ಬೆಂಗಳೂರು: ಜಿಲ್ಲಾ ವ್ಯಾಪ್ತಿಯಲ್ಲಿ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದ್ದು, ಸೋಮವಾರದಿಂದ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಲಾಗಿದೆ.
ಸೋಮವಾರ ಕೆ.ಆರ್. ಪುರಂ ವಿಧಾನಸಭಾ ವ್ಯಾಪ್ತಿಯಲ್ಲಿ ಸ್ವತಂತ್ರ ಅಭ್ಯರ್ಥಿ ಎನ್.ವೆಂಕಟೇಶ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಬಿ.ಹೆಚ್.ಅನಿಲ್ ಕುಮಾರ್ ತಿಳಿಸಿದ್ದಾರೆ.
30-09-2019 ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. 1-10-19 ನಾಮಪತ್ರ ಪರಿಶೀಲಿಸುವ ದಿನಾಂಕವಾಗಿದ್ದು, 3-10-2019 ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಕಡೆಯ ದಿನವಾಗಿದೆ. ಭೈರತಿ ಬಸವರಾಜ್ ಶಾಸಕ ಸ್ಥಾನದಿಂದ ಅನರ್ಹಗೊಂಡ ಬಳಿಕ ತೆರವಾದ ಕೆ.ಆರ್.ಪುರಂ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಸಲಾಗುತ್ತಿದೆ.