ETV Bharat / state

ಚಲಿಸುತ್ತಿದ್ದ ಬಿಎಂಟಿಸಿ ಬಸ್​ನಲ್ಲಿ ಕಾಣಿಸಿಕೊಂಡ ಬೆಂಕಿ: ಪ್ರಾಣಾಪಾಯದಿಂದ ಪಾರಾದ 40 ಪ್ರಯಾಣಿಕರು

ಚಲಿಸುತ್ತಿದ್ದ ಬಿಎಂಟಿಸಿ ಬಸ್​ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 40 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

Bus catches fire in Bengaluru, BMTC Bus catches fire in Chamarajapete, BMTC Bus fire news, Bangalore news, ಬೆಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್​ಗೆ ಬೆಂಕಿ, ಚಾಮರಾಜಪೇಟೆಯಲ್ಲಿ ಬಿಎಂಟಿಸಿ ಬಸ್​ಗೆ ಬೆಂಕಿ, ಬಿಎಂಟಿಸಿ ಬಸ್​ಗೆ ಬೆಂಕಿ ಸುದ್ದಿ, ಬೆಂಗಳೂರು ಸುದ್ದಿ,
ಚಲಿಸುತ್ತಿದ್ದ ಬಿಎಂಟಿಸಿ ಬಸ್​ನಲ್ಲಿ ಕಾಣಿಸಿಕೊಂಡ ಬೆಂಕಿ
author img

By

Published : Jan 21, 2022, 12:36 PM IST

ಬೆಂಗಳೂರು: ನಗರದ ಚಾಮರಾಜಪೇಟೆಯ ರಸ್ತೆಯಲ್ಲಿ ಚಲಿಸುತ್ತಿದ್ದ ಬಿಎಂಟಿಸಿ ಬಸ್​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳದಲ್ಲಿ ಕೆಲ ಹೊತ್ತು ಆತಂಕಕಾರಿ ವಾತಾವಾರಣ ನಿರ್ಮಾಣವಾಗಿತ್ತು‌.

ಚಲಿಸುತ್ತಿದ್ದ ಬಿಎಂಟಿಸಿ ಬಸ್​ನಲ್ಲಿ ಕಾಣಿಸಿಕೊಂಡ ಬೆಂಕಿ

ಮೆಜೆಸ್ಟಿಕ್​ನಿಂದ ಚಾಮರಾಜಪೇಟೆಯ ಮಕ್ಕಳ ಕೂಟ ಬಳಿ ಬರುವಾಗ ಇದಕ್ಕಿಂದ್ದಂತೆ ಸಣ್ಣ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ.‌ ಕೂಡಲೇ ಬಿಎಂಟಿಸಿ ಚಾಲಕ ಬಸ್​ನಲ್ಲಿದ್ದ 40 ಮಂದಿ ಪ್ರಯಾಣಿಕರನ್ನ ಕೆಳಗಿಳಿಸಿದ್ದಾರೆ. ನೋಡು ನೋಡುತ್ತಿದ್ದಂತೆ ಬಸ್ ಧಗಧಗನೆ ಹೊತ್ತಿ ಉರಿದಿದೆ.

ಓದಿ: ಆ ಚಾರಿಟಿ ಸಹಾಯ ಹಸ್ತದ ಕೆಲಸಕ್ಕೆ ಪ್ರಿನ್ಸ್​ ಫ್ಯಾಮಿಲಿ ಫಿದಾ..! ಸಂಸ್ಥೆಯ ಬೆನ್ನುತಟ್ಟಿದ ಯುವರಾಜ!!

ಇನ್ನು ಬೆಂಕಿಗೆ ಬಸ್​ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ವಾಹನ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅದೃಷ್ಟವಶಾತ್ ಸಾವು-ನೋವು ಸಂಭವಿಸಿಲ್ಲ. ಘಟನಾಸ್ಥಳಕ್ಕೆ ವಿವಿಪುರಂ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.