ETV Bharat / state

ಸಿಎಂ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ಉಪಸಮರ ಗೆದ್ದು ಕುರ್ಚಿ ಭದ್ರಪಡಿಸಿಕೊಳ್ತಾರಾ ಬಿಎಸ್​ವೈ? - Bangalore

ಕಾಂಗ್ರೆಸ್, ಬಿಜೆಪಿಯ ನಾಯಕರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದರಿಂದ 2019ರ ಡಿಸೆಂಬರ್​ನಲ್ಲಿ ನಡೆದ 15 ಕ್ಷೇತ್ರಗಳ ಉಪಚುನಾವಣೆಯಲ್ಲಿ12 ಕ್ಷೇತ್ರಗಳನ್ನು ಗೆಲ್ಲುವ ಮೂಲಕ ತಮ್ಮ ಸರ್ಕಾರಕ್ಕೆ ಜನಾದೇಶವಿದೆ ಎನ್ನುವುದನ್ನು ಸಾಬೀತುಪಡಿಸಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ನಾಯಕತ್ವ ಪ್ರಶ್ನೆ ಮಾಡಿದ್ದವರಿಗೂ ಟಾಂಗ್ ನೀಡಿ, ಹೈಕಮಾಂಡ್ ಮಟ್ಟದಲ್ಲಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡರು.

B. S. Yediyurappa
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
author img

By

Published : Apr 12, 2021, 6:13 PM IST

Updated : Apr 12, 2021, 7:35 PM IST

ಬೆಂಗಳೂರು: ಬಿ.ಎಸ್.ಯಡಿಯೂರಪ್ಪ ರಾಜ್ಯದ ಮುಖ್ಯಮಂತ್ರಿಯಾದ ಬಳಿಕ 3ನೇ ಬಾರಿಗೆ ಉಪಚುನಾವಣೆ ನಡೆಯುತ್ತಿದ್ದು, ಪ್ರತಿ ಉಪಚುನಾವಣೆಯಲ್ಲೂ ಗೆಲ್ಲುತ್ತಾ ಪ್ರಬಲರಾಗುತ್ತಲೇ ಬಂದಿದ್ದಾರೆ. ನಾಯಕತ್ವ ಬದಲಾವಣೆ ಕೂಗಿಗೆ ಉಪ ಸಮರದ ಫಲಿತಾಂಶದ ಮೂಲಕ ತಿರುಗೇಟು ನೀಡುತ್ತಲೇ ಬಂದಿದ್ದು, ಇದೀಗ ಮತ್ತೊಮ್ಮೆ ಅಗ್ನಿ ಪರೀಕ್ಷೆ ಎದುರಿಸುತ್ತಿದ್ದಾರೆ.

ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕಾರ ಮಾಡಿದ ದಿನದಿಂದಲೂ ಯಡಿಯೂರಪ್ಪ ನಾಯಕತ್ವದ ಬಗ್ಗೆ ಮಾತುಗಳು ಕೇಳಿ ಬರುತ್ತಲೇ ಇವೆ. ಒಂದು ಬಣ ಪ್ರತ್ಯೇಕ ಸಭೆಯಂತಹ ಚಟುವಟಿಕೆ ಮೂಲಕ ಪದೇ ಪದೆ ಅತೃಪ್ತಿ ಹೊರಹಾಕುತ್ತಲೇ ಬರುತ್ತಿದೆ. ಸಚಿವ ಸ್ಥಾನದ ಆಕಾಂಕ್ಷಿಗಳ ಒತ್ತಡದ ನಡುವೆಯೂ ಸಿಎಂ ತಮ್ಮ ಸಾಮರ್ಥ್ಯ ಸಾಬೀತುಪಡಿಸಿಕೊಂಡೇ ಬರುತ್ತಿದ್ದಾರೆ.

ಕಾಂಗ್ರೆಸ್, ಬಿಜೆಪಿಯ ನಾಯಕರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದರಿಂದ 2019ರ ಡಿಸೆಂಬರ್​ನಲ್ಲಿ ನಡೆದ 15 ಕ್ಷೇತ್ರಗಳ ಉಪಚುನಾವಣೆಯಲ್ಲಿ12 ಕ್ಷೇತ್ರಗಳನ್ನು ಗೆಲ್ಲುವ ಮೂಲಕ ತಮ್ಮ ಸರ್ಕಾರಕ್ಕೆ ಜನಾದೇಶವಿದೆ ಎನ್ನುವುದನ್ನು ಸಾಬೀತುಪಡಿಸಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ನಾಯಕತ್ವ ಪ್ರಶ್ನೆ ಮಾಡಿದ್ದವರಿಗೂ ಟಾಂಗ್ ನೀಡಿ, ಹೈಕಮಾಂಡ್ ಮಟ್ಟದಲ್ಲಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡರು.

ಬಿಎಸ್​ವೈಗೆ 'ಬಲ' ತುಂಬಿದ ಆರ್​ಆರ್​ ನಗರ, ಶಿರಾ ಬೈಎಲೆಕ್ಷನ್​:

ನಂತರ 2020ರ ನವೆಂಬರ್​ನಲ್ಲಿ ರಾಜರಾಜೇಶ್ವರಿ ನಗರ ಮತ್ತು ಶಿರಾ ಕ್ಷೇತ್ರಗಳ ಉಪಚುನಾವಣೆ ನಡೆದಿದ್ದು, ಎರಡೂ ಕ್ಷೇತ್ರದಲ್ಲಿ ಬಿಜೆಪಿ ಗೆದ್ದಿದೆ. ಯಡಿಯೂರಪ್ಪ ನಾಯಕತ್ವಕ್ಕೆ ಈ ಗೆಲುವು ಬಲ ತಂದುಕೊಟ್ಟಿತು. ನಾಯಕತ್ವ ಬದಲಾವಣೆ ಕೂಗು ಹಾಕುತ್ತಿದ್ದ ಕೆಲವರ ಬಾಯಿ ಮುಚ್ಚಿಸುವಂತೆ ಮಾಡಿತು.

ಉಪಚುನಾವಣೆ ನಂತರ ಯಡಿಯೂರಪ್ಪ ರಿಸೈನ್​ ಮಾಡುತ್ತಾರೆ. ಹೊಸ ವರ್ಷಕ್ಕೆ ಯಡಿಯೂರಪ್ಪ ರಾಜೀನಾಮೆ ನೀಡುತ್ತಾರೆ. ಬಜೆಟ್ ಅಧಿವೇಶನದ ನಂತರ ರಾಜೀನಾಮೆ ನೀಡುತ್ತಾರೆ ಎನ್ನುವ ಮಾತುಗಳು ಕೇಳಿ ಬಂದಾಗಲೆಲ್ಲ ಉಪಚುನಾವಣಾ ಫಲಿತಾಂಶದ ಮೂಲಕವೇ ಉತ್ತರ ನೀಡಿ ಸ್ಥಾನ ಗಟ್ಟಿ ಮಾಡಿಕೊಳ್ಳುತ್ತಾ ಬಂದಿದ್ದಾರೆ.

ಯಡಿಯೂರಪ್ಪಗೆ ಮತ್ತೆ ಅಗ್ನಿ ಪರೀಕ್ಷೆ:

ಇದೀಗ ಮತ್ತೊಮ್ಮೆ ಮೂರು ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುತ್ತಿದ್ದು, ಯಡಿಯೂರಪ್ಪ ಅವರಿಗೆ ಮತ್ತೆ ಅಗ್ನಿ ಪರೀಕ್ಷೆ ಎದುರಾಗಿದೆ. ಈ ಬಾರಿ ವಿಷಯ ಗಂಭೀರತೆ ಪಡೆದುಕೊಂಡಿರುವುದಕ್ಕೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ ಸಿಡಿಸುತ್ತಿರುವ ಮಾತಿನ ಬಾಂಬ್​​ಗಳು. ಯಡಿಯೂರಪ್ಪ ನಾಯಕತ್ವ ಪ್ರಶ್ನಿಸಿ, ಟೀಕಿಸುತ್ತಿದ್ದರೂ ಕ್ರಮಕ್ಕೆ ಹೈಕಮಾಂಡ್ ಹಿಂದೇಟು ಹಾಕುತ್ತಿದೆ. ರಾಜ್ಯದ ನಾಯಕರೂ ತೀಕ್ಷ್ಣವಾಗಿ ತಿರುಗೇಟು ನೀಡಲು ಹಿಂದೇಟು ಹಾಕುತ್ತಿದ್ದಾರೆ.‌

ಶೋಕಾಸ್ ನೋಟಿಸ್ ನೀಡಿದ್ದರೂ ಮೇ ತಿಂಗಳಲ್ಲಿ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಆಗಲಿದೆ. ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯಲಿದ್ದಾರೆ ಎಂದು ಹೇಳಿಕೆ ನೀಡುತ್ತಿದ್ದಾರೆ. ಇದರ ಹಿಂದೆ ಹೈಕಮಾಂಡ್ ಮಟ್ಟದ ವ್ಯಕ್ತಿಗಳು ಇರುವ ಕಾರಣಕ್ಕೆ ಯತ್ನಾಳ್ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ ಎನ್ನಲಾಗಿದೆ.

ಈ ಉಪ ಚುನಾವಣೆಯಲ್ಲಿ ಮತ್ತೆ ಬಿಎಸ್​​ವೈಗೆ ಮುಖ್ಯ ಏಕೆ

ಈ ಎಲ್ಲ ಕಾರಣಕ್ಕಾಗಿ ಸಿಎಂ ಯಡಿಯೂರಪ್ಪ ಅವರಿಗೆ ಈ ಉಪಚುನಾವಣೆಗಳು ಪ್ರಮುಖವಾಗಿವೆ. ಬೆಳಗಾವಿ ಲೋಕಸಭಾ ಕ್ಷೇತ್ರ ಬಿಜೆಪಿಯದ್ದೇ ಆಗಿದ್ದು, ಸುರೇಶ್ ಅಂಗಡಿ ನಿಧನದಿಂದ ತೆರವಾಗಿರುವ ಕ್ಷೇತ್ರವನ್ನು ಮರಳಿ ಪಕ್ಷಕ್ಕೆ ದಕ್ಕುವಂತೆ ನೋಡಿಕೊಳ್ಳುವ ಬಹುದೊಡ್ಡ ಜವಾಬ್ದಾರಿ ಇದೀಗ ಯಡಿಯೂರಪ್ಪ ಮೇಲಿದೆ. ಒಂದು ವೇಳೆ ಈ ಸ್ಥಾನ ಕೈ ಜಾರಿದಲ್ಲಿ ರಾಷ್ಟ್ರ ಮಟ್ಟದಲ್ಲಿ ಬಿಜೆಪಿಗೆ ಹಿನ್ನಡೆಯಾಗುವ ಸಾಧ್ಯತೆಯಿದೆ. ಹಾಗಾಗಿ ಶತಾಯ ಗತಾಯ ಬೆಳಗಾವಿ ಗೆಲ್ಲಲೇಬೇಕಾದ ಒತ್ತಡದಲ್ಲಿದ್ದಾರೆ.

ಮಸ್ಕಿಯಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸರ್ಕಾರ ರಚನೆಯಾಗಲು ಕಾರಣವಾಗಿದ್ದಕ್ಕಾಗಿ ಉಪಚುನಾವಣೆ ನಡೆಯುತ್ತಿದೆ. ಬಾಂಬೆ ಟೀಂ ಜೊತೆಯಿದ್ದ ಪ್ರತಾಪ್ ಗೌಡ ಪಾಟೀಲ್ ಬಿಜೆಪಿ ಅಭ್ಯರ್ಥಿಯಾಗಿದ್ದು, ಕ್ಷೇತ್ರವನ್ನು ಗೆಲ್ಲುವ ಮೂಲಕ ಸರ್ಕಾರದ ರಚನೆಯನ್ನು ಯಡಿಯೂರಪ್ಪ ಸಮರ್ಥನೆ ಮಾಡಿಕೊಳ್ಳಬೇಕಿದೆ.

‌ಸರ್ಕಾರಕ್ಕೆ ಜನಾದೇಶವಿದೆ. ನನ್ನ ನಾಯಕತ್ವದ ಪರ ಜನರ ಒಲವಿದೆ ಎನ್ನುವ ಸಂದೇಶವನ್ನು ಯಡಿಯೂರಪ್ಪ ಹೈಕಮಾಂಡ್​​ಗೆ ರವಾನಿಸಬೇಕಿದೆ. ಹಾಗಾಗಿ ಈ ಎರಡು ಕ್ಷೇತ್ರಗಳ ಉಪ ಚುನಾವಣೆ ಯಡಿಯೂರಪ್ಪಗೆ ಬಹಳ ಮಹತ್ವದ್ದಾಗಿದೆ.

ಬಸವಕಲ್ಯಾಣದಲ್ಲೇಕೆ ಎಲೆಕ್ಷನ್​?

ಬಸವಕಲ್ಯಾಣ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರ ನಿಧನದಿಂದ ಉಪಚುನಾವಣೆ ನಡೆಯುತ್ತಿದೆ. ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಸೋಲಿಸಿ ಬಿಜೆಪಿ ಗೆಲ್ಲಿಸುವ ಮೂಲಕ ತಾವು ರಾಜ್ಯವನ್ನು ಮುನ್ನಡೆಸಲು ಸಮರ್ಥನಿದ್ದೇನೆ. ಜನತೆ ನನ್ನ ನಾಯಕತ್ವಕ್ಕೆ ಬೆಂಬಲ ನೀಡಿದ್ದಾರೆ ಎಂದು ಹೈಕಮಾಂಡ್ ನಾಯಕರಿಗೆ ಸಂದೇಶ ರವಾನಿಸಬೇಕಿದೆ. ನಾಯಕತ್ವ ಬದಲಾವಣೆಯಂತಹ ವಿಷಯಕ್ಕೆ ಕೈ ಹಾಕದಂತೆ ನೋಡಿಕೊಳ್ಳುವ ಲೆಕ್ಕಾಚಾರದಲ್ಲಿದ್ದಾರೆ.

ಒಟ್ಟಿನಲ್ಲಿ ರಾಜ್ಯದಲ್ಲಿ ಮತ್ತೆ ನಾಯಕತ್ವ ಬದಲಾವಣೆ ಕೂಗು ಕೇಳಿ ಬಂದಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಉಪ‌ಸಮರ ಗೆಲ್ಲುವ ಅಗ್ನಿ ಪರೀಕ್ಷೆ ಎದುರಾಗಿದೆ. ಉಪಚುನಾವಣೆಯಲ್ಲಿ ಕನಿಷ್ಠ ಎರಡು ಸ್ಥಾನವನ್ನಾದರೂ ಗೆಲ್ಲುವ ಮೂಲಕ ನಾಯಕತ್ವ ಬದಲಾವಣೆ ಕೂಗಿದೆ ಬ್ರೇಕ್ ಹಾಕಿ ಮುಖ್ಯಮಂತ್ರಿ ಸ್ಥಾನವನ್ನು ಭದ್ರಪಡಿಸಿಕೊಳ್ಳಬೇಕಿದೆ. ಇದರಲ್ಲಿ ಸಿಎಂ ಯಡಿಯೂರಪ್ಪ ಎಷ್ಟರ ಮಟ್ಟಿಗೆ ಸಫಲರಾಗಲಿದ್ದಾರೆ ಎಂಬುವುದನ್ನು ಕಾದು ನೋಡಬೇಕಿದೆ.

Last Updated : Apr 12, 2021, 7:35 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.