ETV Bharat / state

ಉಪಚುನಾವಣೆಗೆ 'ಕೈ'ತಂತ್ರ: ಹಿರಿಯ ನಾಯಕರನ್ನು ಭೇಟಿಯಾಗಲಿರುವ ಸಿದ್ದರಾಮಯ್ಯ - ಹಿರಿಯ ನಾಯಕರ ಭೇಟಿ ಸಿದ್ದರಾಮಯ್ಯ

ಉಪಚುನಾವಣೆ ಸಮೀಪಿಸುತ್ತಿದ್ದು, ಜಿದ್ದಾಜಿದ್ದಿನ ಕದನಕ್ಕೆ ಎಲ್ಲಾ ಪಕ್ಷಗಳು ತಯಾರಾಗುತ್ತಿವೆ. ಇದರ ಬೆನ್ನಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯ ಉಪಚುನಾವಣೆ ಗೆಲ್ಲಲು ಮಾಸ್ಟರ್​ ಪ್ಲಾನ್​ ರೂಪಿಸಿದ್ದು, ಪಕ್ಷದ ಹಿರಿಯ ನಾಯಕರನ್ನು ಭೇಟಿಯಾಗಿ ಸಹಕಾರ ಕೋರಲಿದ್ದಾರೆ ಎನ್ನಲಾಗ್ತಿದೆ.

ಸಿದ್ದರಾಮಯ್ಯ
author img

By

Published : Oct 18, 2019, 2:07 PM IST

ಬೆಂಗಳೂರು: ಉಪಚುನಾವಣೆಯಲ್ಲಿ 15 ಸ್ಥಾನ ಗೆಲ್ಲಲು ರಾಜ್ಯ ಕಾಂಗ್ರೆಸ್ ನಾಯಕರು ಈಗಿನಿಂದಲೇ ತಯಾರಿ ನಡೆಸುತ್ತಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಮಾಸ್ಟರ್ ಪ್ಲಾನ್ ರೂಪಿಸಿದ್ದಾರೆ ಎನ್ನಲಾಗ್ತಿದೆ‌.

ಈಗಾಗಲೇ‌ ಮೂಲ ಕಾಂಗ್ರೆಸ್ ಮತ್ತು ವಲಸಿಗ ಕಾಂಗ್ರೆಸ್ ಮಧ್ಯೆ ತಿಕ್ಕಾಟ ಶುರುವಾಗಿದ್ದು, ಪ್ರತಿಪಕ್ಷ ನಾಯಕ ಆಯ್ಕೆ ಸಂದರ್ಭ ಈ ಸಂಘರ್ಷ ಮುನ್ನಲೆಗೆ ಬಂದಿತ್ತು. ಉಪ‌ ಚುನಾವಣೆ ಸಮೀಪಿಸುತ್ತಿದ್ದು, ಈ ಒಳತಿಕ್ಕಾಟದಿಂದ ಪಕ್ಷದ ಗೆಲುವಿನ ಮೇಲೆ ಪರಿಣಾಮ ಬೀರುವ ಸಾಧ್ಯತೆ ಮನಗಂಡಿರುವ ಸಿದ್ದರಾಮಯ್ಯ ಎಲ್ಲರನ್ನೂ ಒಟ್ಟಿಗೆ ಕೊಂಡೊಯ್ಯಲು ನಿರ್ಧರಿಸಿದ್ದಾರೆ.

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕೇರಳದಿಂದ ವಾಪಸಾದ ಬಳಿಕ ಹಿರಿಯ ಕೈ ನಾಯಕರ ಭೇಟಿ ಮಾಡಲಿದ್ದಾರೆ. ಪಕ್ಷದ ಎಲ್ಲಾ ಹಿರಿಯ ನಾಯಕರ ನಿವಾಸಕ್ಕೆ ಭೇಟಿ ನೀಡಲಿರುವ ಸಿದ್ದರಾಮಯ್ಯ ಸಹಕಾರ ಕೋರಲಿದ್ದಾರೆ.

ಅಸಮಾಧಾನಿತರು, ಹಿರಿಯರ ನಿವಾಸಕ್ಕೂ ಸಿದ್ದರಾಮಯ್ಯ ಭೇಟಿ ನೀಡಲಿದ್ದು, ಸಾಮೂಹಿಕ ನಾಯಕತ್ವದಡಿ ಚುನಾವಣೆ ಎದುರಿಸುವ ಸಂಬಂಧ ಸಮಾಲೋಚನೆ‌ ನಡೆಸಲಿದ್ದಾರೆ. ಆ ಮೂಲಕ ಉಪಚುನಾವಣೆಯಲ್ಲಿ ಕನಿಷ್ಠ 10 ಸ್ಥಾನ ಗೆಲ್ಲುವ ಗುರಿ ಹೊಂದಿದ್ದಾರೆ ಎಂದು ತಿಳಿದುಬಂದಿದೆ.

Intro:Body:KN_BNG_01_SIDDARAMAYYA_SINIORSVISIT_SCRIPT_7201951

ಉಪಚುನಾವಣೆ ಕಾರ್ಯತಂತ್ರ: ಕೈ ಹಿರಿಯ ನಾಯಕರನ್ನು ಭೇಟಿಯಾಗಲಿರುವ ಸಿದ್ದರಾಮಯ್ಯ

ಬೆಂಗಳೂರು: ಉಪಚುನಾವಣೆಯಲ್ಲಿ ಎಲ್ಲ ಹದಿನೈದು ಸ್ಥಾನ ಗೆಲ್ಲಲು ರಾಜ್ಯ ಕಾಂಗ್ರೆಸ್ ನಾಯಕರು ಈಗಿನಿಂದಲೇ ತಯಾರಿ ನಡೆಸುತ್ತಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಮಾಸ್ಟರ್ ಪ್ಲಾನ್ ರೂಪಿಸಿದ್ದಾರೆ‌.

ಈಗಾಗಲೇ‌ ಮೂಲ ಕಾಂಗ್ರೆಸ್ ಮತ್ತು ವಲಸಿಗ ಕಾಂಗ್ರೆಸ್ ಮಧ್ಯೆ ತಿಕ್ಕಾಟ ಶುರುವಾಗಿದ್ದು, ಪ್ರತಿಪಕ್ಷ ನಾಯಕ ಆಯ್ಕೆ ಸಂದರ್ಭ ಈ ಸಂಘರ್ಷ ಮುನ್ನಲೆಗೆ ಬಂದಿತ್ತು. ಉಪ‌ಚುನಾವಣೆ ಸಮೀಪಿಸುತ್ತಿದ್ದು, ಈ ಒಳ ತಿಕ್ಕಾಟದಿಂದ ಪಕ್ಷದ ಗೆಲುವಿನ ಮೇಲೆ ಪರಿಣಾಮ ಬೀರುವ ಸಾಧ್ಯತೆಯನ್ನು ಮನಗಂಡಿರುವ ಸಿದ್ದರಾಮಯ್ಯ ಎಲ್ಲರನ್ನೂ ಒಟ್ಟಿಗೆ ಕೊಂಡೊಯ್ಯಲು ನಿರ್ಧರಿಸಿದ್ದಾರೆ.

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕೇರಳದಿಂದ ವಾಪಸಾದ ಬಳಿಕ ಹಿರಿಯ ಕೈ ನಾಯಕರ ಭೇಟಿ ಮಾಡಲಿದ್ದಾರೆ. ಪಕ್ಷದ ಎಲ್ಲಾ ಹಿರಿಯ ನಾಯಕರ ನಿವಾಸಕ್ಕೆ ಭೇಟಿ ನೀಡಲಿರುವ ಸಿದ್ದರಾಮಯ್ಯ, ಅವರ ಸಹಕಾರವನ್ನು ಕೋರಲಿದ್ದಾರೆ.

ಅಸಮಾಧಾನಿತರ ಹಿರಿಯರ ನಿವಾಸಕ್ಕೂ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ. ಸಾಮೂಹಿಕ ನಾಯಕತ್ವದಡಿ ಚುನಾವಣೆ ಎದುರಿಸುವ ಸಂಬಂಧ ಸಮಾಲೋಚನೆ‌ ನಡೆಸಲಿದ್ದಾರೆ. ಆ ಮೂಲಕ ಕನಿಷ್ಠ ಉಪಚುನಾವಣೆಯಲ್ಲಿ ಕನಿಷ್ಠ 10 ಸ್ಥಾನ ಗೆಲ್ಲುವ ಗುರಿ ಹೊಂದಿದ್ದಾರೆ.

ಸೋನಿಯಾ ಸೂಚನೆಯಂತೆ ಎಲ್ಲರ ವಿಶ್ವಾಸಗಳಿಸಲು ಸಿದ್ದರಾಮಯ್ಯ ಮುಂದಾಗಿದ್ದಾರೆ. ಇಂದು ಕೇರಳ ಉಪಚುನಾವಣೆ ಪ್ರಚಾರದಲ್ಲಿ ಭಾಗಿಯಾಗಲಿರುವ ಸಿದ್ದು, ಅಲ್ಲಿಂದ ವಾಪಸು ಆದ ನಂತರ ಹಿರಿಯರ ನಿವಾಸಗಳಿಗೆ ಭೇಟಿ ನೀಡಲಿದ್ದಾರೆ. ಹಿರಿಯ ಮುಖಂಡರಾದ ಮಲ್ಲಿಕಾರ್ಜುನ ಖರ್ಗೆ, ಕೆ.ಹೆಚ್.ಮುನಿಯಪ್ಪ, ಡಾ.ಜಿ.ಪರಮೇಶ್ವರ್, ಬಿ.ಕೆ.ಹರಿಪ್ರಸಾದ್, ಹೆಚ್.ಕೆ.ಪಾಟೀಲ್, ವೀರಪ್ಪ ಮೊಯ್ಲಿ ಸೇರಿದಂತೆ ಎಲ್ಲರ ನಿವಾಸಕ್ಕೆ ಭೇಟಿ ನೀಡಿ ಇರುವ ಗೊಂದಲ ನಿವಾರಿಸಲು ಯತ್ನಿಸಲಿದ್ದಾರೆ.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.