ಬೆಂಗಳೂರು: ವಿಧಾನಸಭಾ ಉಪಚುನಾವಣೆ ಹಿನ್ನೆಲೆಯಲ್ಲಿ ಸೆ. 27ಕ್ಕೆ ನಡೆಯಬೇಕಿದ್ದ ಬಿಬಿಎಂಪಿ ಮೇಯರ್ ಹಾಗೂ ಉಪಮೇಯರ್ ಚುನಾವಣೆ ಮುಂದೂಡಿಕೆಯಾಗುವ ಸಾಧ್ಯತೆಯಿದ್ದು, ಪ್ರಾದೇಶಿಕ ಚುನಾವಣಾ ಆಯುಕ್ತ ಹರ್ಷ ಗುಪ್ತ ಹೊಸ ದಿನಾಂಕ ನಿಗದಿ ಮಾಡಿ ಆದೇಶ ಹೊರಡಿಸಲಿದ್ದಾರೆ ಎನ್ನಲಾಗ್ತಿದೆ.
ಸೆ.27ಕ್ಕೆ ನಡೆಯಬೇಕಿದ್ದ ಮೇಯರ್ ಹಾಗೂ ಉಪಮೇಯರ್ ಚುನಾವಣೆಯನ್ನು ನಿಗದಿಯಂತೆ ನಡೆಸಬೇಕೋ, ಬೇಡವೋ ಎಂದು ಸಲಹೆ ಕೋರಿ ಪ್ರಾದೇಶಿಕ ಚುನಾವಣಾ ಆಯುಕ್ತರು ರಾಜ್ಯ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದು, ಅಲ್ಲಿಂದ ಯಾವ ನಿರ್ಧಾರ ಬರುತ್ತದೆ ಎಂದು ಕಾದು ನೋಡಬೇಕಿದೆ ಎಂದು ಬಿಬಿಎಂಪಿ ಕೌನ್ಸಿಲ್ ಕಾರ್ಯದರ್ಶಿ ಪಲ್ಲವಿ ತಿಳಿಸಿದ್ದಾರೆ.
ಮೇಯರ್, ಸ್ಥಾಯಿ ಸಮಿತಿ ಚುನಾವಣೆಗಳು ನಡೆದರೆ ಉಪಚುನಾವಣೆ ಮೇಲೆ ಪ್ರಭಾವ ಬೀರಬಹುದು ಎಂಬ ಕಾರಣಕ್ಕೆ ಮೇಯರ್ ಚುನಾವಣೆ ಮುಂದೂಡುವಂತೆ ಆಡಳಿತ ಪಕ್ಷದ ನಾಯಕ ವಾಜಿದ್ ಪತ್ರ ಬರೆದಿದ್ದರು. ಈ ಹಿನ್ನೆಲೆಯಲ್ಲಿ ಮೇಯರ್ ಚುನಾವಣೆ ಮುಂಡಿಕೆಯಾಗುವ ಸಾಧ್ಯತೆ ಹೆಚ್ಚಿದೆ ಎನ್ನಲಾಗುತ್ತಿದೆ.