ETV Bharat / state

ಬೆಂಗಳೂರು: ಕಟ್ಟಡ ಕುಸಿದು ಇಬ್ಬರು ಕಾರ್ಮಿಕರು ಸಾವು.. ಮೂವರು ಗಂಭೀರ

author img

By

Published : Oct 11, 2022, 3:23 PM IST

ಬೆಂಗಳೂರಿನಲ್ಲಿ ಕಟ್ಟಡ ಕುಸಿದು ಬಿದ್ದು ಬಿಹಾರ ಮೂಲದ ಇಬ್ಬರು ಕಾರ್ಮಿಕರು ಸಾವನ್ನಪ್ಪಿ, ಮೂವರು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.

building-collapsed-in-banglore
ಬೆಂಗಳೂರು : ಕಟ್ಟಡ ಕುಸಿದು ಇಬ್ಬರು ಕಾರ್ಮಿಕರು ಸಾವು.. ಮೂವರು ಗಂಭೀರ

ಬೆಂಗಳೂರು : ಕಟ್ಟಡ ಕುಸಿದು ಬಿದ್ದು ಇಬ್ಬರು ಬಿಹಾರ ಮೂಲದ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಂಭೀರ ಗಾಯಗೊಂಡಿರುವ ಘಟನೆ ಹೂಡಿ ಸಮೀಪದ ಗ್ರಾಫೈಟ್ ಇಂಡಿಯಾ ಬಳಿ ನಡೆದಿದೆ.

ಇಂದು ಮುಂಜಾನೆ 5 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಮೂವರು ಗಾಯಾಳುಗಳನ್ನು ರಕ್ಷಿಸಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.

ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ಬಿಹಾರ ಮೂಲದ ಜೈನುದ್ದೀನ್, ಅರ್ಮಾನ್ ಮೃತ ದುರ್ದೈವಿಗಳಾಗಿದ್ದು, ಬಿಎಲ್ ಆರ್ ಕಂಪನಿಗೆ ಸೇರಿದ ಕಟ್ಟಡ ತೆರವು ಮಾಡುವಾಗ ಈ ದುರ್ಘಟನೆ ನಡೆದಿದೆ. ನಿನ್ನೆ ರಾತ್ರಿ ಮಳೆ ಬಂದ ಹಿನ್ನೆಲೆ ಕಟ್ಟಡದ ಕೆಳ ಕೊಠಡಿಯಲ್ಲಿ ಮಲಗಿದ್ದ ಕಾರ್ಮಿಕರ ಮೇಲೆ ಏಕಾಏಕಿ ಮೇಲ್ಛಾವಣಿ ಕುಸಿದಿದೆ ಎಂದು ತಿಳಿದುಬಂದಿದೆ. ಮಹದೇವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಜಿಂಕೆ ಮಾಂಸ ಸಾಗಣೆ: ಮೈಸೂರಿನಲ್ಲಿ ಇಬ್ಬರು ಆರೋಪಿಗಳ ಬಂಧನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.