ETV Bharat / state

ಪ್ರವೀಣ್​ ಕುಟುಂಬಕ್ಕೆ ಪರಿಹಾರ ಕೊಟ್ಟಿದ್ದು ಪಕ್ಷದಿಂದ: ಬಿ ವೈ ವಿಜಯೇಂದ್ರ

ಪ್ರವೀಣ್​ ನೆಟ್ಟಾರು ಕೊಲೆ ಪ್ರಕರಣ- ಪರಿಹಾರ ವಿತರಣೆ ತಾರತಮ್ಯ ಆರೋಪ- ಸ್ಪಷ್ಟನೆ ನೀಡಿದ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ

State BJP Vice President B.Y Vijayendra
ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ
author img

By

Published : Jul 30, 2022, 4:23 PM IST

ದೊಡ್ಡಬಳ್ಳಾಪುರ (ಬೆಂಗಳೂರು ಗ್ರಾಮಾಂತರ): ನಮ್ಮ ಪಕ್ಷದ ಕಾರ್ಯಕರ್ತನ ಹತ್ಯೆಯಾಗಿದೆ. ಈ ಹಿನ್ನೆಲೆ ಪರಿಹಾರ ಕೊಟ್ಟಿದ್ದೇವೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ತಿಳಿಸಿದ್ದಾರೆ. ದಕ್ಷಿಣ ಕನ್ನಡದಲ್ಲಿ ಹತ್ಯೆಯಾದ ಯುವಕರ ಕುಟುಂಬಗಳಿಗೆ ಪರಿಹಾರ ನೀಡುವಲ್ಲಿ ತಾರತಮ್ಯ ನಡೆಸಲಾಗುತ್ತಿದೆ ಎಂಬ ಆರೋಪಕ್ಕೆ ಬಿ.ವೈ.ವಿ ಪ್ರತಿಕ್ರಿಯೆ ನೀಡಿದರು.

ನಗರದ ಬಸವ ಭವನದಲ್ಲಿ ದೊಡ್ಡಬಳ್ಳಾಪುರ ತಾಲೂಕು ವೀರಶೈವ ಲಿಂಗಾಯತ ಸಮಾಜ ಆಯೋಜಿಸಿದ್ದ ಶ್ರೀ ಶಿವಕುಮಾರ ಸ್ವಾಮೀಜಿಯವರ ಗುರುವಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದ ವೇಳೆ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಅಸಮರ್ಥರಿದ್ದಾರೆಂಬ ಆರೋಪಕ್ಕೆ ಪ್ರತಿಕ್ರಿಯಿಸಿ, ಕಾಂಗ್ರೆಸ್ ಅಧಿಕಾರದ ಅವಧಿಯಲ್ಲಿ ಏನೆಲ್ಲಾ ನಡೆದಿದೆ ಎಂಬುದು ರಾಜ್ಯದ ಜನರಿಗೆ ಗೊತ್ತಿದೆ ಎಂದು ತಿರುಗೇಟು ನೀಡಿದರು.

ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಪ್ರವೀಣ್ ಹತ್ಯೆಯಿಂದ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರಿಗೂ ನೋವಾಗಿದೆ. ಪ್ರಕರಣದಲ್ಲಿ ಈಗಾಗಲೇ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಎನ್ಐಎ ತನಿಖೆಗೆ ಹಸ್ತಾಂತರಿಸಿರುವುದು ಸ್ವಾಗತಾರ್ಹ. ಇಂತಹ ಸೂಕ್ಷ್ಮ ವಿಚಾರಗಳಲ್ಲಿ ಕಾಂಗ್ರೆಸ್ ಪಕ್ಷದವರು ಸಣ್ಣತನ ತೋರುತ್ತಿರುವುದು ಸರಿಯಲ್ಲ. ತಪ್ಪಿತಸ್ಥರು ಯಾರೇ ಆಗಲಿ, ಅವರಿಗೆ ಕಠಿಣ ಶಿಕ್ಷೆ ಕೊಡಿಸುವುದು ನಮ್ಮ ಮುಂದಿರುವ ಗುರಿ ಎಂದರು.

ಇದನ್ನೂ ಓದಿ: ಗೃಹ ಸಚಿವ ನಿವಾಸ ಮುತ್ತಿಗೆ: ಪ್ರವೀಣ್ ಕೊಲೆ ಪ್ರಕರಣದ ಪ್ರಗತಿ ಬಗ್ಗೆ ಡಿಜಿಪಿ ಸೂದ್​ಗೆ ಸಿಎಂ ತರಾಟೆ

ಪ್ರವೀಣ್ ಹತ್ಯೆ ಬಳಿಕ ಮುಸ್ಲಿಂ ಯುವಕನ ಹತ್ಯೆ ನಡೆದರೂ ಸರ್ಕಾರ ಪರಿಹಾರ ವಿತರಣೆಯಲ್ಲಿ ತಾರತಮ್ಯ ಮಾಡಿದೆ ಎಂಬ ಆರೋಪಗಳ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿ, ಪಕ್ಷದ ಕಾರ್ಯಕರ್ತನಾಗಿದ್ದರಿಂದ ಪ್ರವೀಣ್ ಕುಟುಂಬಕ್ಕೆ ಪಕ್ಷದಿಂದ 25 ಲಕ್ಷ ರೂ. ಪರಿಹಾರ‌ ನೀಡಲಾಗಿದೆ. ಸರ್ಕಾರದಿಂದ ಪರಿಹಾರ ನೀಡಿರುವ ಬಗ್ಗೆ ಮಾಹಿತಿ ಇಲ್ಲ ಎಂದು ಹೇಳಿದರು. ಮುಖ್ಯಮಂತ್ರಿ ಅವರಿಗೆ ಹಿಂದು-ಮುಸ್ಲಿಂ ಎಂಬ ಬೇಧವಿಲ್ಲ. ಸಮಯದ ಅಭಾವದಿಂದ ಮುಸ್ಲಿಂ ಕುಟುಂಬವನ್ನು ಭೇಟಿಯಾಗಲು ಸಾಧ್ಯವಾಗಿಲ್ಲವೆಂದು ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.