ETV Bharat / state

ಸಂಪುಟ ರಚನೆ: ಸಿಎಂ ನಿರ್ಧಾರಕ್ಕೆ ಬದ್ಧ ಎಂದ ನಿರಾಣಿ

ಸಚಿವ ಸಂಪುಟ ವಿಸ್ತರಣೆ ಮುಖ್ಯಮಂತ್ರಿಗಳ ಪರಮಾಧಿಕಾರವಾಗಿದೆ. ಅವರು ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಾನು ಬದ್ಧನಾಗಿರುತ್ತೇನೆ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.

BNG
BNG
author img

By

Published : Jul 29, 2021, 1:32 PM IST

Updated : Jul 29, 2021, 1:47 PM IST

ಬೆಂಗಳೂರು: ಸಂಪುಟ ವಿಸ್ತರಣೆಯನ್ನು ಯಾವಾಗ ಮಾಡಬೇಕು, ಯಾರನ್ನು ತೆಗೆದುಕೊಳ್ಳಬೇಕು ಎಂಬುದು ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟಿದ್ದಾಗಿದ್ದು, ಅವರ ನಿರ್ಧಾರಕ್ಕೆ ನಾವೆಲ್ಲರೂ ಬದ್ದರಾಗಿರಬೇಕು ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ. ಆರ್‌ಟಿ ನಗರದಲ್ಲಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನಿವಾಸಕ್ಕೆ ಮಾಜಿ ಸಚಿವ ಮುರುಗೇಶ್ ನಿರಾಣಿ ಭೇಟಿ ನೀಡಿ, ನೂತನ ಸಿಎಂಗೆ ಅಭಿನಂದನೆ ಸಲ್ಲಿಸಿ ಕೆಲಕಾಲ ಮಾತುಕತೆ ನಡೆಸಿದರು.

ನಂತರ ಸುದ್ದಿಗಾರರ ಜೊತೆ ಮಾತನಾಡಿದ ನಿರಾಣಿ, ಸಚಿವ ಸಂಪುಟ ವಿಸ್ತರಣೆ ಮುಖ್ಯಮಂತ್ರಿಗಳ ಪರಮಾಧಿಕಾರವಾಗಿದೆ. ಅವರು ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಾನು ಬದ್ಧನಾಗಿರುತ್ತೇನೆ ಎಂದರು.

ಸಂಪುಟಕ್ಕೆ ಸೇರ್ಪಡೆಯಾಗದಿರಲು ತೀರ್ಮಾನಿಸಿರುವ ಜಗದೀಶ್ ಶೆಟ್ಟರ್ ನಿರ್ಧಾರದ ಬಗ್ಗೆ ಪ್ರತಿಕ್ರಿಯಿಸಿದ ನಿರಾಣಿ, ಯಾರು ಯಾವ ನಿರ್ಧಾರವನ್ನು ಕೈಗೊಳ್ಳುತ್ತಾರೋ ನನಗೆ ಗೊತ್ತಿಲ್ಲ. ಶೆಟ್ಟರ್ ಅವರದ್ದು ವೈಯಕ್ತಿಕ ವಿಚಾರ. ಈ ಬಗ್ಗೆ ನಾನು ಯಾವುದೇ ಗೊಂದಲ ಸೃಷ್ಟಿಸಲು ಇಚ್ಚಿಸುವುದಿಲ್ಲ ಎಂದು ಹೇಳಿದರು.

ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ನಮ್ಮ ಪಕ್ಷದ ಅತ್ಯಂತ ಹಿರಿಯರು, ಮುಖ್ಯಮಂತ್ರಿ, ಸ್ಪೀಕರ್, ರಾಜ್ಯಾಧ್ಯಕ್ಷ, ಪ್ರತಿಪಕ್ಷ ನಾಯಕ ಆಗಿದ್ದವರು. ಅವರು ಯಾವ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂಬುದು ತನಗೆ ಗೊತ್ತಿಲ್ಲ. ನಾನು ಶೆಟ್ಟರ್ ಜತೆ ಚರ್ಚೆ ಮಾಡುತ್ತೇನೆ. ಉಳಿದ ಹಿರಿಯರ ನಿರ್ಧಾರದ ಬಗ್ಗೆ ಗೊತ್ತಿಲ್ಲ ಎಂದು ಸ್ಪಷ್ಟನೆ ನೀಡಿದರು.

ನಿನ್ನೆಯಷ್ಟೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವ ಬೊಮ್ಮಾಯಿ, ಮೊದಲ ಸಚಿವ ಸಂಪುಟ ಸಭೆಯಲ್ಲೇ ಅತ್ಯುತ್ತಮ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ. ರೈತರು, ಹಿರಿಯರು, ವಿಧವೆಯರು, ಅಂಗವಿಕಲರಿಗೆ ಆದ್ಯತೆ ನೀಡುವ ನಿರ್ಣಯಗಳನ್ನು ಕೈಗೊಂಡಿರುವುದು ಉತ್ತಮ ನಿರ್ಧಾರ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಬಸವರಾಜ್ ಬೊಮ್ಮಾಯಿ ಅವರ ನಡೆ ಉತ್ತಮವಾಗಿ ಮುಂದುವರೆದಿದೆ. ಆಡಳಿತದ ದಿಕ್ಸೂಚಿ ಏನಿರಲಿದೆ ಎಂಬುದನ್ನು ಮೊದಲ ದಿನವೇ ತೋರಿಸಿಕೊಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ಜನಪರ ಆಡಳಿತಕ್ಕೆ ಸರ್ಕಾರ ಹೆಚ್ಚು ಒತ್ತು ನೀಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Last Updated : Jul 29, 2021, 1:47 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.