ETV Bharat / state

ಸಿದ್ಧಾರ್ಥ್​ ಒಂದು ನಂದಾದೀಪ, ಇಷ್ಟು ಬೇಗ ಆರಿಹೋಗಬಾರದಿತ್ತು: ದೇವೇಗೌಡ್ರು

ಸಿದ್ದಾರ್ಥ್ ಅವರದು ತುಂಬಾ ಸರಳ ವ್ಯಕ್ತಿತ್ವ. ಸಾವಿರಾರು ಜನಕ್ಕೆ ಸ್ವಾಭಿಮಾನದಿಂದ ಬದುಕಲು ದಾರಿ ಮಾಡಿಕೊಟ್ಟಿದ್ದ ನಂದಾದೀಪ‌. ಈ ದಿನ ಆ ನಂದಾದೀಪ ಆರಿಹೋದ ಸುದ್ದಿ ಕೇಳಿ ನಮಗೆಲ್ಲಾ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡ ಹೇಳಿದ್ದಾರೆ.

ಉದ್ಯಮಿ ನಿಧನಕ್ಕೆ ದೇವೇಗೌಡ ಕಂಬನಿ ಮಿಡಿದಿದ್ದಾರೆ.
author img

By

Published : Jul 31, 2019, 8:25 AM IST

ಬೆಂಗಳೂರು: ಉದ್ಯಮಿ ಸಿದ್ದಾರ್ಥ್ ಅವರ ನಿಧನದ ಸುದ್ದಿಯಿಂದ ತೀವ್ರ ಆಘಾತವಾಗಿದೆ. ನಿಜಕ್ಕೂ ಅವರ ನಿಧನದಿಂದ ದೇಶಕ್ಕೆ ತುಂಬಲಾಗದ ನಷ್ಟ ಉಂಟಾಗಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಕಂಬನಿ ಮಿಡಿದಿದ್ದಾರೆ.

ಸಿದ್ದಾರ್ಥ್ ಅವರದು ತುಂಬಾ ಸರಳ ವ್ಯಕ್ತಿತ್ವ. ಸಾವಿರಾರು ಜನಕ್ಕೆ ಸ್ವಾಭಿಮಾನದಿಂದ ಬದುಕಲು ದಾರಿ ಮಾಡಿಕೊಟ್ಟಿದ್ದ ನಂದಾದೀಪ‌. ಈ ದಿನ ಆ ನಂದಾದೀಪ ಆರಿಹೋದ ಸುದ್ದಿ ಕೇಳಿ ನಮಗೆಲ್ಲಾ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇಡೀ ದೇಶಕ್ಕೆ ಕಗ್ಗತ್ತಲಾವರಿಸಿದೆ ಎಂದು ಹೇಳಿದ್ದಾರೆ.

ಸುಮಾರು 35 ವರ್ಷಗಳಿಂದ ನಾನು ಸಿದ್ದಾರ್ಥ್ ಅವರನ್ನು ಬಲ್ಲೆ. ಈ ದಿನ ಆ ಸಜ್ಜನ ವ್ಯಕ್ತಿ ಇಲ್ಲಾ ಎಂದರೆ ನನಗೆ ನಂಬಲಸಾಧ್ಯ. ಅವರ ಈ ದಾರುಣ ಸಾವಿಗೆ ಸರ್ಕಾರ ಸೂಕ್ತ ತನಿಖೆ ನಡೆಸಲಿ ಎಂದಿದ್ದಾರೆ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ ಮತ್ತು ಅವರ ಕುಟುಂಬಕ್ಕೆ ಹಾಗೂ ನಾಡಿನ ಅಸಂಖ್ಯಾತ ಕಾರ್ಮಿಕ ಬಂಧುಗಳಿಗೆ, ಅವರ ಅಭಿಮಾನಿಗಳಿಗೆ ದೇವರು ದುಃಖ ಭರಿಸುವ ಶಕ್ತಿ ತುಂಬಲಿ ಎಂದು ದೇವೇಗೌಡರು ಪ್ರಾರ್ಥಿಸಿದ್ದಾರೆ.

Intro:ಬೆಂಗಳೂರು : ಹೆಸರಾಂತ ಉದ್ಯಮಿ ಸಿದ್ದಾರ್ಥ್ ಅವರ ನಿಧನದ ಸುದ್ದಿಯಿಂದ ತೀವ್ರ ಆಘಾತವಾಗಿದೆ. ನಿಜಕ್ಕೂ ಅವರ ನಿಧನದಿಂದ ದೇಶಕ್ಕೆ ತುಂಬಲಾಗದ ನಷ್ಟ ಉಂಟಾಗಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಕಂಬನಿ ಮಿಡಿದಿದ್ದಾರೆ.Body:ಸಿದ್ದಾರ್ಥ್ ಅವರದು ತುಂಬಾ ಸರಳ ವ್ಯಕ್ತಿತ್ವ. ಸಾವಿರಾರು ಜನಕ್ಕೆ ಸ್ವಾಭಿಮಾನದಿಂದ ಬದುಕಲು ದಾರಿ ಮಾಡಿಕೊಟ್ಟಿದ್ದ ನಂದಾದೀಪ‌. ಈ ದಿನ ಆ ನಂದಾದೀಪ ಹಾರಿಹೋದ ಸುದ್ದಿ ಕೇಳಿ ನಮಗೆಲ್ಲಾ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇಡೀ ದೇಶಕ್ಕೆ ಕಗ್ಗತ್ತಲಾವರಿಸಿದೆ ಎಂದು ಹೇಳಿದ್ದಾರೆ.
ಸುಮಾರು 35 ವರ್ಷಗಳಿಂದ ನಾನು ಸಿದ್ದಾರ್ಥ್ ಅವರನ್ನು ಬಲ್ಲೆ. ಈ ದಿನ ಆ ಸಜ್ಜನ ವ್ಯಕ್ತಿ ಇಲ್ಲಾ ಎಂದರೆ ನನಗೆ ನಂಬಲಸಾಧ್ಯ. ಅವರ ಈ ದಾರುಣ ಸಾವಿಗೆ ಸರ್ಕಾರ ಸೂಕ್ತ ತನಿಖೆ ನಡೆಸಲಿ ಎಂದಿದ್ದಾರೆ.
ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ ಮತ್ತು
ಅವರ ಕುಟುಂಬಕ್ಕೆ ಹಾಗೂ ನಾಡಿನ ಅಸಂಖ್ಯಾತ ಕಾರ್ಮಿಕ ಬಂಧುಗಳಿಗೆ, ಅವರ ಅಭಿಮಾನಿಗಳಿಗೆ ದೇವರು ದುಃಖ ಬರಿಸುವ ಶಕ್ತಿ ತುಂಬಲಿ ಎಂದು ದೇವೇಗೌಡರು ಪ್ರಾರ್ಥಿಸಿದ್ದಾರೆ.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.