ಬೆಂಗಳೂರು: ಇನ್ನು ಎರಡ್ಮೂರು ದಿನಗಳಲ್ಲಿ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಆಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಪೊಲೀಸರಿಗೆ ಮುಖ್ಯಮಂತ್ರಿ ಪದಕ ಪ್ರದಾನ ಮಾಡಿ ನಂತರ ಮಾತನಾಡಿದ ಅವರು, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಜೊತೆ ಚರ್ಚೆ ಮಾಡಿ ಬಂದಿದ್ದೇನೆ. ಮೂರು ದಿನದೊಳಗೆ ನಡ್ಡಾರವರು ಏನು ಮಾಡಬೇಕು ಎಂದು ಹೇಳುತ್ತಾರೆ. ಯಾರು ಸಚಿವರಾಗುತ್ತಾರೆ ಎಂಬುದು ಶೀಘ್ರದಲ್ಲೇ ಅಂತಿಮವಾಗಲಿದೆ ಎಂದರು.
ಶಾಸಕ ಎಂ.ಪಿ. ರೇಣುಕಾಚಾರ್ಯ ಹಲವು ಶಾಸಕರ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಭೇಟಿ ಮಾಡಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ, ಎಲ್ಲಾ ಶಾಸಕರು ರಾಜ್ಯಾಧ್ಯಕ್ಷರನ್ನು ಭೇಟಿ ಮಾಡುತ್ತಿರುತ್ತಾರೆ. ಅದರ ಬಗ್ಗೆ ನಾನು ಮಾತನಾಡಲ್ಲ ಎಂದರು.