ಬೆಂಗಳೂರು: ಸರ್ಕಾರದ ಅಳಿವು ಉಳಿವಿನ ಪ್ರಶ್ನೆಯಾಗಿರುವ ಉಪ ಚುನಾವಣೆಯಲ್ಲಿ ಗೆಲ್ಲುವ ಕಾರ್ಯತಂತ್ರ ರೂಪಿಸಲು ನವೆಂಬರ್ ಮೊದಲ ವಾರದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಹತ್ವದ ಸಭೆ ಕರೆದಿದ್ದಾರೆ.
ಉಪ ಚುನಾವಣೆ ನಡೆಯುವ 15 ಕ್ಷೇತ್ರಗಳ ಮುಖಂಡರ ಸಭೆ ಕರೆದಿರುವ ಸಿಎಂ ಅನರ್ಹ ಶಾಸಕರಿಗೆ ಅಥವಾ ಅವರ ಕುಟುಂಬ ಸದಸ್ಯರಿಗೆ ಟಿಕೆಟ್ ನೀಡುವ ಕುರಿತು ಸಭೆ ನಡೆಸಲಿದ್ದಾರೆ. ಅನರ್ಹ ಶಾಸಕರಿಗೆ ಟಿಕೆಟ್ ಖಚಿತ ಆಗಿದ್ದೇ ಆದರೆ ಸ್ಥಳೀಯ ಬಿಜೆಪಿ ಮುಖಂಡರನ್ನ ವಿಶ್ವಾಸಕ್ಕೆ ತೆಗೆದುಕೊಳ್ಳಲು ಸಿಎಂ ಮುಂದಾಗಿದ್ದಾರೆ.
ಅ.22ರ ನಂತರ ಸುಪ್ರೀಂಕೋರ್ಟ್ನಲ್ಲಿ ಅನರ್ಹರ ಭವಿಷ್ಯ ನಿರ್ಧಾರವಾಗಲಿದ್ದು, ಉಪ ಚುನಾವಣೆಯಲ್ಲಿ ಯಾರೇ ಸ್ಫರ್ಧೆ ಮಾಡಿದರೂ ಗೆಲ್ಲುವುದು ಬಿಜೆಪಿಗೆ ಅನಿವಾರ್ಯವಾಗಿದೆ. ಉಪ ಚುನಾವಣೆ ಸರ್ಕಾರದ ಅಳಿವು ಉಳಿವಿನ ಪ್ರಶ್ನೆಯಾಗಿದ್ದು, ಉಪ ಚುನಾವಣೆಯಲ್ಲಿ ಗೆಲ್ಲಲೇಬೇಕಾದ ಅನಿವಾರ್ಯತೆ ಯಡಿಯೂರಪ್ಪರಿಗೆ ಎದುರಾಗಿದೆ.
ಹೀಗಾಗಿ ಅನರ್ಹ ಶಾಸಕರು ಅಥವಾ ಅವರ ಕುಟುಂಬದ ಸ್ಪರ್ಧೆಗೆ ಸ್ಥಳೀಯ ಮುಖಂಡರ ಆಕ್ಷೇಪಣೆಯನ್ನು ಶಮನಗೊಳಿಸೋದು ಬಿಎಸ್‌ವೈಗೆ ಸವಾಲಾಗಿದೆ. ಈ ಹಿನ್ನೆಲೆಯಲ್ಲಿ ಉಪ ಚುನಾವಣೆಯ ಅಧಿಸೂಚನೆ ಪ್ರಕಟಣೆಗೂ ಮೊದಲೇ 15 ಕ್ಷೇತ್ರಗಳ ಸಭೆ ಸ್ಥಳೀಯ ಮುಖಂಡರ ಸಭೆ ನಡೆಸಿ ಬಂಡಾಯ ಎದ್ದೇಳದಂತೆ ನೋಡಿಕೊಳ್ಳಲು ಬಿಎಸ್‌ವೈ ಕಸರತ್ತು ನಡೆಸಲು ನಿರ್ಧರಿಸಿದ್ದಾರೆ.