ಬೆಂಗಳೂರು: ಮುಖ್ಯಮಂತ್ರಿ ಬಿ. ಎಸ್.ಯಡಿಯೂರಪ್ಪ ಅವರ ಏಳನೇ ಬಜೆಟ್ನಲ್ಲಿ ಹೈ.ಕ ಭಾಗದ ಅಭಿವೃದ್ಧಿಗೆ ಭರಪೂರ ಅನುದಾನ ಘೋಷಿಸಿದ್ದಾರೆ.
ಇ-ಕಾಮರ್ಸ್ ಉದ್ಯೋಗಕ್ಕೆ ಸೇರುವವರಿಗೆ ದೇವರಾಜ್ ಅರಸ್ ನಿಗಮದ ಮೂಲಕ ದ್ವಿಚಕ್ರ ವಾಹನ ಕೊಳ್ಳಲು ಸಾಲ ಸೌಲಭ್ಯ ನೀಡಲು ಮುಂದಾಗಿದ್ದಾರೆ. ಬುಡಕಟ್ಟು ವೈದ್ಯ ಪದ್ಧತಿಗೆ ಪೂರಕವಾಗಿ ಔಷಧ ತಯಾರಿಕೆಗಾಗಿ ಶಿವಮೊಗ್ಗ ಮತ್ತು ಮೈಸೂರಿನಲ್ಲಿ ಘಟಕ ಸ್ಥಾಪನೆಗೆ ಅನುದಾನ ಬಿಡುಗಡೆ ಮಾಡಲಾಗಿದೆ.
ಇನ್ನು ಹೈದರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ₹ 1500 ಕೋಟಿ ಅನುದಾನ ಬಿಡುಗಡೆ ಮಾಡಲು ನಿರ್ಧರಿಸಿದ್ದು, ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘಕ್ಕೆ ₹ 500 ಕೋಟಿ ಅನುದಾನ ಮೀಸಲಿಡಲಾಗಿದೆ.