ಬೆಂಗಳೂರು: ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಹೂಡಿಕೆ ಪ್ರದೇಶಗಳು ಮತ್ತು ಕೈಗಾರಿಕಾ ವಸಾಹತುಗಳ ಸ್ಥಾಪನೆ ಮಾಡುವ ಉದ್ದೇಶದಿಂದ ಕರ್ನಾಟಕ ವಿಶೇಷ ಹೂಡಿಕೆ ಪ್ರದೇಶ ಅಧಿನಿಯಮಗಳನ್ನು ರಚಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.
ಗುಜರಾತ್ ಮಾದರಿಯಲ್ಲಿ ವಿಶೇಷ ಹೂಡಿಕೆ ಪ್ರದೇಶ ಅಧಿನಿಯಮಗಳನ್ನು ರಚಿಸಲು ತೀರ್ಮಾನಿಸಲಾಗಿದೆ. ಬೆಂಗಳೂರು ಹೊರತು ಪಡಿಸಿ ರಾಜ್ಯದ ಇತರೆ ಜಿಲ್ಲೆಗಳಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಲು ಈ ಅಧಿನಿಯಮ ಅನುವು ಮಾಡಿಕೊಡಲಿದೆ. ಈ ಅಧಿನಿಯಮದಡಿ ತುಮಕೂರು ಮತ್ತು ಧಾರವಾಡ ಜಿಲ್ಲೆಯಲ್ಲಿ ಆರಂಭಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.
ತುಮಕೂರು ಮತ್ತು ಧಾರವಾಡ ಜಿಲ್ಲೆಯಲ್ಲಿ ವಿಶೇಷ ಹೂಡಿಕೆ ಪ್ರದೇಶಗಳನ್ನು ರಚಿಸಲಾಗುವುದು. ಇದಕ್ಕಾಗಿ ರಾಜ್ಯ ಹೂಡಿಕೆ ಪ್ರಾಧಿಕಾರ ರಚನೆ ಮಾಡಲಾಗುವುದು. ಕೆಐಎಡಿಬಿ ಇದರ ಮೇಲುಸ್ತುವಾರಿ ನೋಡಿಕೊಳ್ಳಲಿದೆ. ಭೂಸ್ವಾಧೀನದಿಂದ ಹಿಡಿದು, ಕಂದಾಯ ನಿಗದಿ ಸೇರಿದಂತೆ ಇತರ ವಿಚಾರಗಳನ್ನು ಪ್ರಾಧಿಕಾರ ನಿಗಾವಹಿಸಲಿದೆ.
-
ಸಚಿವ ಸಂಪುಟ ಸಭೆಯು ಪ್ರಮುಖ ನಿರ್ಧಾರಗಳು.@BSBommai pic.twitter.com/0Dau24QTOw
— CM of Karnataka (@CMofKarnataka) November 3, 2022 " class="align-text-top noRightClick twitterSection" data="
">ಸಚಿವ ಸಂಪುಟ ಸಭೆಯು ಪ್ರಮುಖ ನಿರ್ಧಾರಗಳು.@BSBommai pic.twitter.com/0Dau24QTOw
— CM of Karnataka (@CMofKarnataka) November 3, 2022ಸಚಿವ ಸಂಪುಟ ಸಭೆಯು ಪ್ರಮುಖ ನಿರ್ಧಾರಗಳು.@BSBommai pic.twitter.com/0Dau24QTOw
— CM of Karnataka (@CMofKarnataka) November 3, 2022
ಏನಿದು ಅಧಿನಿಯಮ?: ಈ ಅಧಿನಿಯಮದಡಿ 2,500 ಎಕರೆಗಿಂತ ಹೆಚ್ಚಿನ ಪ್ರದೇಶವನ್ನು ಹೊಂದಿರುವ ಹೂಡಿಕೆ ಪ್ರದೇಶ ಅಥವಾ 1,250 ಎಕರೆಗಿಂತ ಕಡಿಮೆ ಇಲ್ಲದ ವಿಸ್ತೀರ್ಣ ಹೊಂದಿರುವ ಪ್ರದೇಶಗಳನ್ನು ವಿಶೇಷ ಹೂಡಿಕೆ ಪ್ರದೇಶ ಎಂದು ಪರಿಗಣಿಸಲಾಗುವುದು.
ವಿಶೇಷ ಹೂಡಿಕೆ ಪ್ರದೇಶಗಳನ್ನು ಸ್ಥಾಪಿಸಲು, ಅಭಿವೃದ್ಧಿ ಪಡಿಸಲು, ನಿರ್ವಹಿಸಲು ಮತ್ತು ನಿಯಂತ್ರಿಸಲು ಸರ್ಕಾರಕ್ಕೆ ಮಾತ್ರ ಅಧಿಕಾರ ಇರಲಿದೆ. ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ, ಪ್ರಾದೇಶಿಕ ಅಭಿವೃದ್ಧಿ ಪ್ರಾಧಿಕಾರ ಮತ್ತು ಪ್ರಾಜೆಕ್ಟ್ ಡೆವಲಪ್‌ಮೆಂಟ್ ಏಜೆನ್ಸಿಗಳು ಆಡಳಿತಾತ್ಮಕ ಕಾರ್ಯಗಳನ್ನು ನಿರ್ವಹಿಸಲಿವೆ.
ಈಗಾಗಲೇ ಗುಜರಾತ್ ಮತ್ತು ರಾಜಸ್ಥಾನ ರಾಜ್ಯಗಳು ಹೂಡಿಕೆ ಪ್ರದೇಶಗಳಲ್ಲಿ ವಿಶ್ವ ದರ್ಜೆಯ ಮೂಲಸೌಕರ್ಯದೊಂದಿಗೆ ಬೃಹತ್ ಗಾತ್ರದ ಹೂಡಿಕೆ ಪ್ರದೇಶಗಳನ್ನು ಅಭಿವೃದ್ಧಿಪಡಿಸಲು ವಿಶೇಷ ಹೂಡಿಕೆ ಪ್ರದೇಶ ಅಧಿನಿಯಮಗಳನ್ನು ಜಾರಿಗೆ ತಂದಿವೆ.
ಇದನ್ನೂ ಓದಿ: ಸಾರ್ವಜನಿಕ ವಾಹನಗಳಿಗೆ ಟ್ರ್ಯಾಕಿಂಗ್ ಉಪಕರಣ ಕಡ್ಡಾಯ: 21.22 ಕೋಟಿ ವೆಚ್ಚದ ಯೋಜನೆಗೆ ಸಂಪುಟ ಒಪ್ಪಿಗೆ