ETV Bharat / state

ರಾಜ್ಯದ ಸಾಂಸ್ಕೃತಿಕ ನಾಯಕರಾಗಿ ಬಸವಣ್ಣ, ಫೆ‌.16ಕ್ಕೆ ಬಜೆಟ್; ಅರ್ಹ ಗ್ರಾಹಕರಿಗೆ ಹೆಚ್ಚುವರಿ 10 ಯುನಿಟ್​ ವಿದ್ಯುತ್​

ಜಗಜ್ಯೋತಿ ಬಸವೇಶ್ವರರನ್ನು ರಾಜ್ಯದ ಸಾಂಸ್ಕೃತಿ ನಾಯಕ ಎಂದು ಘೋಷಣೆ ಮಾಡಲು ಇಂದಿನ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗದೆ. ಸಚಿವ ಸಂಪುಟ ಸಭೆ ಮಹತ್ವದ ನಿರ್ಧಾರಗಳು ಇಂತಿವೆ.

ರಾಜ್ಯದ ಸಾಂಸ್ಕೃತಿಕ ನಾಯಕ ಬಸವಣ್ಣ
ರಾಜ್ಯದ ಸಾಂಸ್ಕೃತಿಕ ನಾಯಕ ಬಸವಣ್ಣ
author img

By ETV Bharat Karnataka Team

Published : Jan 18, 2024, 5:19 PM IST

Updated : Jan 18, 2024, 5:50 PM IST

ಬೆಂಗಳೂರು: ಫೆ.12ರಂದು ವಿಧಾನ ಮಂಡಲ ಜಂಟಿ ಅಧಿವೇಶನ ಕರೆಯಲಾಗಿದ್ದು, ಫೆ.16ಕ್ಕೆ ಬಜೆಟ್ ಮಂಡನೆ ಮಾಡಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಸಚಿವ ಸಂಪುಟ ಸಭೆ ಬಳಿಕ ಮಾತನಾಡಿದ ಕಾನೂನು ಸಚಿವ ಹೆಚ್.ಕೆ.ಪಾಟೀಲ್, ಫೆ.12ರಿಂದ ಜಂಟಿ ಅಧಿವೇಶನ ಆರಂಭವಾಗಲಿದೆ. ಫೆ.12ರಂದು ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಫೆ.16ಕ್ಕೆ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡಲಿದ್ದಾರೆ. ಫೆ.23ರ ವರೆಗೆ ಅಧಿವೇಶನ ನಡೆಯಲಿದೆ ಎಂದು ತಿಳಿಸಿದರು.

ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕರನ್ನಾಗಿ ಘೋಷಣೆ: ಜಗಜ್ಯೋತಿ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು‌‌ ಘೋಷಣೆ ಮಾಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಲಿಂಗಾಯತ ಸಮುದಾಯದ ಸ್ವಾಮೀಜಿಗಳು, ಸಚಿವರು ಇತ್ತೀಚೆಗೆ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕರನ್ನಾಗಿ ಘೋಷಿಸುವಂತೆ ಮನವಿ ಪತ್ರ ಸಲ್ಲಿಸಿದ್ದರು. ಇದೀಗ ಸಚಿವ ಸಂಪುಟ ಸಭೆಯಲ್ಲಿ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕರನ್ನಾಗಿ ಘೋಷಿಸಿ ತೀರ್ಮಾನಿಸಿದೆ.

ಸಚಿವ ಸಂಪುಟ ಸಭೆ ತೀರ್ಮಾನಗಳೇನು?:

  • ಚಿಕ್ಕಮಗಳೂರು ಜಿಲ್ಲೆಯ ಗುರುದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ಅಧಿಸೂಚಿತ ಸಂಸ್ಥೆಗೆ ಸಂಬಂಧಿಸಿದಂತೆ ಸೈಯದ್ ಮೊಹಿಯುದ್ದೀನ್ ಶಾಖಾದ್ರಿ ಕೇಸ್ ವಿಚಾರ ಸರ್ವೋಚ್ಛ ನ್ಯಾಯಾಲಯದಲ್ಲಿ ಕೇಸ್​​ಗೆ ಆಕ್ಷೇಪಣೆ ಸಲ್ಲಿಸಲು ಸಂಪುಟ ಉಪಸಮಿತಿ ರಚನೆಗೆ ತೀರ್ಮಾನ
  • ಗೃಹ ಜ್ಯೋತಿ ಯೋಜನೆಯಡಿಯಲ್ಲಿ 48 ಯೂನಿಟ್‍ಗಳಿಗಿಂತ ಕಡಿಮೆ ಬಳಸುವ ಎಲ್2 ಗ್ರಾಹಕರಿಗೆ ಹೆಚ್ಚುವರಿ 10% ಬದಲಿಗೆ ಹೆಚ್ಚುವರಿ 10 ಅರ್ಹತಾ ಯೂನಿಟ್‍ಗಳನ್ನು ಒದಗಿಸಲು ಸಚಿವ ಸಂಪುಟ ನಿರ್ಧಾರ
  • ಶಿವಮೊಗ್ಗದ 46.32 ಎಕರೆ ಇರುವ ಜೈಲು ಆವರಣದ ಮೈದಾನಕ್ಕೆ ಅಲ್ಲಮಪ್ರಭು ಹೆಸರು ನಾಮಕರಣ
  • ಬೆಳಗಾವಿಯ ಕಿತ್ತೂರು ತಾಲೂಕಿನ ಹೆಸರನ್ನು ಚನ್ನಮ್ಮನ ಕಿತ್ತೂರು ಎಂದು ನಾಮಕರಣ
  • ಕರ್ನಾಟಕ ವಿದ್ಯುತ್ ನಿಗಮದ 4430 ಕೋಟಿ ರೂ. ಸಾಲಕ್ಕೆ ಸರ್ಕಾರಿ ಖಾತ್ರಿ ನೀಡಲು ಒಪ್ಪಿಗೆ
  • ವಿಶ್ವವಿದ್ಯಾಲಯ ಮತ್ತು ಕಾಲೇಜುಗಳಲ್ಲಿ ಸಮಗ್ರ ವಿವಿ ಮತ್ತು ಕಾಲೇಜು ನಿರ್ವಹಣಾ ತಂತ್ರಾಂಶ 15.13 ಕೋಟಿ ರೂ. ವೆಚ್ಚದಲ್ಲಿ ಸಿದ್ಧಪಡಿಸಿ ಅನುಷ್ಠಾನಕ್ಕೆ ಒಪ್ಪಿಗೆ
  • ಕರ್ನಾಟಕ ಮೋಟಾರು ಸಾರಿಗೆ ಮತ್ತು ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮತ್ತು ಕಲ್ಯಾಣ ಸುಂಕ ವಿಧೇಯಕ 2024ಗೆ ಅನುಮೋದನೆ. ಆ ಮೂಲಕ ವಾರ್ಷಿಕ 300 ಕೋಟಿ ರೂ. ನಿಧಿ ಸಂಗ್ರಹದ ನಿರೀಕ್ಷೆ ಇಡಲಾಗಿದೆ.
  • ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಷೇರು ಬಂಡವಾಳ 600 ಕೋಟಿ ರೂ.ಗಳಿಂದ 1200 ಕೋಟಿ ರೂ.ಗಳಿಗೆ ಹೆಚ್ಚಳಗೆ ಅನುಮೋದನೆ
  • ಡಿಜಿಟಲ್ ಲ್ಯಾಂಡ್ ರೆಕಾರ್ಡ್ಸ್​ ಯೋಜನೆಗೆ 3,455 ಕಂಪ್ಯೂಟರ್, ಸ್ಕ್ಯಾನರ್, ರೋವರ್, ಪ್ರಿಂಟರ್‌ಗಳನ್ನು 30.45 ಕೋಟಿ ರೂ. ವೆಚ್ಚದಲ್ಲಿ ಟೆಂಡರ್ ಮೂಲಕ ಖರೀದಿಗೆ ಆಡಳಿತಾತ್ಮಕ ಅನುಮೋದನೆ
  • ಜಲ ಜೀವನ್ ಮಿಷನ್ ಯೋಜನೆಯಡಿ ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ ತಾಲ್ಲೂಕಿನ ಅಂತರಸಂತೆ ಮತ್ತು ಇತರೆ 134 ಜನವಸತಿಗಳಿಗೆ ರೂ.101.73 ಕೋಟಿಗಳ ಅಂದಾಜು ಮೊತ್ತದಲ್ಲಿ ಬಹುಗ್ರಾಮ ಕುಡಿಯುವ ನೀರು ಯೋಜನೆಯನ್ನು DBOT ಆಧಾರದ ಮೇಲೆ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ
  • ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ 134 ಜನವಸತಿ ತಾಲೂಕುಗಳಿಗೆ DBOT ಆಧಾರದ ಮೇಲೆ ಜಲ್ ಜೀವನ್ ಮಿಷನ್ ಯೋಜನೆಯಡಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಅನುಷ್ಠಾನಗೊಳಸಲು ಆಡಳಿತಾತ್ಮಕ ಅನುಮೋದನೆ. ಯೋಜನೆಯ ಅನುಷ್ಠಾನಕ್ಕೆ ಹಾಗೂ 5 ವರ್ಷಗಳ ಯೋಜನೆಯ ಕಾರ್ಯಾಚರಣೆ ಮತ್ತು ನಿರ್ವಹಣೆಗೆ ರಾಜ್ಯ ಸರ್ಕಾರದ ರೂ.58.76 ಕೋಟಿಗಳ ಅನುದಾನವನ್ನು ವಿನಿಯೋಗಿಸಿಕೊಳ್ಳಲು ಒಪ್ಪಿಗೆ
  • ಮೈಸೂರು ಜಿಲ್ಲೆಯ ಎಚ್.ಡಿ. ಕೋಟೆ ತಾಲೂಕಿನ ಹಂಪಾಪುರ ಮತ್ತು ಇತರೆ 48 ಜನವಸತಿ ತಾಲೂಕುಗಳಿಗಗೆ DBOT ಆಧಾರದ ಮೇಲೆ ಜಲ್ ಜೀವನ್ ಮಿಷನ್ ಯೋಜನೆಯಡಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಒಟ್ಟು ರೂ.65.07 ಕೋಟಿಗಳಲ್ಲಿ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ
  • ಟಿ.ನರಸೀಪುರ ತಾಲೂಕಿನ ದೊಡ್ಡ ಬಾಗಿಲು ಇತರೆ 24 ಜನ‌ವಸತಿ ಪ್ರದೇಶದಲ್ಲಿ 34 ಕೋಟಿ ರೂ. ವೆಚ್ಚದ ಜಲಜೀವನ್ ಮಿಷನ್ ಯೋಜನೆಗೆ ಆಡಳಿತಾತ್ಮಕ ಅನುಮೋದನೆ
  • ಜಲ್ ಜೀವನ್ ಮಿಷನ್ ಯೋಜನೆಯಡಿ ಹಾವೇರಿ ಜಿಲ್ಲೆಯ ಹಾವೇರಿ ತಾಲೂಕಿನ ನೆಗಳೂರು ಹಾಗೂ ಇತರೆ 3 ಗ್ರಾಮಗಳಿಗೆ ರೂ.18 ಕೋಟಿಗಳ ಅಂದಾಜು ಮೊತ್ತದಲ್ಲಿ ಬಹುಗ್ರಾಮ ಕುಡಿಯುವ ನೀರು ಯೋಜನೆಯ ಪುನಶ್ಚೇತನ ಕಾಮಗಾರಿಗಳನ್ನು DBOT ಆಧಾರದ ಮೇಲೆ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ
  • ಜಲ್ ಜೀವನ್ ಮಿಷನ್ ಯೋಜನೆಯಡಿ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಕುಡ್ಲ ಮತ್ತು ಇತರೆ 5 ಗ್ರಾಮಗಳಿಗೆ ರೂ.26 ಕೋಟಿಗಳ ಅಂದಾಜು ಮೊತ್ತದಲ್ಲಿ ಬಹುಗ್ರಾಮ ಕುಡಿಯುವ ನೀರು ಯೋಜನೆಯ ಪುನಶ್ಚೇತನ ಕಾಮಗಾರಿಗಳನ್ನು DBOT ಆಧಾರದ ಮೇಲೆ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ
  • ಜಲ್ ಜೀವನ್ ಮಿಷನ್ ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಮತ್ತು ಉಳ್ಳಾಲ ತಾಲೂಕಿನ 24 ಗ್ರಾಮಗಳಿಗೆ ಕೈರಂಗಳದಲ್ಲಿರುವ KUWSDB ನೀರು ಶುದ್ಧೀಕರಣ ಘಟಕದಿಂದ ಬಹುಗ್ರಾಮ ಕುಡಿಯುವ ನೀರು ಯೋಜನೆಯನ್ನು ರೂ.245 ಕೋಟಿಗಳ ಅಂದಾಜು ಮೊತ್ತದಲ್ಲಿ DBOT ಆಧಾರದ ಮೇಲೆ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ
  • ಆನೇಕಲ್‌ನ ಅಂಬೇಡ್ಕರ್ ಭವನಕ್ಕೆ ಪರಿಷ್ಕೃತ 17.40 ಕೋಟಿ ರೂ. ವೆಚ್ಚ ಆಡಳಿತಾತ್ಮಕ ಅನುಮೋದನೆ
  • ಹಲಸೂರು ಕೆರೆಯ ಬಳಿ ಪ್ರವಾಸಿಸೌಧ ನಿರ್ಮಾಣಕ್ಕೆ 18 ಕೋಟಿ ರೂ. ಆಡಳಿತಾತ್ಮಕ ಅನುಮೋದನೆ
  • ವಿಜಯಪುರ ಸಿದ್ದಾರ್ಥ ಸ್ಮಾರಕ ಟ್ರಸ್ಟ್‌ಗೆ ಹಂಚಿಕೆಯಾದ ನಿವೇಶನವನ್ನು ಮೂಲ ಬೆಲೆಯ ಅರ್ಧ ಬೆಲೆಗೆ ನೀಡಲು ತೀರ್ಮಾನ

ಇದನ್ನೂ ಓದಿ: ಅಯೋಧ್ಯೆ ರಾಮಮಂದಿರ ಸ್ಮರಣಾರ್ಥ ಅಂಚೆ ಚೀಟಿ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

Last Updated : Jan 18, 2024, 5:50 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.