮುಖ್ಯಮಂತ್ರಿಗಳಿಗೆ ಸರ್ಕಾರದಿಂದ ನೀಡುವ ಸೌಲಭ್ಯಗಳನ್ನು ಮಾತ್ರ ನೀಡಬೇಕು ಹಾಗೂ ಸಂಪುಟ ದರ್ಜೆಯ ಸ್ಥಾನಮಾನ ನೀಡಿ ಹೊರಡಿಸಿರುವ ಆದೇಶವನ್ನು ಹಿಂಪಡೆಯಬೇಕೆಂದು ಈ ಮೂಲಕ ಕೋರುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ವೈ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
