ETV Bharat / state

ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ಬಸ್ ಸಂಚಾರ ನಾಳೆಯಿಂದ ಆರಂಭ - inter state bus service

ಪ್ರಯಾಣಿಕರ ಅನುಕೂಲಕ್ಕಾಗಿ ಜೂನ್ 25ರಿಂದ ಬೆಂಗಳೂರು, ಶಿವಮೊಗ್ಗ ಮತ್ತು ಮಂಗಳೂರು ಒಳಗೊಂಡಂತೆ ರಾಜ್ಯದ ವಿವಿಧ ಸ್ಥಳಗಳಿಂದ ಮಹಾರಾಷ್ಟ್ರಕ್ಕೆ ಬಸ್​ ಸೇವೆ ಆರಂಭಗೊಳ್ಳಲಿದೆ.

Bus service from Karnataka to Maharashtra
ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ಬಸ್ ಸೇವೆ
author img

By

Published : Jun 24, 2021, 6:21 PM IST

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಚೇರಿಯಿಂದ ಪತ್ರಿಕಾ ಪ್ರಕಟಣೆ ಹೊರಬಿದ್ದಿದ್ದು, ನಾಳೆಯಿಂದ ಮಹಾರಾಷ್ಟ್ರಕ್ಕೆ ಬಸ್​ ಸೇವೆ ಆರಂಭಗೊಳ್ಳಲಿದೆ.

ಕೋವಿಡ್-19 ಲಾಕ್‌ಡೌನ್ ಹಿನ್ನೆಲೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಅಂತರ್​ ರಾಜ್ಯ ಸಾರಿಗೆಗಳ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿತ್ತು. ಪ್ರಸ್ತುತ ಕೋವಿಡ್-19 ಲಾಕ್‌ಡೌನ್ ಸಡಿಲಗೊಂಡಿರುವ ಹಿನ್ನೆಲೆ, ಪ್ರಯಾಣಿಕರ ಅನುಕೂಲಕ್ಕಾಗಿ ಜೂನ್ 25ರಿಂದ ಬೆಂಗಳೂರು, ಶಿವಮೊಗ್ಗ ಮತ್ತು ಮಂಗಳೂರು ಒಳಗೊಂಡಂತೆ ರಾಜ್ಯದ ವಿವಿಧ ಸ್ಥಳಗಳಿಂದ ಮಹಾರಾಷ್ಟ್ರ ರಾಜ್ಯದ ಮುಂಬೈ, ಪುಣೆ, ಮೀರಜ್, ಸೊಲ್ಲಾಪುರ, ಪಂಡರಾಪುರ ಮತ್ತು ತುಳಜಾಪುರಕ್ಕೆ ಬಸ್​ ಸೇವೆ ಆರಂಭಗೊಳ್ಳಲಿದೆ.

ಪ್ರಯಾಣಿಕರ ದಟ್ಟಣೆ ಮತ್ತು ಅವಶ್ಯಕತೆಗೆ ಅನುಗುಣವಾಗಿ ಶೇಕಡ 50 ರಷ್ಟು ಪ್ರಯಾಣಿಕರಿಗೆ ಅವಕಾಶವಿದ್ದು, ಸಾರಿಗೆಗಳ ಕಾರ್ಯಾಚರಣೆಯನ್ನು ಪುನರಾರಂಭಿಸಲಾಗುತ್ತಿದೆ ಎಂದು ಕ.ರಾ.ರ.ಸಾ. ನಿಗಮದ ಮುಖ್ಯ ಸಂಚಾರ ವ್ಯವಸ್ಥಾಪಕರು ತಿಳಿಸಿದ್ದಾರೆ.

ಇದನ್ನೂ ಓದಿ: ನೀವು ಬೇಕಾದರೂ ಸಿಎಂ ಸ್ಥಾನಕ್ಕೆ ಪ್ರಯತ್ನಿಸಿ: ಡಿ.ಕೆ. ಶಿವಕುಮಾರ್ ಹಾಸ್ಯ ಚಟಾಕಿ

ಬೆಂಗಳೂರು ನಗರವನ್ನು ಎರಡು ಬಸ್​ಗಳು ಮಧ್ಯಾಹ್ನ 3 ಗಂಟೆ ಮತ್ತು 3.30ಕ್ಕೆ ಬಿಟ್ಟು, ಮುಂಬೈ ನಗರವನ್ನು ಮಾರನೆಯ ದಿನ ಸಂಜೆ 6ಕ್ಕೆ ಮುಟ್ಟಲಿದೆ. ಎಲ್ಲ ಪ್ರಯಾಣಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕಾಗಿರುತ್ತದೆ. ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುವಾಗ ಪ್ರಯಾಣಿಕರು ಕಡ್ಡಾಯವಾಗಿ ಕೋವಿಡ್-19 ಮಾರ್ಗಸೂಚಿಗಳನ್ನು ಪಾಲಿಸಲು ಕೋರುತ್ತೇನೆ ಎಂದಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.