ETV Bharat / state

ಸೈದ್ಧಾಂತಿಕ ವಿರೋಧವನ್ನು ಬಚ್ಚಿಟ್ಟುಕೊಂಡು ತಾಂತ್ರಿಕ ಕಾರಣದಿಂದ ತಿಪ್ಪೆ ಸಾರಿಸುವ ಕೆಲಸ ಆಗಬಾರದು: ಸಿದ್ದರಾಮಯ್ಯ - By hiding Ideological opposition giving technical reasons

ಸೈದ್ಧಾಂತಿಕ ವಿರೋಧ ಬಚ್ಚಿಟ್ಟುಕೊಂಡು ತಾಂತ್ರಿಕ ಕಾರಣ ನೀಡಿ ತಿಪ್ಪೆ ಸಾರಿಸುವ ಕೆಲಸ ಮಾಡಬಾರದು. ಈ ನೆಲದ ಸಮಾಜ ಸುಧಾರಕರನ್ನು ಕೋಮುವಾದಿ, ಜಾತಿವಾದಿ ಬಿಜೆಪಿ ಅಂತರಂಗದಲ್ಲಿ ದ್ವೇಷಿಸುತ್ತಿದೆ. ನಾರಾಯಣ ಗುರು, ಸುಭಾಷ್ ಚಂದ್ರಬೋಸ್ ಮಾತ್ರವಲ್ಲ, ಬುದ್ಧ, ಬಸವ, ಅಂಬೇಡ್ಕರ್, ಪುಲೆ, ಪೆರಿಯಾರ್, ಕನಕ, ಕಬೀರ ಸೇರಿದಂತೆ ಎಲ್ಲರನ್ನೂ ಅಂತರಂಗದಲ್ಲಿ ದ್ವೇಷಿಸುತ್ತಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಸಿದ್ದರಾಮಯ್ಯ
ಸಿದ್ದರಾಮಯ್ಯ
author img

By

Published : Jan 19, 2022, 9:55 PM IST

ಬೆಂಗಳೂರು: ನಾರಾಯಣ ಗುರು, ಸುಭಾಷ್ ಚಂದ್ರ ಬೋಸ್ ಇಲ್ಲವೇ ಚಿದಂಬರನ್ ಅವರ ಬಗ್ಗೆ ಸೈದ್ಧಾಂತಿಕ ವಿರೋಧವನ್ನು ಬಚ್ಚಿಟ್ಟುಕೊಂಡು, ತಾಂತ್ರಿಕ ಕಾರಣ ನೀಡಿ ತಿಪ್ಪೆ ಸಾರಿಸುವ ಕೆಲಸ ಮಾಡಬಾರದು ಎಂದು ಕೇಂದ್ರ ಸರ್ಕಾರಕ್ಕೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.

ಸರಣಿ ಟ್ವೀಟ್ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಅವರು, ಈ ನೆಲದ ಸಮಾಜ ಸುಧಾರಕರನ್ನು ಕೋಮುವಾದಿ, ಜಾತಿವಾದಿ ಬಿಜೆಪಿ ಅಂತರಂಗದಲ್ಲಿ ದ್ವೇಷಿಸುತ್ತಿದೆ. ನಾರಾಯಣ ಗುರು, ಸುಭಾಷ್ ಚಂದ್ರಬೋಸ್ ಮಾತ್ರವಲ್ಲ, ಬುದ್ಧ, ಬಸವ, ಅಂಬೇಡ್ಕರ್, ಪುಲೆ, ಪೆರಿಯಾರ್, ಕನಕ, ಕಬೀರ ಸೇರಿದಂತೆ ಎಲ್ಲರನ್ನೂ ಅಂತರಂಗದಲ್ಲಿ ದ್ವೇಷಿಸುತ್ತಿದೆ. ಬಹಿರಂಗವಾಗಿ ಎಲ್ಲರನ್ನೂ ಕೊಂಡಾಡುತ್ತಾ ನಾಟಕವಾಡುತ್ತಿದೆ. ಈ ಆತ್ಮವಂಚನೆಯನ್ನು ನಿಲ್ಲಿಸಿ ಎಂದು ಹೇಳಿದ್ದಾರೆ.

  • .@BJP4India has always despised the ideas of social reformers like Narayana Guru, Bose, Buddha, Basavanna, Ambedkar, Periyar, Phule, Kanaka, Kabir, etc

    But they pretend to follow the ideas of above mentioned personalities.

    BJP should stop fooling ppl.#Insult_to_NarayanaGuru

    — Siddaramaiah (@siddaramaiah) January 19, 2022 " class="align-text-top noRightClick twitterSection" data=" ">

ನಾರಾಯಣಗುರು, ಸುಭಾಷ್ ಚಂದ್ರ ಬೋಸ್, ಚಿದಂಬರಂ ಬಗ್ಗೆ ಸೈದ್ಧಾಂತಿಕ ಇಲ್ಲವೇ ಬೇರೆ ವಿರೋಧವಿದ್ದರೆ ಕೇಂದ್ರ ಸರ್ಕಾರ ಧೈರ್ಯವಾಗಿ ಬಹಿರಂಗಪಡಿಸಲಿ. ಇದರ ಬದಲಿಗೆ ತನ್ನ ಸೈದ್ಧಾಂತಿಕ ವಿರೋಧ ಬಚ್ಚಿಟ್ಟುಕೊಂಡು ತಾಂತ್ರಿಕ ಕಾರಣ ನೀಡಿ ತಿಪ್ಪೆ ಸಾರಿಸುವ ಕೆಲಸ ಮಾಡಬಾರದು. ಕೇರಳದ ನಾರಾಯಣ ಗುರುಗಳ ಸ್ತಬ್ಧ ಚಿತ್ರವನ್ನು ಮಾತ್ರವಲ್ಲ, ಪಶ್ಚಿಮ ಬಂಗಾಳದ ಸುಭಾಷ್ ಚಂದ್ರ ಬೋಸ್ ಸ್ತಬ್ಧ ಚಿತ್ರ ಮತ್ತು ತಮಿಳುನಾಡಿನ ಸ್ವಾತಂತ್ರ್ಯ ಹೋರಾಟಗಾರ ಚಿದಂಬರನ್​​ ಸ್ತಬ್ಧ ಚಿತ್ರಗಳನ್ನು ತಿರಸ್ಕರಿಸಲಾಗಿದೆ. ತಿರಸ್ಕೃತ ಮೂರು ರಾಜ್ಯಗಳಲ್ಲಿ ಬಿಜೆಪಿಯೇತರ ಪಕ್ಷಗಳ ಸರ್ಕಾರ ಇರುವುದು ಕೇವಲ ಕಾಕತಾಳಿಯ ಎನ್ನುವುದನ್ನು ನಂಬಬಹುದೇ? ಎಂದು ಪ್ರಶ್ನಿಸಿದ್ದಾರೆ.

ಶಂಕರಾಚಾರ್ಯರ ಪ್ರತಿಕೃತಿಯ ಸ್ತಬ್ಧ ಚಿತ್ರಕ್ಕೆ ವೈಯಕ್ತಿಕವಾಗಿ ನನ್ನ ವಿರೋಧ ಇಲ್ಲ. ಆದರೆ ಜಾತಿ ಮತ್ತು ಕೋಮು ಸಾಮರಸ್ಯವನ್ನು ಕಾಪಾಡಿಕೊಂಡು ಹೋಗಬೇಕಾದ ಕೇಂದ್ರ ಸರ್ಕಾರ, ಅನಗತ್ಯವಾಗಿ ಶಂಕರಾಚಾರ್ಯರ ಎದುರಿಗೆ ನಾರಾಯಣ ಗುರುಗಳನ್ನು ನಿಲ್ಲಿಸಿ ಇಬ್ಬರು ಮಹಾಪುರುಷರ ಅನುಯಾಯಿಗಳ ನಡುವೆ ಜಗಳ ತಂದುಹಾಕುವ ಅಗತ್ಯ ಏನಿತ್ತು? ಕೇರಳ ಸರ್ಕಾರ ಪ್ರಸ್ತುತ ಪಡಿಸಿದ್ದ ಜಟಾಯು ಸ್ತಬ್ಧ ಚಿತ್ರಕ್ಕೆ ಒಪ್ಪಿಗೆ ನೀಡಿಲ್ಲ. ಅದರ ಮುಂದೆ ಶಂಕರಾಚಾರ್ಯರ ಪ್ರತಿಕೃತಿಯನ್ನು ಕೂರಿಸುವಂತೆ ಕೇಂದ್ರ ಸರ್ಕಾರ ಒತ್ತಡ ಹೇರಲು ಕಾರಣ ಏನು? ಕೇರಳ ಸರ್ಕಾರ ಸೂಚಿಸಿದ ನಾರಾಯಣ ಗುರುಗಳ ಪ್ರತಿಕೃತಿಯನ್ನು ನಿರಾಕರಿಸಲು ಕಾರಣ ಏನು? ಕೇಂದ್ರ ಬಿಜೆಪಿ ಸರ್ಕಾರ ಇದನ್ನು ಸ್ಪಷ್ಟಪಡಿಸಬೇಕು ಎಂದಿದ್ದಾರೆ.

ಇದನ್ನೂ ಓದಿ: ವಿವಾದಾತ್ಮಕ ಹೇಳಿಕೆ ಪ್ರಕರಣ: ಕಾಳಿಮಠದ ಸ್ವಾಮೀಜಿಗೆ ಷರತ್ತುಬದ್ಧ ಜಾಮೀನು

ಗಣರಾಜ್ಯೋತ್ಸವ ಸ್ತಬ್ಧಚಿತ್ರಕ್ಕೆ 3 ವರ್ಷಗಳಿಗೊಮ್ಮೆ ಮಾತ್ರ ರಾಜ್ಯಗಳಿಗೆ ಅವಕಾಶ ಎಂದಾದರೆ, ನಮ್ಮ ಕರ್ನಾಟಕಕ್ಕೆ ಸತತ 13ನೇ ಬಾರಿ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ಹೇಗೆ ನೀಡಲಾಯಿತು? ಎನ್ನುವುದನ್ನು ಸಚಿವರಾದ ಶ್ರೀನಿವಾಸ ಪೂಜಾರಿ ಮತ್ತು ಸುನೀಲ್ ಕುಮಾರ್ ತಿಳಿಸಬೇಕು. ಇಂತಹ ಹಸಿ ಸುಳ್ಳುಗಳು ಸಚಿವರಿಗೆ ಶೋಭೆ ತರುವುದಿಲ್ಲ. 3 ವರ್ಷಗಳಿಗೊಮ್ಮೆ ಮಾತ್ರ ಸ್ತಬ್ಧಚಿತ್ರಕ್ಕೆ ರಾಜ್ಯಗಳಿಗೆ ಅವಕಾಶ ಎನ್ನುತ್ತಾರೆ ರಾಜ್ಯದ ಇಬ್ಬರು ಸಚಿವರು, ಅಲಿಖಿತ ಪೂರ್ವನಿದರ್ಶನ ಇದೆ ಎನ್ನುತ್ತಾರೆ ಕೇಂದ್ರ ಸಚಿವರು, ಕೇರಳ ಸರ್ಕಾರವೇ ನಾರಾಯಣಗುರು ವಿರೋಧಿ ಎನ್ನುತ್ತಾರೆ ಬಿಜೆಪಿ ವಕ್ತಾರರು. ಇದರಲ್ಲಿ ಯಾವುದು ನಿಜ ಎನ್ನುವುದನ್ನು ಪ್ರಧಾನಿ ನರೇಂದ್ರ ಮೋದಿ ಅವರೇ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

ಕೇರಳದ ನಾರಾಯಣ ಗುರು ಸ್ತಬ್ಧಚಿತ್ರ ನಿರಾಕರಣೆಗೆ ಅಲಿಖಿತ ಪೂರ್ವನಿದರ್ಶನ ಕಾರಣ ಎಂದು ಹೇಳಿರುವ ಸಚಿವ ಪ್ರಹ್ಲಾದ ಜೋಷಿಯವರು ಹೇಳಿಕೆ ನೀಡುವ ಮೊದಲು ದೃಢಪಡಿಸಿಕೊಳ್ಳಬೇಕಿತ್ತು ಎಂದು ನನಗೆ ಪುಕ್ಕಟೆ ಸಲಹೆ ನೀಡಿದ್ದಾರೆ. ದಯವಿಟ್ಟು ಅವರು ಈ ಅಲಿಖಿತ ಪೂರ್ವನಿದರ್ಶನ ಏನು ಎನ್ನುವುದನ್ನು ಸ್ಪಷ್ಟಪಡಿಬೇಕು. ಸಮಾಜ ಸುಧಾರಕ ನಾರಾಯಣ ಗುರುಗಳ ಸ್ತಬ್ಧಚಿತ್ರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ ಜೋಷಿ, ರಾಜ್ಯದ ಸಚಿವರಾದ ಸುನಿಲ್ ಕುಮಾರ್ ಮತ್ತು ಕೋಟ ಶ್ರೀನಿವಾಸ ಪೂಜಾರಿ ಮತ್ತು ಕರ್ನಾಟಕ ಬಿಜೆಪಿ ನಾಯಕರು ತರಹೇವಾರಿ ಹೇಳಿಕೆಗಳ ಮೂಲಕ ಬಿಜೆಪಿ ಎನ್ನುವುದು ಸುಳ್ಳುಗಳ ಕಾರ್ಖಾನೆ ಎಂದು ಸಾಬೀತುಪಡಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.