ETV Bharat / state

ಬೆಳಗಾವಿ ಸುವರ್ಣಸೌಧಕ್ಕೆ ಸರ್ಕಾರಿ ಕಚೇರಿಗಳನ್ನು ಸ್ಥಳಾಂತರಿಸಲು ಸಿಎಂ ಸೂಚನೆ - bemgalore cm meeting

ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಭೆಯಲ್ಲಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

C. M BSY
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
author img

By

Published : Jun 3, 2020, 3:44 PM IST

ಬೆಂಗಳೂರು: ರಾಜ್ಯ ಮಟ್ಟದ ಹಲವು ಸರ್ಕಾರಿ ಕಚೇರಿಗಳನ್ನು ಒಂದು ತಿಂಗಳಲ್ಲಿ ಗುರುತಿಸಿ ಬೆಂಗಳೂರಿನಿಂದ ಬೆಳಗಾವಿಯ ಸುವರ್ಣಸೌಧಕ್ಕೆ ಶೀಘ್ರವಾಗಿ ಸ್ಥಳಾಂತರಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚಿಸಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ತಮ್ಮ ನೇತೃತ್ವದಲ್ಲಿ ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಭೆಯಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆದ ಸಿಎಂ, ಮುಂದಿನ ಸಭೆಯೊಳಗೆ ಹಲವಾರು ಕಚೇರಿಗಳು ಬೆಳಗಾವಿಯ ಸುವರ್ಣ ಸೌಧದಲ್ಲಿ ಕೆಲಸ ನಿರ್ವಹಿಸಬೇಕು. ಅದನ್ನು ತಾವೇ ಖುದ್ದಾಗಿ ಪರಿಶೀಲಿಸುವುದಾಗಿ ಎಚ್ಚರಿಸಿದರು.

ರಾಜ್ಯದಲ್ಲಿ ಪ್ರವಾಹ ಕಾಮಗಾರಿಗಳನ್ನು 500 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೊಂಡಿದ್ದು, ಪ್ರವಾಹದಿಂದ ಹಾಳಾಗಿರುವ 1800 ರಸ್ತೆ ಕಾಮಗಾರಿಗಳ ಪೈಕಿ 1700 ಕಾಮಗಾರಿಗಳು ಈಗಾಗಲೇ ಪೂರ್ಣಗೊಂಡಿವೆ. ಸೇತುವೆ ದುರಸ್ತಿ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಇಂಜಿನಿಯರ್‌ಗಳು ನೇಮಕಾತಿ ಪ್ರಕ್ರಿಯೆ ವಿಳಂಬವಾಗಿರುವುದರಿಂದ ನಿರುದ್ಯೋಗಿ ಇಂಜಿನಿಯರ್​ಗಳನ್ನು ಟ್ರೈನಿಗಳೆಂದು ನೇಮಕ ಮಾಡಲು ಮುಖ್ಯಮಂತ್ರಿಗಳು ಆದೇಶಿಸಿದರು. ಶಿವಮೊಗ್ಗ ನಗರದ ಸೋಗಾನೆ ಗ್ರಾಮದಲ್ಲಿ ವಿಮಾನ ನಿಲ್ದಾಣದ ನಿರ್ಮಾಣ ಕಾಮಗಾರಿಯನ್ನು ಒಂದು ವರ್ಷದ ಅವಧಿಯಲ್ಲಿ ಪೂರ್ಣಗೊಳಿಸಬೇಕು ಹಾಗೂ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕೆಂದು ಸೂಚಿಸಿದರು. ವಿಜಯಪುರ ವಿಮಾನ ನಿಲ್ದಾಣದ ನಿರ್ಮಾಣಕ್ಕೆ ಜಮೀನನ್ನು ಈಗಾಗಲೇ ಗುರುತಿಸಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಪುನರ್ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲು ತಿಳಿಸಿದರು.

ಕೆರೆ, ಹಳ್ಳ ಹಾಗೂ ನದಿಪಾತ್ರದ ಮಣ್ಣನ್ನು ರಸ್ತೆ ಕಾಮಾಗಾರಿಗಳೀಗೆ ಉಪಯೋಗಿಸುವಂತೆ ಸೂಚಿಸಿದ ಸಿಎಂ, ರಾಜ್ಯದ 1650 ಕಿ.ಮೀ ಉದ್ದದ ಗ್ರಾಮೀಣ ರಸ್ತೆಯನ್ನು ಜಿಲ್ಲಾ ಮುಖ್ಯ ರಸ್ತೆಯನ್ನಾಗಿ ಹಾಗೂ 10,110 ಕಿ.ಮೀ ಜಿಲ್ಲಾ ಮುಖ್ಯ ರಸ್ತೆಯನ್ನು ರಾಜ್ಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸುವ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಯಿತು.

ವಿವಿಧ ಇಂಜಿನಿಯರಿಂಗ್ ಇಲಾಖೆಗಳ ದರಪಟ್ಟಿಯನ್ನು ಪರಿಶೀಲಿಸಿ ರಾಜ್ಯಾದ್ಯಂತ ಏಕರೂಪ ದರಪಟ್ಟಿಯನ್ನು ಪ್ರಕಟಿಸಲು ಇಲಾಖೆಯ ನಿವೃತ್ತ ಅಧಿಕಾರಿಗಳ ತಾಂತ್ರಿಕ ಸಮಿತಿ ಅಧ್ಯಯನ ನಡೆಸುತ್ತಿದ್ದು, ಶೀಘ್ರದಲ್ಲಿಯೇ ವರದಿ ಸಲ್ಲಿಸಲಿದ್ದಾರೆ. ಏಕರೂಪ ದರಪಟ್ಟಿ ಹೊರ ಬಂದಲ್ಲಿ ಇಲಾಖೆಗೆ ಖರ್ಚು ಮಾಡುತ್ತಿರುವ ನೂರಾರು ಕೋಟಿ ರೂ.ಗಳನ್ನು ಸರ್ಕಾರ ಉಳಿಸಬಹುದಾಗಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದರು.

ರಾಜ್ಯದಲ್ಲಿ ಒಟ್ಟು 4813 ರಾಷ್ಟ್ರೀಯ ಹೆದ್ದಾರಿಗಳ ಕಾಮಗಾರಿಗಳನ್ನು 30,675 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಅಂತರ್ಜಲ ವೃದ್ಧಿ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿಗಾಗಿ ಸೇತುವೆಗಳ ತಳಭಾಗದಲ್ಲಿ ಒಂದು ಮೀಟರ್ ತಡೆಗೋಡೆ ನಿರ್ಮಿಸಿ ನೀರಿನ ಸಂಗ್ರಹಣೆ ಮಾಡಲು ಮುಖ್ಯಮಂತ್ರಿಗಳು ಸಲಹೆ ನೀಡಿದರು.

ಸಭೆಯಲ್ಲಿ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಲೋಕೋಪಯೋಗಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.