ದೇವನಹಳ್ಳಿ (ಬೆಂಗಳೂರು ಗ್ರಾಮಾಂತರ): ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಬೆಳಗ್ಗೆ ಅಪಘಾತ ಸಂಭವಿಸಿದೆ. ಟರ್ಮಿನಲ್ 2ರಿಂದ ಟರ್ಮಿನಲ್ 1ಕ್ಕೆ ಪ್ರಯಾಣಿಕರನ್ನು ಶಿಫ್ಟ್ ಮಾಡುವಾಗ ಶೆಟಲ್ ಬಸ್ ಟಿ2 ಪಿಲ್ಲರ್ಗೆ ಡಿಕ್ಕಿ ಹೊಡೆಯಿತು. ಬಸ್ನಲ್ಲಿದ್ದ 15 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ.
ಮುಂಜಾನೆ 5.15ಕ್ಕೆ ಅವಘಡ ಸಂಭವಿಸಿದೆ. ಘಟನೆ ವೇಳೆ ಬಸ್ನಲ್ಲಿ ಒಟ್ಟು 17 ಮಂದಿ ಪ್ರಯಾಣಿಕರು (15 ಪ್ಯಾಕ್ಸ್ ಮತ್ತು 2 ಸಿಬ್ಬಂದಿ) ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಗಾಯಾಳುಗಳನ್ನು ತಕ್ಷಣ ವಿಮಾನ ನಿಲ್ದಾಣದಲ್ಲಿರುವ ಆಸ್ಟರ್ ಆಸ್ಪತ್ರೆಗೆ ಸಾಗಿಸಲಾಗಿದೆ. ಐದಾರು ಪ್ರಯಾಣಿಕರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ. ಚಾಲಕನ ನಿರ್ಲಕ್ಷ್ಯದಿಂದ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಸ್ನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇಂಟರ್ನ್ಯಾಷನಲ್ ಏರ್ಪೋರ್ಟ್ ಲಿಮಿಟೆಡ್ (BIAL)ನ ಅಧಿಕೃತ ಹೇಳಿಕೆಯ ಪ್ರಕಾರ, "ಇಂದು ಮುಂಜಾನೆ 5.15ಕ್ಕೆ ದೆಹಲಿಯಿಂದ ಏರ್‌ಏಷ್ಯಾ ಇಂಡಿಯಾ ವಿಮಾನದಲ್ಲಿ ಬಂದ ಪ್ರಯಾಣಿಕರನ್ನು ವಿಮಾನ ನಿಲ್ದಾಣದ ಟರ್ಮಿನಲ್ 2ರಿಂದ ಟರ್ಮಿನಲ್ 1ಕ್ಕೆ ಕರೆದೊಯ್ಯುವಾಗ ಶೆಟಲ್ ಬಸ್ T2 ಆಗಮನ ನಿರ್ಗಮನ ರಸ್ತೆಯ ಬಳಿ ಪಿಲ್ಲರ್ಗೆ ಡಿಕ್ಕಿ ಹೊಡೆದಿದೆ. ಬಸ್ನಲ್ಲಿ ಒಟ್ಟು 15 ಮಂದಿ ಪ್ರಯಾಣಿಕರು ಹಾಗೂ ಇಬ್ಬರು ವಿಮಾನ ನಿಲ್ದಾಣದ ಸಿಬ್ಬಂದಿ ಇದ್ದರು. ಗಾಯಾಳುಗಳನ್ನು ತಕ್ಷಣದ ವೈದ್ಯಕೀಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು" ಎಂದು ಮಾಹಿತಿ ನೀಡಿದೆ.
ಇದನ್ನೂ ಓದಿ: Tumkur accident: ತುಮಕೂರಿನಲ್ಲಿ ಲಾರಿ-ಆಟೋ ನಡುವೆ ಭೀಕರ ರಸ್ತೆ ಅಪಘಾತ; ತಾಯಿ, ಮಗಳು ಸ್ಥಳದಲ್ಲೇ ಸಾವು
ಲಾರಿ-ಆಟೋ ನಡುವೆ ಭೀಕರ ರಸ್ತೆ ಅಪಘಾತ: ಕ್ಯಾಂಟರ್ ಲಾರಿ ಹಾಗೂ ಆಟೋ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ತಾಯಿ ಮತ್ತು ಮಗಳು ಸಾವಿಗೀಡಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ. ತುಮಕೂರು ನಗರದ ಬಂಡಿಮನೆ ಕಲ್ಯಾಣ ಮಂಟಪದ ಬಳಿ ಇತ್ತೀಚೆಗೆ ಈ ಘಟನೆ ನಡೆದಿತ್ತು. ನಗರದ ಕುಂಟಮ್ಮದ ತೋಟದ ನಿವಾಸಿಗಳಾದ ಶಾಂತಲಕ್ಷ್ಮಿ (30) ಹಾಗೂ ಚಿನ್ಮಯಿ (5) ಮೃತರು.
ಜೂ. 15ರ ರಾತ್ರಿ 11 ಗಂಟೆ ಸುಮಾರಿಗೆ ಭೀಮಸಂದ್ರದಲ್ಲಿ ಸಂಬಂಧಿಕರ ಮದುವೆ ಮುಗಿಸಿ ಆಟೋದಲ್ಲಿ ನಾಲ್ವರು ತುಮಕೂರು ನಗರಕ್ಕೆ ಬರುತ್ತಿದ್ದರು. ತುಮಕೂರು ಕಡೆಯಿಂದ ಹೋಗುತ್ತಿದ್ದ ಕ್ಯಾಂಟರ್ ಲಾರಿಯ ಬ್ರೇಕ್ ಕಟ್ ಆಗಿ ಆಟೋಗೆ ಡಿಕ್ಕಿ ಹೊಡೆದಿದೆ. ಶಾಂತಲಕ್ಷ್ಮೀ ಅವರ ಪುತ್ರ ತನ್ಮಯ್ ಹಾಗೂ ಆಟೋ ಚಾಲಕ ಗಿರೀಶ್ಗೆ ಗಂಭೀರ ಗಾಯಗೊಂಡಿದ್ದರು. ತಾಯಿ ಮತ್ತು ಮಗಳು ಸ್ಥಳದಲ್ಲೇ ಅಸುನೀಗಿದ್ದರು. ತನ್ಮಯ್ಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗಿರೀಶ್ಗೆ ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ತುಮಕೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಅಪಘಾತದಲ್ಲಿ ಗಾಯಗೊಂಡು ರಸ್ತೆಬದಿ ನರಳುತ್ತಿದ್ದ ವ್ಯಕ್ತಿಗೆ ಕೊರಟಗೆರೆ ತಹಶೀಲ್ದಾರ್ ನೆರವು: ವಿಡಿಯೋ