ETV Bharat / state

ಬಜೆಟ್ ಅಧಿವೇಶನದ ಹಿನ್ನೆಲೆ: ಜುಲೈ 3 ರಿಂದ 14ರ ವರೆಗೆ ವಿಧಾನಸೌಧದ ಸುತ್ತಲೂ ನಿಷೇಧಾಜ್ಞೆ - budget session

ವಿಧಾನಸೌಧದಲ್ಲಿ ಬಜೆಟ್​ ಅಧಿವೇಶನ ನಡೆಯುವ ಹಿನ್ನೆಲೆ ಜುಲೈ 3ರಿಂದ 14ರವರೆಗೆ ವಿಧಾನಸೌಧದ ಸುತ್ತಲೂ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

budget-session-curfew-imposed-at-vidhana-soudha-from-3rd-to-14th-july
ಬಜೆಟ್ ಅಧಿವೇಶನ ಹಿನ್ನಲೆ : ಜುಲೈ 3 ರಿಂದ 14ರ ವರೆಗೆ ವಿಧಾನಸೌಧದ ಸುತ್ತಲೂ ನಿಷೇಧಾಜ್ಞೆ
author img

By

Published : Jul 1, 2023, 5:04 PM IST

ಬೆಂಗಳೂರು: ಬಜೆಟ್ ಅಧಿವೇಶನ ನಡೆಯುವ ಹಿನ್ನೆೆಲೆಯಲ್ಲಿ ಜುಲೈ 3 ರಿಂದ 14ರ ವರೆಗೆ ವಿಧಾನಸೌಧದ ಸುತ್ತಲೂ ನಿಷೇಧಾಜ್ಞೆ ಜಾರಿ ಮಾಡಿ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಆದೇಶಿಸಿದ್ದಾರೆ. ಜು.3 ರಿಂದ 14ರ ವರೆಗೆ ವಿಧಾನಸೌಧದ ಸುತ್ತಲೂ 2 ಕಿ.ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಅನುಮತಿ ಪಡೆದು ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆಗೆ ಅವಕಾಶ ನೀಡಲಾಗಿದೆ.

ನಿಷೇಧಾಜ್ಞೆ ಜಾರಿಯಿರುವ ಸ್ಥಳದಲ್ಲಿ ಐದು ಅಥವಾ ಅದಕ್ಕಿಂತ ಹೆಚ್ಚು ಜನರ ಗುಂಪು ಸೇರುವುದು, ಮೆರವಣಿಗೆ ಮತ್ತು ಸಭೆ ನಡೆಸುವುದನ್ನು ನಿಷೇಧಿಸಲಾಗಿದೆ. ಅಲ್ಲದೇ ಶಸ್ತ್ರಾಸ್ತ್ರ, ದೊಣ್ಣೆ, ಕತ್ತಿಗಳು, ಈಟಿಗಳು, ಮಾರಕಾಸ್ತ್ರಗಳನ್ನು ಒಯ್ಯುವುದಾಗಲಿ ಅಥವಾ ಯಾವುದೇ ಸ್ಫೋಟಕ ವಸ್ತುಗಳನ್ನು ಸಿಡಿಸುವುದು, ಕಲ್ಲುಗಳನ್ನು, ಕ್ಷಿಪಣಿಗಳನ್ನು ಎಸೆಯುವ ಸಾಧನಗಳ ಅಥವಾ ಉಪಕರಣಗಳ ಸಾಗಾಟ ಮತ್ತು ಶೇಖರಿಸುವುದನ್ನು ನಿಷೇಧಿಸಲಾಗಿದೆ.

ಯಾವುದೇ ವ್ಯಕ್ತಿಗಳ ಅಥವಾ ಅವರ ಪ್ರತಿಕೃತಿಗಳ ಪ್ರದರ್ಶನ ಮಾಡುವುದು ಪ್ರಚೋದಿಸಬಹುದಾದ ಬಹಿರಂಗ ಘೋಷಣೆಗಳನ್ನು ಕೂಗುವುದು, ಹಾಡುವುದು, ಸಂಗೀತ ನುಡಿಸುವುದು, ಸಂಕೇತಗಳು/ಭಿತ್ತಿ ಪತ್ರ ಅಥವಾ ಇತರೆ ಯಾವುದೇ ವಸ್ತುಗಳನ್ನು ಪ್ರದರ್ಶಿಸುವುದನ್ನ ನಿಷೇಧಿಸಲಾಗಿದೆ.

ಇದನ್ನೂ ಓದಿ : ನಾವು ಕೊಟ್ಟ 5 ಗ್ಯಾರಂಟಿಗಳ ಪೈಕಿ ‌ಮೂರು ಈಡೇರಿದೆ: ದಿನೇಶ್‌ ಗುಂಡೂರಾವ್‌

ಕಾಂಗ್ರೆಸ್​ ಸರ್ಕಾರ ಬಂದ ಮೇಲೆ ಮೊದಲ ಅಧಿವೇಶನ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ನಡೆಯುತ್ತಿರುವ ಮೊದಲ ಅಧಿವೇಶನ ಇದಾಗಿದೆ. ಜುಲೈ 3 ರಿಂದ 14 ರವರೆಗೆ ಅಧಿವೇಶನ ನಡೆಯಲಿದೆ. ಜುಲೈ 3 ರಂದು ಮಧ್ಯಾಹ್ನ 12 ಗಂಟೆಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಬಳಿಕ ಜುಲೈ 5 ರಿಂದ 7 ರವರೆಗೆ ಕಲಾಪ ನಡೆಯಲಿದೆ. ಜು.8 ಮತ್ತು 9 ರಂದು ಸರ್ಕಾರಿ ರಜೆ ಇದ್ದು, 10 ರಿಂದ 14 ರವರೆಗೆ ಕಲಾಪ ಮುಂದುವರೆಯಲಿದೆ. ಜಂಟಿ ಅಧಿವೇಶನದಲ್ಲಿ ಕಾಂಗ್ರೆಸ್‌ನ ಗ್ಯಾರಂಟಿಗಳ ಬಗ್ಗೆ ಮತ್ತು ಸರ್ಕಾರದ ಮುಂದಾಲೋಚನೆಗಳ ಕುರಿತು, ಕೈಗೊಳ್ಳುವ ಕಾರ್ಯಕ್ರಮಗಳ ಬಗ್ಗೆ ರಾಜ್ಯಪಾಲರಿಂದ ಓದಿಸಲಾಗುತ್ತದೆ.

ಜುಲೈ 7 ರಂದು ಬಜೆಟ್ ಮಂಡನೆ : ಜು.7 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಮಂಡನೆ ಮಾಡಲಿದ್ದಾರೆ. ಈ ಬಗ್ಗೆ ಇತ್ತೀಚೆಗೆ ಸಿದ್ದರಾಮಯ್ಯ ಅವರೇ ಮಾಹಿತಿ ನೀಡಿದ್ದರು. ಜಂಟಿ ಅಧಿವೇಶನ ಆರಂಭದ ಬಳಿಕ ಮೂರು ದಿನ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆ ನಡೆಯಲಿದ್ದು, ನಂತರ ಮುಖ್ಯಮಂತ್ರಿಗಳು ಉತ್ತರ ನೀಡಲಿದ್ದಾರೆ. 7 ರಂದು ಬಜೆಟ್ ಮಂಡಿಸಿದ ಬಳಿಕ ಬಜೆಟ್ ಮೇಲಿನ ಚರ್ಚೆ ನಡೆಯಲಿದೆ.

ಇದನ್ನೂ ಓದಿ : Congress Guarentee: ಬಿಪಿಎಲ್ ಕಾರ್ಡುದಾರರಿಗೆ ಈ ತಿಂಗಳು ಹಣ ಸಿಗೋದಿಲ್ಲ: ಸಚಿವ ಜಾರಕಿಹೊಳಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.