ETV Bharat / state

Live video: ಬೆಂಗಳೂರಿನಲ್ಲಿ ನೋಡ ನೋಡುತ್ತಿದ್ದಂತೆ ಕಟ್ಟಡ ಕುಸಿತ.. ಸ್ವಲ್ಪದರಲ್ಲೇ ತಪ್ಪಿದ ಅನಾಹುತ - ಸಿಲಿಕಾನ್​ ಸಿಟಿ

ಬೆಂಗಳೂರಿನ ಲಕ್ಕಸಂದ್ರದಲ್ಲಿ ಇದ್ದಕ್ಕಿದ್ದಂತೆ ಮೂರು ಅಂತಸ್ತಿನ ಕಟ್ಟಡವೊಂದು ಕುಸಿದಿದ್ದು, ವಿಡಿಯೋ ಸಹ ಲಭ್ಯವಾಗಿದೆ.

Building collapse in bengaluru
ಕಟ್ಟಡ ಕುಸಿತ
author img

By

Published : Sep 27, 2021, 1:10 PM IST

Updated : Sep 27, 2021, 1:48 PM IST

ಬೆಂಗಳೂರು: ನಗರದ ವಿಲ್ಸನ್ ಗಾರ್ಡನ್ ಬಳಿಯ ಲಕ್ಕಸಂದ್ರದಲ್ಲಿ ಇದ್ದಕ್ಕಿದ್ದಂತೆ ಮೂರು ಅಂತಸ್ತಿನ ಕಟ್ಟಡವೊಂದು ಕುಸಿದಿದ್ದು, ಅದೃಷ್ಟವಶಾತ್​ ಮನೆಯಲ್ಲಿ ಇದ್ದವರೆಲ್ಲ ಹೊರಗೆ ಓಡಿ ಬಂದು ಬಚಾವ್ ಆಗಿದ್ದಾರೆ.

ಲಕ್ಕಸಂದ್ರದಲ್ಲಿ ಇದ್ದಕ್ಕಿದ್ದಂತೆ ಮೂರು ಅಂತಸ್ತಿನ ಕಟ್ಟಡ ಕುಸಿದಿದೆ. ಕಳೆದ ಎರಡು ವರ್ಷದ ಹಿಂದೆ ಕಟ್ಟಡವು ಸ್ವಲ್ಪ ವಾಲಿತ್ತು. ಇಂದು ಬೆಳಗ್ಗೆ ಕಟ್ಟಡವು ಈ ಹಿಂದಿಗಿಂತಲೂ ಹೆಚ್ಚು ಬಾಗಿದ್ದು, ಅವಘಡದ ಮುನ್ಸೂಚನೆ ಅರಿತು ಮನೆಯಲ್ಲಿ ಇದ್ದವರೆಲ್ಲಾ ಹೊರಗೆ ಓಡಿ ಬಂದಿದ್ದಾರೆ. ಹೀಗಾಗಿ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

ಕಟ್ಟಡ ಕುಸಿತದ ವಿಡಿಯೋ

ಈ ಬಗ್ಗೆ ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಲಾಗಿದ್ದು, ಸಿಬ್ಬಂದಿ ಬರುವ ವೇಳೆಗಾಗಲೇ ಕಟ್ಟಡ ಕುಸಿದಿತ್ತು. ಕಟ್ಟಡವು 1962ರಲ್ಲಿ ನಿರ್ಮಾಣವಾಗಿತ್ತು ಎಂದು ತಿಳಿದುಬಂದಿದೆ. ಕಟ್ಟಡ ಕುಸಿದು ಬೀಳುತ್ತಿರುವ ವಿಡಿಯೋ ಇದೀಗ ಲಭ್ಯವಾಗಿದೆ.

ಇದನ್ನೂ ಓದಿ: ಹಾವೇರಿ: ಪ್ರತಿಭಟನೆ ವೇಳೆ ಆತ್ಮಹತ್ಯೆಗೆ ಯತ್ನಿಸಿದ ಇಬ್ಬರು ರೈತರು

Last Updated : Sep 27, 2021, 1:48 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.