ಬೆಂಗಳೂರು : ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಶುಕ್ರವಾರ ನೈರುತ್ಯ ಮುಂಗಾರು ಸಾಮಾನ್ಯವಾಗಿತ್ತು. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಿದೆ. ದಕ್ಷಿಣ ಒಳನಾಡಿನಲ್ಲಿ ಬಹುತೇಕ ಎಲ್ಲ ಸ್ಥಳಗಳಲ್ಲಿ ಮಳೆಯಾಗಿದೆ. ಪ್ರಮುಖವಾಗಿ ಉಡುಪಿ ಮತ್ತು ಕೊಪ್ಪಳದ ಕುಷ್ಟಗಿಯಲ್ಲಿ 3 ಸೆಂ.ಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಸಿ ಎಸ್ ಪಾಟೀಲ್ ತಿಳಿಸಿದ್ದಾರೆ.
ಆಗಸ್ಟ್ 13 ರಿಂದ 17ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಹೆಚ್ಚಿನ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನಲ್ಲಿ ಬಹುತೇಕ ಎಲ್ಲ ಸ್ಥಳಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಒಳನಾಡಿನಲ್ಲಿ ಆಗಸ್ಟ್ 13ರಿಂದ 16ರವರೆಗೆ ಕೆಲವೆಡೆ ಮಾತ್ರ ಮಳೆಯಾಗುವ ಸಾಧ್ಯತೆಯಿದೆ.
ಆಗಸ್ಟ್ 17ರಂದು ಉತ್ತರ ಒಳನಾಡಿನಲ್ಲಿ ಮಳೆಯ ಪ್ರಮಾಣ ಏರಿಕೆಯಾಗುವ ಹೆಚ್ಚಿನ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ರಾಜಧಾನಿಯಲ್ಲಿ ಮುಂದಿನ ಎರಡು ದಿನಗಳಲ್ಲಿ ಮಳೆಯಾಗುವ ಹೆಚ್ಚಿನ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 28 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದಿದ್ದಾರೆ.
ಓದಿ: ಬೆಂಗಳೂರಿನಲ್ಲಿ ಸತೀಶ್ ರೆಡ್ಡಿ ಕಾರಿಗೆ ಬೆಂಕಿ ಹಚ್ಚಿದ್ದೇ ಬಿಜೆಪಿಯವರು.. ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್