ETV Bharat / state

ಜನಪ್ರತಿನಿಧಿಗಳಿಂದ ಪರಿಹಾರ ನಿಧಿ ರಾಜಕೀಯ ನಡೆಯುತ್ತಿದೆಯೇ.!? - ಆರ್ಥಿಕ ನೆರವು ನೀಡುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮನವಿ

ಕೊರೊನಾ ಸೋಂಕಿನಿಂದಾಗಿ ಎಲ್ಲೆಡೆ ಲಾಕ್‌ ಡೌನ್ ಆಗಿರುವ ಕಾರಣ ರಾಜ್ಯದಲ್ಲಿ ಸಂಪನ್ಮೂಲ ಕ್ರೂಢೀಕರಣ ಕುಂಟಿತವಾಗಿ ಆರ್ಥಿಕ ಮುಗ್ಗಟ್ಟು ಎದುರಾಗುತ್ತಿದೆ. ಇಂತಹ ಸಂದರ್ಭದಲ್ಲಿ ಒಟ್ಟಾಗಿ ನಿಲ್ಲಬೇಕಾಗಿದ್ದ ಜನಪ್ರತಿನಿಧಿಗಳೇ ಪರಿಹಾರ ನಿಧಿ ರಾಜಕೀಯ ಮಾಡುತ್ತಿದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆ.

C  M  B.S. Yaduyurappa officially appeals.
ಆರ್ಥಿಕ ನೆರವು ನೀಡುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮನವಿ
author img

By

Published : Apr 18, 2020, 11:09 PM IST

ಬೆಂಗಳೂರು: ಕೊರೊನಾ ಎಫೆಕ್ಟ್ ಗಾಗಿ ಹೆಚ್ಚಿನ ಆರ್ಥಿಕ ನೆರವು ನೀಡುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧಿಕೃತವಾಗಿಯೇ ಮನವಿ ಮಾಡಿದ್ದರು. ಇನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಹ ಪಿಎಂ ಕೇರ್ಸ್ ನಿಧಿಯನ್ನು ಪ್ರಾರಂಭಿಸಿದ್ದಾರೆ. ಆದರೆ, ರಾಜ್ಯದಲ್ಲಿ ಮುಖ್ಯಮಂತ್ರಿ ಅವರ ಮನವಿಗೆ ಪ್ರತಿಪಕ್ಷಗಳಿಂದ ಸಕಾರಾತ್ಮಕ ಸ್ಪಂದನೆ ಸಿಕ್ಕಿಲ್ಲ ಎಂಬ ಮಾತುಗಳು ಹರಿದಾಡುತ್ತಿವೆ.

ಕಾಂಗ್ರೆಸ್ ತನ್ನ ಪಕ್ಷದ ಎಲ್ಲಾ ಶಾಸಕರು ಕಾಂಗ್ರೆಸ್ ಪರಿಹಾರ ನಿಧಿಗೆ ತಲಾ ಒಂದು ಲಕ್ಷ ರೂ. ದೇಣಿಗೆ ನೀಡುವಂತೆ ಸೂಚನೆ ನೀಡಿದೆ. ಇದನ್ನು ಆಧರಿಸಿ ಎಲ್ಲಾ ಶಾಸಕರು ಒಂದೊಂದು ಲಕ್ಷ ರೂ. ದೇಣಿಗೆಯನ್ನು ಪಕ್ಷದ ನಿಧಿಗೆ ನೀಡಿದ್ದಾರೆ. ಮುಖ್ಯಮಂತ್ರಿ ಪರಿಹಾರ ನಿಧಿಗೆ ಸೇರಬೇಕಾಗಿದ್ದ ಈ ಹಣ ಪಕ್ಷದ ಕಚೇರಿಗೆ ಸಲ್ಲಿಕೆಯಾಗಿದೆ. ಜೆಡಿಎಸ್ ಪಾಳಯದಿಂದ ಕೆಲವು ಶಾಸಕರು ವೈಯಕ್ತಿಕವಾಗಿ ದೇಣಿಗೆ ನೀಡಿದ್ದಾರೆಯೇ ಹೊರತು ಸಾಮೂಹಿಕವಾಗಿ ಈ ಕುರಿತು ಸ್ಪಂದನೆ ಸಿಕ್ಕಿಲ್ಲ ಎಂದು ಹೇಳಲಾಗುತ್ತಿದೆ.

ಇನ್ನು ಕಾಂಗ್ರೆಸ್ ಪಕ್ಷ ತನ್ನ ಶಾಸಕರಿಂದ ಸಂಗ್ರಹಿಸಿದ್ದ ದೇಣಿಗೆಯನ್ನು ಯಾವ ರೀತಿ ಬಳಕೆ ಮಾಡುತ್ತಿದೆ ಎಂಬ ಮಾಹಿತಿ ಪ್ರಕಟಿಸಿಲ್ಲ . ಟಾಸ್ಕ್ ಫೋರ್ಸ್, ವಿಷನ್ ಗ್ರೂಪ್‍ಗಳನ್ನು ರಚನೆ ಮಾಡಿಕೊಂಡು ಸಭೆಗಳನ್ನು ಮಾಡಲಾಗುತ್ತಿದೆ. ಕೆಲವು ಶಾಸಕರು ತಮ್ಮ ಸ್ವಂತ ಖರ್ಚಿನಲ್ಲಿ ಕ್ಷೇತ್ರದಲ್ಲಿ ರೈತರು ಬೆಳೆದ ಹಣ್ಣು, ತರಕಾರಿಗಳನ್ನು ಖರೀದಿಸಿ ಜನರಿಗೆ ಉಚಿತವಾಗಿ ಹಂಚಿದ್ದಾರೆ. ಇದನ್ನು ಹೊರತುಪಡಿಸಿ ಪಕ್ಷದಿಂದ ಯಾವೆಲ್ಲಾ ನೆರವುಗಳನ್ನು ನೀಡಲಾಗಿದೆ ಎಂಬ ಮಾಹಿತಿ ಸಿಕ್ಕಿಲ್ಲ. ಕಾಂಗ್ರೆಸ್ ಶಾಸಕರ ದೇಣಿಗೆ ಮುಖ್ಯಮಂತ್ರಿ ಪರಿಹಾರ ನಿಧಿಗೂ ತಲುಪಿಲ್ಲ. ಯಾವ ರೀತಿ ಬಳಕೆಯಾಗುತ್ತಿದೆಯೋ ಎಂಬ ಮಾಹಿತಿಯೂ ಇಲ್ಲ. ಆರಂಭದಲ್ಲಿ ಬಿಜೆಪಿ ಸರ್ಕಾರ ತಾನೇ ಎಲ್ಲವನ್ನು ಸರಿಪಡಿಸುವ ಹುಮ್ಮನಸ್ಸಿನಲ್ಲಿಯೇ ಹೆಜ್ಜೆ ಹಾಕಿತ್ತು. ವಿರೋಧ ಪಕ್ಷದ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿವೆ.

ವಿಧಾನಸಭೆ ನಡೆಯುತ್ತಿದ್ದರೂ ಸರ್ಕಾರ ಕೊರೊನಾ ವಿಷಯದಲ್ಲಿ ವಿಪಕ್ಷದ ನೆರವು ಯಾಚಿಸುವ ಪ್ರಯತ್ನ ಮಾಡಲಿಲ್ಲ. ಹೀಗಾಗಿ ಕಾಂಗ್ರೆಸ್ ತನ್ನದೇ ದಾರಿಯಲ್ಲಿ ನಡೆದಿದೆ. ಕಾಂಗ್ರೆಸ್ ಶಾಸಕರು ಕೊಟ್ಟ ನೆರವು, ದೇಣಿಗೆಯನ್ನು ಬಳಸಿಕೊಂಡು ಬಿಜೆಪಿ ತನ್ನ ಪ್ರಚಾರ ಹೆಚ್ಚಿಸಿಕೊಳ್ಳಲು ಅವಕಾಶ ಕೊಡುವ ಬದಲಾಗಿ ಪಕ್ಷವೇ ದೇಣಿಗೆ ಸಂಗ್ರಹಿಸಿ ಅದರಲ್ಲಿ ರಚನಾತ್ಮಕ ಕೆಲಸ ಮಾಡುವ ಬಗ್ಗೆ ಚರ್ಚೆಗಳು ನಡೆದಿವೆ.

ನಾಳೆ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಲಿರುವ ಕಾಂಗ್ರೆಸ್ ನಿಯೋಗ, ಕೊರೊನಾ ಟಾಸ್ಕ್ ಫೋರ್ಸ್ ವರದಿ ಸಲ್ಲಿಕೆ ಮಾಡಲಿದೆ. ಕಾಂಗ್ರೆಸ್ ಶಾಸಕರ ಕ್ಷೇತ್ರಗಳಲ್ಲಿ ಆಹಾರ ಕಿಟ್ ನೀಡುವ ವಿಚಾರದಲ್ಲಿ ತಾರತಮ್ಯದ ಬಗ್ಗೆಯೂ ಸಿಎಂ ಗಮನಕ್ಕೆ ನಿಯೋಗ ತರುವ ಸಾಧ್ಯತೆ ಇದೆ ಎನ್ನಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.