ಬೆಂಗಳೂರು: ಡಿಸೆಂಬರ್‌ತನಕ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆ ಮಾಡದಿರಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಕೊರೊನಾ ಕಾರಣಕ್ಕೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸಚಿವ ಬಸವರಾಜ್ ಬೊಮ್ಮಾಯಿ ಸ್ಪಷ್ಟಪಡಿಸಿದರು.
ಜಿ.ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಅವಧಿ ಫೆಬ್ರವರಿಗೆ ಅಂತ್ಯವಾಗಿತ್ತು. ಚುನಾವಣೆ ಸಂಬಂಧ ಆಕಾಂಕ್ಷಿಗಳು ಸಾಕಷ್ಟು ನಿರೀಕ್ಷೆ ಇಟ್ಟಿದ್ದರು. ಇದೀಗ ಡಿಸೆಂಬರ್‌ವರೆಗೆ ಚುನಾವಣೆ ಮುಂದೂಡಿದ್ದು ಆಕಾಂಕ್ಷಿಗಳಲ್ಲಿ ನಿರಾಸೆ ಮೂಡಿಸಿದೆ.