ETV Bharat / state

ಉಪಚುನಾವಣೆ ಅಭ್ಯರ್ಥಿ ಆಯ್ಕೆ ಕಸರತ್ತು: ಯಾವ ಕ್ಷೇತ್ರದಲ್ಲಿ ಯಾರು ಪ್ರಬಲ 'ಕೈ' ಆಕಾಂಕ್ಷಿಗಳು? - congress meeting news

ಉಪಚುನಾವಣೆ ಅಭ್ಯರ್ಥಿಗಳ ಆಯ್ಕೆ ಕುರಿತು ರಾಜ್ಯ ಕಾಂಗ್ರೆಸ್​ ಉಸ್ತುವಾರಿ ಕೆ.ಸಿ.ವೇಣುಗೋಪಾಲ್​ ಇಂದು ಚರ್ಚೆ ನಡೆಸಿದರು. ಹೊಸಕೋಟೆ, ಕೆ.ಆರ್.ಪುರ, ಮಹಾಲಕ್ಷ್ಮಿ ಲೇಔಟ್, ಯಶವಂತಪುರ, ಶಿವಾಜಿನಗರ ಮತ್ತು ಚಿಕ್ಕಬಳ್ಳಾಪುರ ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ಕುರಿತು ಚರ್ಚೆ ನಡೆದಿದೆ.

ಕೆ.ಸಿ.ವೇಣುಗೋಪಾಲ್​ ಚರ್ಚೆ
author img

By

Published : Oct 15, 2019, 6:40 PM IST

ಬೆಂಗಳೂರು: ಕಾಂಗ್ರೆಸ್​ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಬೆಂಗಳೂರು ವಿಭಾಗದ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚೆ ನಡೆದಿದ್ದು, ಕೆಲ ಆಕಾಂಕ್ಷಿಗಳಿಗೆ ಚುನಾವಣೆಗೆ ಸಿದ್ಧರಾಗುವಂತೆ ಸೂಚನೆ ನೀಡಲಾಗಿದೆ.

ಉಪಚುನಾವಣೆ ಅಭ್ಯರ್ಥಿಗಳ ಆಯ್ಕೆ ಕುರಿತು ರಾಜ್ಯ ಕಾಂಗ್ರೆಸ್​ ಉಸ್ತುವಾರಿ ಕೆ.ಸಿ. ವೇಣುಗೋಪಾಲ್​ ಚರ್ಚೆ ನಡೆಸಿದರು. ಹೊಸಕೋಟೆ, ಕೆ.ಆರ್.ಪುರ, ಮಹಾಲಕ್ಷ್ಮಿ ಲೇಔಟ್, ಯಶವಂತಪುರ, ಶಿವಾಜಿನಗರ ಮತ್ತು ಚಿಕ್ಕಬಳ್ಳಾಪುರ ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ಕುರಿತು ಚರ್ಚೆ ನಡೆದಿದೆ. ಕೈ ಹಿರಿಯ ನಾಯಕರು ಈ ಆರು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಸಂಬಂಧ ಸಮಾಲೋಚನೆ ನಡೆಸಿದ್ದಾರೆ. ಯಾವ ಅಭ್ಯರ್ಥಿಯನ್ನು ಆಯ್ಕೆ ಮಾಡಿದರೆ ಗೆಲ್ಲುವ ಸಾಧ್ಯತೆ ಹೆಚ್ಚಿದೆ ಎಂಬ ಬಗ್ಗೆ ಚರ್ಚೆಯಾಗಿದೆ.

ಹೊಸಕೋಟೆ, ಕೆ.ಆರ್. ಪುರಂ, ಯಶವಂತಪುರದ ಆಕಾಂಕ್ಷಿಗಳಿಗೆ ಚುನಾವಣೆಗೆ ಸಿದ್ಧರಾಗುವಂತೆ ಸೂಚನೆ ನೀಡಲಾಗಿದೆ. ಪಟ್ಟಿಯನ್ನು ದೆಹಲಿಗೆ ಕಳಿಸಲು‌ ಸಭೆಯಲ್ಲಿ ನಿರ್ಧರಿಸಲಾಗಿದೆ. ಕಾಂಗ್ರೆಸ್ ಹೈಕಮಾಂಡ್ ಅಧಿಕೃತವಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದೆ.

  • ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳು:
  • ಹೊಸಕೋಟೆ - ಭೈರತಿ ಸುರೇಶ್ ಪತ್ನಿ ಪದ್ಮಾವತಿ
  • ಕೆ.ಆರ್.ಪುರ - ಎಂಎಲ್ ಸಿ ನಾರಾಯಣಸ್ವಾಮಿ
  • ಶಿವಾಜಿನಗರ - ರಿಜ್ವಾನ್ ಅರ್ಷದ್/ಸಲೀಂ ಅಹಮದ್/ಎಸ್‌.ಎ. ಹುಸೇನ್
  • ಮಹಾಲಕ್ಷ್ಮಿ ಲೇಔಟ್ - ಪಾಲಿಕೆ‌ ಸದಸ್ಯ ಶಿವರಾಜ್/ಮಂಜುನಾಥ್ ಗೌಡ
  • ಯಶವಂತಪುರ - ಜೆಡಿಎಸ್ ನ ಜವರೇಗೌಡ/ ಎಂ. ರಾಜಕುಮಾರ್/ಸದಾನಂದ
  • ಚಿಕ್ಕಬಳ್ಳಾಪುರ - ಜಿ.ಹೆಚ್.ನಾಗರಾಜ್/ ಆಂಜಿನಪ್ಪ/ ಯಲವಳ್ಳಿ ರಮೇಶ್

ಬಿಜೆಪಿ ಅತೃಪ್ತರ ಬಗ್ಗೆನೂ ಚರ್ಚೆ:

ಉಪಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಕೈ ತಪ್ಪುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸೇರಲು ಕೆಲ ಬಿಜೆಪಿ ನಾಯಕರು ಮುಂದಾಗಿದ್ದಾರೆ ಎನ್ನಲಾಗ್ತಿದೆ. ಕೆಲ ಬಿಜೆಪಿ ಮುಖಂಡರನ್ನು ಕಾಂಗ್ರೆಸ್​ಗೆ ಸೇರಿಸಿಕೊಳ್ಳುವ ವಿಚಾರವಾಗಿಯೂ ಕಾಂಗ್ರೆಸ್​ ನಾಯಕರ ಸಭೆಯಲ್ಲಿ ಸಮಾಲೋಚನೆ ನಡೆಸಲಾಗಿದೆ. ಬಿಜೆಪಿ ಮುಖಂಡರ ಸೇರ್ಪಡೆಯಿಂದ ಪಕ್ಷಕ್ಕಾಗುವ ಲಾಭ ನಷ್ಟದ ಬಗ್ಗೆ ಚರ್ಚಿಸಲಾಗಿದೆ. ಈಗಾಗಲೇ ಕೆಲ ಬಿಜೆಪಿ ಅತೃಪ್ತರು ಕೈ ನಾಯಕರನ್ನು ಸಂಪರ್ಕಿಸಿದ್ದಾರೆ. ಆದರೆ ಸ್ಥಳೀಯ ನಾಯಕರ ಜತೆ ಚರ್ಚಿಸಿದ ಬಳಿಕ ಅಂತಿಮ ತೀರ್ಮಾನ ಕೈಗೊಳ್ಳುವ ಬಗ್ಗೆ ಸಭೆಯಲ್ಲಿ ನಿರ್ಧರಿಸಲಾಗಿದೆ.

ಬಿಜೆಪಿ ಅತೃಪ್ತರ ಪಟ್ಟಿಯಲ್ಲಿ ಹಿರೇಕೆರೂರು ಕ್ಷೇತ್ರದ ಯು‌.ಬಿ. ಬಣಕಾರ್, ಕಾಗವಾಡ ಕ್ಷೇತ್ರದ ರಾಜು ಕಾಗೆ, ಹೊಸಕೋಟೆಯಲ್ಲಿ ಶರತ್ ಬಚ್ಚೇಗೌಡ, ಕೆ.ಆರ್. ಪುರಂ ಕ್ಷೇತ್ರದಲ್ಲಿ ನಂದೀಶ್ ರೆಡ್ಡಿ ಮುಂಚೂಣಿಯಲ್ಲಿದ್ದಾರೆ ಎಂದು ಹೇಳಲಾಗ್ತಿದೆ.

Intro:Body:KN_BNG_03_BYELECTIONMEETING_KCV_SCRIPT_7201951

ಉಪಚುನಾವಣೆ ಅಭ್ಯರ್ಥಿ ಆಯ್ಕೆ ಕಸರತ್ತು: ಯಾವ ಕ್ಷೇತ್ರದಲ್ಲಿ ಯಾರು ಪ್ರಬಲ ಕೈ ಆಕಾಂಕ್ಷಿಗಳು?

ಬೆಂಗಳೂರು: ವೇಣುಗೋಪಾಲ್ ನೇತೃತ್ವದಲ್ಲಿ ಬೆಂಗಳೂರು ವಿಭಾಗದ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚೆ ನಡೆಯುತ್ತಿದ್ದು, ಕೆಲ ಆಕಾಂಕ್ಷಿಗಳಿಗೆ ಚುನಾವಣೆಗೆ ಸಿದ್ಧರಾಗುವಂತೆ ಸೂಚನೆ ನೀಡಲಾಗಿದೆ.

ಹೊಸಕೋಟೆ, ಕೆ.ಆರ್.ಪುರ, ಮಹಾಲಕ್ಷ್ಮಿ ಲೇಔಟ್, ಯಶವಂತಪುರ, ಶಿವಾಜಿನಗರ ಮತ್ತು ಚಿಕ್ಕಬಳ್ಳಾಪುರ ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ಕುರಿತು ಚರ್ಚೆ ನಡೆಸಲಾಗುತ್ತಿದೆ. ಕೈ ಹಿರಿಯ ನಾಯಕರು ಈ ಆರು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಸಂಬಂಧ ಸಮಾಲೋಚನೆ ನಡೆಸುತ್ತಿದ್ದಾರೆ. ಯಾವ ಅಭ್ಯರ್ಥಿಯನ್ನು ಆಯ್ಕೆ ಮಾಡಿದರೆ ಗೆಲ್ಲುವ ಸಾಧ್ಯತೆ ಹೆಚ್ಚಿದೆ ಎಂಬ ಬಗ್ಗೆ ಚರ್ಚೆ ನಡೆಯಿತು.

ಹೊಸಕೋಟೆ, ಕೆ.ಆರ್.ಪುರಂ, ಯಶವಂತಪುರದ ಆಕಾಂಕ್ಷಿಗಳಿಗೆ ಚುನಾವಣೆಗೆ ಸಿದ್ಧರಾಗುವಂತೆ ಸೂಚನೆ ನೀಡಲಾಗಿದೆ. ಪಟ್ಟಿಯನ್ನು ದೆಹಲಿಗೆ ಕಳಿಸಲು‌ ಸಭೆಯಲ್ಲಿ ನಿರ್ಧರಿಸಲಾಗಿದೆ. ಕೈ ಹೈಕಮಾಂಡ್ ಅಧಿಕೃತವಾಗಿ ಅಭ್ಯರ್ಥಿಗಳ ಆಯ್ಕೆ ಮಾಡಲಿದೆ.

ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳು:

ಹೊಸಕೋಟೆ - ಭೈರತಿ ಸುರೇಶ್ ಪತ್ನಿ ಪದ್ಮಾವತಿ

ಕೆ.ಆರ್.ಪುರ - ಎಂಎಲ್ ಸಿ ನಾರಾಯಣ ಸ್ವಾಮಿ

ಶಿವಾಜಿನಗರ - ರಿಜ್ವಾನ್ ಅರ್ಷದ್/ಸಲೀಂ ಅಹಮದ್/ಎಸ್‌.ಎ.ಹುಸೇನ್

ಮಹಾಲಕ್ಷ್ಮಿ ಲೇಔಟ್ - ಪಾಲಿಕೆ‌ ಸದಸ್ಯ ಶಿವರಾಜ್/ಮಂಜುನಾಥ್ ಗೌಡ

ಯಶವಂತಪುರ - ಜೆಡಿಎಸ್ ನ ಜವರೇಗೌಡ/ ಎಂ. ರಾಜಕುಮಾರ್/ಸದಾನಂದ

ಚಿಕ್ಕಬಳ್ಳಾಪುರ - ಜಿ.ಎಚ್.ನಾಗರಾಜ್/ ಆಂಜಿನಪ್ಪ/ ಯಲವಳ್ಳಿ ರಮೇಶ್

ಬಿಜೆಪಿ ಅತೃಪ್ತರ ಬಗ್ಗೆನೂ ಚರ್ಚೆ:

ಉಪಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಕೈ ತಪ್ಪುವ ಹಿನ್ನಲೆಯಲ್ಲಿ ಕಾಂಗ್ರೆಸ್ ಸೇರಲು ಕೆಲ ಬಿಜೆಪಿ ನಾಯಕರು ಮುಂದಾಗಿದ್ದಾರೆ.

ಬಿಜೆಪಿ ನಾಯಕರ ಕಾಂಗ್ರೆಸ್ ಸೇರ್ಪಡೆ ಮಾಡಿಕೊಳ್ಳುವ ವಿಚಾರವಾಗಿಯೂ ಕೈ ನಾಯಕರ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಬಿಜೆಪಿ ನಾಯಕರ ಸೇರ್ಪಡೆಯಿಂದ ಪಕ್ಷಕ್ಕಾಗುವ ಲಾಭ ನಷ್ಟದ ಬಗ್ಗೆ ಚರ್ಚಿಸಲಾಗಿದೆ. ಈಗಾಗಲೇ ಕೆಲ ಬಿಜೆಪಿ ಅತೃಪ್ತರು ಕೈ ನಾಯಕರನ್ನು ಸಂಪರ್ಕಿಸಿದ್ದಾರೆ. ಆದರೆ ಸ್ಥಳೀಯ ನಾಯಕರ ಜತೆ ಚರ್ಚಿಸಿದ ಬಳಿಕ ಅಂತಿಮ ತೀರ್ಮಾನ ಕೈಗೊಳ್ಳುವ ಬಗ್ಗೆ ಸಭೆಯಲ್ಲಿ ನಿರ್ಧರಿಸಲಾಗಿದೆ.

ಬಿಜೆಪಿ ಅತೃಪ್ತರ ಪಟ್ಟಿಯಲ್ಲಿ ಹಿರೇಕೇರೂರು ಕ್ಷೇತ್ರದ ಯು‌.ಬಿ.ಬಣಕಾರ್, ಕಾಗವಾಡ ಕ್ಷೇತ್ರದ ರಾಜು ಕಾಗೆ, ಹೊಸಕೋಟೆಯಲ್ಲಿ ಶರತ್ ಬಚ್ಚೇಗೌಡ, ಕೆ.ಆರ್.ಪುರಂ ಕ್ಷೇತ್ರದಲ್ಲಿ ನಂದೀಶ್ ರೆಡ್ಡಿ ಮುಂಚೂಣಿಯಲ್ಲಿದ್ದಾರೆ.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.