ETV Bharat / state

ಕೆಪಿಎಸ್​​​​ಸಿ 2011ರ ಗಜೆಟೆಡ್ ಅಧಿಕಾರಿಗಳ ಹುದ್ದೆ ಆಯ್ಕೆ ‌ಪಟ್ಟಿಗೆ ಸಂಪುಟ ಸಭೆ ಅಸ್ತು : ಮಸೂದೆ ಮಂಡನೆಗೆ ತೀರ್ಮಾನ

2011ನೇ ಸಾಲಿನ ಕೆಪಿಎಸ್​​​ಸಿ ಗಜೆಟೆಡ್ ಅಧಿಕಾರಿಗಳ ನೇಮಕಾತಿಯ ಆಯ್ಕೆ ಪಟ್ಟಿಗೆ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ. ಒಟ್ಟು 362 ಗಜೆಟೆಡ್ ಅಧಿಕಾರಿಗಳ ಹುದ್ದೆ ನೇಮಕಾತಿಯನ್ನು ಸಿಂಧುಗೊಳಿಸುವ ನಿಟ್ಟಿನಲ್ಲಿ ಮಸೂದೆಯನ್ನು ಮುಂದಿನ ಅಧಿವೇಶನದಲ್ಲಿ ಮಂಡಿಸಲು ನಿರ್ಧರಿಸಲಾಗಿದೆ ಎಂದು ಕಾನೂನು ಸಚಿವ ಮಾಧುಸ್ವಾಮಿ ಮಾಹಿತಿ ನೀಡಿದ್ದಾರೆ..

Cabinet meeting approved KPSC 2011 Gazetted Officers Appointment List
ಕೆಪಿಎಸ್​​​​ಸಿ 2011ರ ಗಜೆಟೆಡ್ ಅಧಿಕಾರಿಗಳ ಹುದ್ದೆ ಆಯ್ಕೆ ‌ಪಟ್ಟಿಗೆ ಸಂಪುಟ ಸಭೆ ಅಸ್ತು
author img

By

Published : Feb 9, 2022, 3:05 PM IST

ಬೆಂಗಳೂರು : ಕೆಪಿಎಸ್‌ಸಿ -2011ನೇ ಸಾಲಿನ ಗೆಜೆಟೆಡ್ ಅಧಿಕಾರಿಗಳ ಹುದ್ದೆ ಆಯ್ಕೆ ಪಟ್ಟಿಗೆ ಸಂಪುಟ ಸಭೆ ಅನುಮೋದನೆ ನೀಡಿದೆ. ನೇಮಕಾತಿ ಸಂಬಂಧ ಮಸೂದೆ ಮಂಡನೆ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ.

2011ನೇ ಸಾಲಿನ ಕೆಪಿಎಸ್​​​ಸಿ ಗೆಜೆಟೆಡ್ ಅಧಿಕಾರಿಗಳ ನೇಮಕಾತಿಯ ಆಯ್ಕೆ ಪಟ್ಟಿಗೆ ಸಚಿವ ಸಂಪುಟ ಅಸ್ತು ನೀಡಿದೆ. ಒಟ್ಟು 362 ಗಜೆಟೆಡ್ ಅಧಿಕಾರಿಗಳ ಹುದ್ದೆ ನೇಮಕಾತಿಯನ್ನು ಸಿಂಧುಗೊಳಿಸುವ ನಿಟ್ಟಿನಲ್ಲಿ ಮಸೂದೆಯನ್ನು ಮುಂದಿನ ಅಧಿವೇಶನದಲ್ಲಿ ಮಂಡಿಸಲು ನಿರ್ಧರಿಸಲಾಗಿದೆ ಎಂದು ಕಾನೂನು ಸಚಿವ ಮಾಧುಸ್ವಾಮಿ ತಿಳಿಸಿದರು.

ಸಂಪುಟ ಸಭೆ ಬಳಿಕ ಕಾನೂನು ಸಚಿವ ಮಾಧುಸ್ವಾಮಿ ಮಾಹಿತಿ ನೀಡಿರುವುದು..

ಬೆಂಗಳೂರು ಪೆರಿಫೆರಲ್ ರಿಂಗ್ ರಸ್ತೆಯನ್ನು ಹಲವು ಮಾರ್ಪಾಡುಗಳೊಂದಿಗೆ ನಿರ್ಮಾಣ ಮಾಡುವ ಪ್ರಸ್ತಾವನೆಗೆ ಸಂಪುಟ ಸಭೆ ಅನುಮೋದನೆ ನೀಡಿದೆ‌. 50 ವರ್ಷ ಅವಧಿಗೆ ಖಾಸಗಿ ಸಂಸ್ಥೆಗೆ ಯೋಜನೆ ನಿರ್ಮಾಣದ ಕಾಮಗಾರಿ ಹಾಗೂ ನಿರ್ವಹಣೆ ನೀಡಲು ನಿರ್ಧರಿಸಲಾಗಿದೆ. ಟೆಂಡರ್ ಪಡೆಯುವ ಸಂಸ್ಥೆಯೇ ಭೂಸ್ವಾಧೀನ ಮಾಡಲಿದೆ ಎಂದು ಸಚಿವರು ತಿಳಿಸಿದರು.

ಸಂಪುಟ ತೀರ್ಮಾನಗಳೇನು?:

  • ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ರನ್ನ ನಗರದಲ್ಲಿನ ರೈತರ ಸಹಕಾರಿ ಸಕ್ಕರೆ ಕಾರ್ಖಾನೆಯನ್ನು ಎಲ್‌ಆರ್‌ಒಟಿ ಆಧಾರದ ಮೇಲೆ ಗಿರಿಜಾರಮಣ ಇಂಪಕ್ಸ್ ಪ್ರೈವೇಟ್ ಲಿ.ಗೆ 40 ವರ್ಷಗಳ ಅವಧಿಗೆ ಗುತ್ತಿಗೆ ನೀಡಿ ಆದೇಶ ಹೊರಡಿಸಿರುವ ಕ್ರಮಕ್ಕೆ ಘಟನೋತ್ತರ ಅನುಮೋದನೆ.
  • ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಝಂಜುರವಾಡ ಗ್ರಾಮದ ಹತ್ತಿರ ಕೃಷ್ಣಾ ನದಿಯಿಂದ ಏತ ನೀರಾವರಿ ಯೋಜನೆ ಮೂಲಕ ಯಲ್ಲಮ್ಮನವಾಡಿ ಕೆರೆಗೆ ನೀರು ತುಂಬಿಸುವ ಯೋಜನೆಯ ಮೊದಲನೇ ಹಂತದ ಕಾಮಗಾರಿಯನ್ನು 49.51 ಕೋಟಿ ರೂ. ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ
  • ಕಲಬುರಗಿ ಜಿಲ್ಲೆಯ ಅಫಜಲಪೂರ ತಾಲೂಕಿನ ಬಾದನಳ್ಳಿಯಿಂದ ಗೌಡಗಾಂವ ಜಿಲ್ಲಾ ಮುಖ್ಯ ರಸ್ತೆಯ 9.60 ಕಿ.ಮೀ ರಸ್ತೆ ಸುಧಾರಣೆ ಕಾಮಗಾರಿಯ 10.97 ಕೋಟಿ ರೂ. ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ ಕರ್ನಾಟಕ ಮುದ್ರಾಂಕ (ತಿದ್ದುಪಡಿ) ವಿಧೇಯಕ, 2022ಗೆ ಅನುಮೋದನೆ
  • ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ನಿಡುಗುರ್ತಿ ಮತ್ತು ಇತರೆ 60 ಜನವಸತಿಗಳಿಗೆ ಜಲ ಜೀವನ ಮಿಷನ್‌ ಅಡಿ ಬಹುಗ್ರಾಮ ಕುಡಿಯುವ ನೀರು ಸರಬರಾಜಿನ ರೂ. 131.21 ಕೋಟಿ ಅಂದಾಜು ಮೊತ್ತದ ಯೋಜನೆಯನ್ನು ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ
  • ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆವಿನಹಳ್ಳಿ ಮತ್ತು ಇತರೆ 336 ಜನವಸತಿಗಳನ್ನೊಳಗೊಂಡ 122 ಗ್ರಾಮಗಳಿಗೆ ಜಲ ಜೀವನ ಮಿಷನ್‌ ಅಡಿ ಬಹುಗ್ರಾಮ ಕುಡಿಯುವ ನೀರು ಸರಬರಾಜಿನ ರೂ. 88 ಕೋಟಿ ಅಂದಾಜು ಮೊತ್ತದ ಯೋಜನೆಯನ್ನು ಅನುಷ್ಠಾನಗೊಳಿಸಲು ಅನುಮೋದನೆ
  • ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಅಮಾನಿ ಬೈರಸಾಗರ ಕೆರೆಯ ಸುತ್ತಮುತ್ತಲಿನ 28 ಜನವಸತಿಗಳಿಗೆ ಜೀವನ್ ಮಿಷನಡಿ ಬಹುಗ್ರಾಮ ಕುಡಿಯುವ ನೀರು ಸರಬರಾಜಿನ 15 ಕೋಟಿ ರೂ. ಅಂದಾಜು ಮೊತ್ತದ ಯೋಜನೆಯನ್ನು ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ
  • ಶಿವಮೊಗ್ಗ ತಾಲೂಕಿನ ಗೋವಿಂದಪುರ ಹಾಗೂ ಇತರೆ 11 ಜನವಸತಿಗಳು ಮತ್ತು ಗೋಪಿಶೆಟ್ಟಿಕೊಪ್ಪದ 1 ನಗರ ಪ್ರದೇಶಕ್ಕೆ ಜಲ ಜೀವನ್ ಮಿಷನಡಿ ಬಹುಗ್ರಾಮ ಕುಡಿಯುವ ನೀರು ಸರಬರಾಜಿನ ರೂ. 16.73 ಕೋಟಿಗಳ ಅಂದಾಜು ಮೊತ್ತದ ಯೋಜನೆಯನ್ನು ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ
  • ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ವಾಸರಕುದ್ರಿಗೆ ಮತ್ತು ಇತರೆ 5 ಗ್ರಾಮಗಳಿಗೆ (23 ಜನವಸತಿಗಳು) ಜಲ ಜೀವನ್ ಮಿಷನ್‌ಡಿ ಬಹುಗ್ರಾಮ ಕುಡಿಯುವ ನೀರು ಸರಬರಾಜಿನ ರೂ. 30.27 ಕೋಟಿಗಳ ಅಂದಾಜು ಮೊತ್ತದ ಯೋಜನೆಯನ್ನು ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ
  • ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಗೋಟೆಗಾಳಿ ಮತ್ತು ಇತರೆ 22 ಗ್ರಾಮಗಳ (43 ಜನವಸತಿಗಳು) ಜಲ್ ಜೀವನ್ ಮಿಷನರಡಿ ಹಾಗೂ ಕೆರವಾಡಿ ಮತ್ತು ಇತರೆ 17 ಗ್ರಾಮಗಳ (42 ಜನವಸತಿಗಳು) ಸಂಯೋಜಿತ ಬಹುಗ್ರಾಮ ಕುಡಿಯುವ ನೀರು ಸರಬರಾಜಿನ ರೂ. 88.50 ಕೋಟಿಗಳ ಮೊತ್ತದ ಯೋಜನೆಯನ್ನು ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ
  • ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮಾಸ್ತಿ ಗ್ರಾಮದಲ್ಲಿ ಮಾಸ್ತಿ ವೆಂಕಟೇಶ ಅಯ್ಯಂಗಾರ್ ವಸತಿ ಶಾಲಾ (ಹಿಂದುಳಿದ ವರ್ಗ) ಕಟ್ಟಡ ನಿರ್ಮಾಣ ಕಾಮಗಾರಿಯ ರೂ. 17 ಕೋಟಿ ಅಂದಾಜು ಪಟ್ಟಿಗೆ ಆಡಳಿತಾತ್ಮಕ ಅನುಮೋದನೆ
  • ಬೆಳಗಾವಿ ನಗರದ ದಕ್ಷಿಣ ಮತಕ್ಷೇತ್ರದಲ್ಲಿ ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಅಭಿವೃದ್ಧಿಪಡಿಸುತ್ತಿರುವ ರೂ. 28.63 ಕೋಟಿಗಳ ಮೊತ್ತದ ಆರು ರಸ್ತೆ ಕಾಮಗಾರಿಗಳ ಸ್ಥಳಗಳನ್ನು ಬದಲಾವಣೆ ಮಾಡಲು ಅನುಮೋದನೆ
  • ವಿಜಯಪುರ ಮಹಾನಗರಪಾಲಿಕೆಯಲ್ಲಿ ದೀರ್ಘಾವಧಿ ಗುತ್ತಿಗೆಗೆ ನೀಡಿರುವ ಆಸ್ತಿಗಳ ಪೈಕಿ ಉಳಿಕೆ 366 ಲೀಜ್ ಆಸ್ತಿಗಳನ್ನೂ ಸಹ ಸರ್ಕಾರ ಈಗಾಗಲೇ ನಿಗದಿಪಡಿಸಿರುವ ದರಕ್ಕೆ ಬಡ್ಡಿ ಮೊತ್ತ ಸೇರಿಸಿ ಖರೀದಿಗೆ ಮಂಜೂರಾತಿ
  • ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ನಿರ್ಮಿಸಲಾಗುವ ನೂತನ ಅನುಭವ ಮಂಟಪದ ನಿರ್ಮಾಣ ಕಾಮಗಾರಿಯ ಅಂದಾಜು ಪತ್ರಿಕೆಗೆ ಆಡಳಿತಾತ್ಮಕ ಅನುಮೋದನೆ

ಇದನ್ನೂ ಓದಿ: ಹಿಜಾಬ್, ಕೇಸರಿ ಶಾಲು ಎರಡೂ ಕೂಡ‌ ಕಾಲೇಜು ಕ್ಯಾಂಪಸ್​​ನಲ್ಲಿ ಬರಬಾರದು: ಆರ್.ಅಶೋಕ್

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.