ಬೆಂಗಳೂರು: ಉಪ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಅಂತಿಮಗೊಳ್ಳದೇ ಇದ್ದರೂ ಉಸ್ತುವಾರಿಗಳನ್ನು ನೇಮಕ ಮಾಡುವ ಮೂಲಕ ಚುನಾವಣಾ ಅಖಾಡಕ್ಕೆ ಬಿಜೆಪಿ ಎಂಟ್ರಿ ಕೊಟ್ಟಿದೆ.
ಉಪ ಚುನಾವಣೆ ನಡೆಯುವ ಎಲ್ಲಾ 15 ಕ್ಷೇತ್ರಗಳಿಗೂ ಚುನಾವಣಾ ಉಸ್ತುವಾರಿಗಳನ್ನು ನೇಮಕ ಮಾಡಿ ಜವಾಬ್ದಾರಿ ಹಂಚಿಕೆ ಮಾಡಿದೆ. ಚುನಾವಣೆ ಮುಗಿಯುವವರೆಗೂ ಉಸ್ತುವಾರಿಗಳು ಕ್ಷೇತ್ರದಲ್ಲಿದ್ದು ಚುನಾವಣಾ ಪ್ರಚಾರ ನಡೆಸಲಿದ್ದಾರೆ, ಅಭ್ಯರ್ಥಿಗಳನ್ನು ಗೆಲ್ಲಿಸುವ ಹೊಣೆಗಾರಿಕೆ ನಿಭಾಯಿಸಲಿದ್ದಾರೆ. ಪ್ರಚಾರ ಕಾರ್ಯ ಇತ್ಯಾದಿಗಳನ್ನು ಆಯೋಜಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಉಪಚುನಾವಣಾ ಬಿಜೆಪಿ ಉಸ್ತುವಾರಿಗಳು:
ಅಥಣಿ- ಸಚಿವ ಕೆ.ಎಸ್. ಈಶ್ವರಪ್ಪ, ಡಿಸಿಎಂ ಲಕ್ಷ್ಮಣ ಸವದಿ ಮತ್ತು ಸಂಸದ ಅಣ್ಣಾ ಸಾಹೇಬ್ ಜೊಲ್ಲೆ
ಕಾಗವಾಡ- ಸಚಿವ ಸಿ.ಸಿ. ಪಾಟೀಲ್ , ವಿಧಾನ ಪರಿಷತ್ ಮುಖ್ಯ ಸಚೇತಕ ಮಹಾಂತೇಶ್ ಕವಟಗಿಮಟ, ಶಾಸಕರಾದ ಪಿ. ರಾಜೀವ್ ಮತ್ತು ಅರವಿಂದ ಬೆಲ್ಲದ್
ಗೋಕಾಕ್- ಕೇಂದ್ರ ಸಚಿವ ಸುರೇಶ್ ಅಂಗಡಿ, ಸಚಿವೆ ಶಶಿಕಲಾ ಜೊಲ್ಲೆ, ಶಾಸಕರಾದ ಅಭಯ ಪಾಟೀಲ್, ಎ.ಎಸ್. ಪಾಟೀಲ್ ನಡಹಳ್ಳಿ
ಯಲ್ಲಾಪುರ- ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ಸಂಸದ ಅನಂತಕುಮಾರ್ ಹೆಗಡೆ, ಶಾಸಕರಾದ ಸುನೀಲ್ ಕುಮಾರ್, ಹರೀಶ್ ಪೂಂಜಾ
ಹಿರೇಕೆರೂರು- ಗೃಹ ಸಚಿವ ಬಸವರಾಜ ಬೊಮ್ಮಾಯಿ, ಮಾಜಿ ಶಾಸಕ ಯು.ಬಿ. ಬಣಕಾರ್
ರಾಣೆಬೆನ್ನೂರು- ಸಚಿವ ಜಗದೀಶ್ ಶೆಟ್ಟರ್, ಸಚಿವ ಪ್ರಭು ಚೌಹಾಣ್, ಸಂಸದ ಜಿ.ಎಂ. ಸಿದ್ದೇಶ್ವರ, ಶಿವಮೊಗ್ಗ ಬಿಜೆಪಿ ಮುಖಂಡ ಗಿರೀಶ್ ಪಟೇಲ್
ವಿಜಯನಗರ- ಡಿಸಿಎಂ ಗೋವಿಂದ ಕಾರಣಜೋಳ, ಎಂಎಲ್ಸಿ ರವಿಕುಮಾರ್, ಸಂಸದ ಸಂಗಣ್ಣ ಕರಡಿ, ಬಿಜೆಪಿ ಪರಾಜಿತ ಅಭ್ಯರ್ಥಿ ಗವಿಯಪ್ಪ,
ಚಿಕ್ಕಬಳ್ಳಾಪುರ- ಸಚಿವ ಸಿ.ಟಿ. ರವಿ, ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ, ಸಂಸದ ಪಿ.ಸಿ. ಮೋಹನ್, ಸಂಸದ ಬಿ.ಎನ್. ಬಚ್ಚೇಗೌಡ, ಚಿಕ್ಕಬಳ್ಳಾಪುರ ಜಿಲ್ಲಾಧ್ಯಕ್ಷ ಮಂಜುನಾಥ್
ಕೆ.ಆರ್. ಪುರಂ- ಸಚಿವ ಆರ್. ಅಶೋಕ್, ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ, ಬಿಎಂಟಿಸಿ ಅಧ್ಯಕ್ಷ ನಂದೀಶ್ ರೆಡ್ಡಿ, ಶಾಸಕ ಸತೀಶ್ ರೆಡ್ಡಿ
ಯಶವಂತಪುರ- ಸಂಸದೆ ಶೋಭಾ ಕರಂದ್ಲಾಜೆ, ಶಾಸಕ ಎಂ. ಕೃಷ್ಣಪ್ಪ, ಮಾಜಿ ಎಂಎಲ್ಸಿಗಳಾದ ಅಶ್ವಥ್ ನಾರಾಯಣ, ಜಗ್ಗೇಶ್
ಮಹಾಲಕ್ಷ್ಮೀ ಲೇಔಟ್- ಸಚಿವ ವಿ. ಸೋಮಣ್ಣ, ಸಚಿವ ಸುರೇಶ್ ಕುಮಾರ್, ಬಿಜೆಪಿ ರಾಜ್ಯ ಖಜಾಂಚಿ ಸುಬ್ಬನರಸಿಂಹ
ಶಿವಾಜಿನಗರ- ಬೆಂಗಳೂರು ಮಹಾ ನಗರ ಅಧ್ಯಕ್ಷ ಪಿ.ಎನ್. ಸದಾಶಿವ, ಬೆಂಗಳೂರು ನಗರ ಜಿಲ್ಲಾ ಅಧ್ಯಕ್ಷ ಎಸ್. ಮುನಿರಾಜು, ರಾಜ್ಯ ಬಿಜೆಪಿ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನಾ, ಶಾಸಕ ಎಸ್. ರಘು
ಹೊಸಕೋಟೆ- ಡಿಸಿಎಂ ಡಾ. ಅಶ್ವಥ್ ನಾರಾಯಣ, ಸಿಎಂ ರಾಜಕೀಯ ಕಾರ್ಯದರ್ಶ ಎಸ್. ಅರ್. ವಿಶ್ವನಾಥ್, ಎಂಎಲ್ಸಿ ವೈ.ಎ. ನಾರಾಯಣಸ್ವಾಮಿ
ಕೆ.ಆರ್. ಪೇಟೆ- ಸಚಿವ ಜೆ.ಸಿ. ಮಾಧುಸ್ವಾಮಿ, ಯುವ ಮೋರ್ಛಾ ಪ್ರಧಾನ ಕಾರ್ಯದರ್ಶಿ ಬಿ.ವೈ. ವಿಜಯೇಂದ್ರ, ಶಾಸಕ ಪ್ರೀತಂ ಗೌಡ
ಹುಣಸೂರು- ಸಚಿವ ಶ್ರೀರಾಮುಲು, ಮಾಜಿ ಸಚಿವ ವಿಜಯಶಂಕರ್, ಸಂಸದ ಪ್ರತಾಪ್ ಸಿಂಹ, ಶಾಸಕ ಅಪ್ಪಚ್ಚು ರಂಜನ್.