ETV Bharat / state

ಎಸ್​ಸಿ ಎಸ್​ಟಿ ಮೀಸಲಾತಿ ಹೆಚ್ಚಳಕ್ಕೆ ಸಂಪುಟ ಸಭೆ ಅನುಮೋದನೆ: ತಕ್ಷಣ ಆದೇಶ ಹೊರಡಿಸಲು ನಿರ್ಧಾರ - ಮೀಸಲಾತಿ ಹೆಚ್ಚಳಕ್ಕೆ ಸಂಪುಟ ಸಭೆ ಅನುಮೋದನೆ

ಎಸ್​ಸಿ ಮತ್ತು ಎಸ್​ಟಿ ಮೀಸಲಾತಿ ಹೆಚ್ಚಳಕ್ಕೆ ಸಂಪುಟ ಸಭೆ ಅನುಮೋದನೆ ನೀಡಿದ್ದು ತಕ್ಷಣ ಆದೇಶ ಹೊರಡಿಸಲು ನಿರ್ಧಾರಿಸಲಾಗಿದೆ.

cabinet meeting approves increase sc and st reservation
ಕಾನೂನು ಸಚಿವ ಜೆಸಿ ಮಾಧುಸ್ವಾಮಿ
author img

By

Published : Oct 8, 2022, 1:52 PM IST

Updated : Oct 8, 2022, 2:32 PM IST

ಬೆಂಗಳೂರು: ಸರ್ವ ಪಕ್ಷ ಸಭೆಯ ನಿರ್ಧಾರದಂತೆ ಎಸ್​ಸಿ ಮತ್ತು ಎಸ್​ಟಿ ಮೀಸಲಾತಿ ಹೆಚ್ಚಳ ಸಂಬಂಧ ನಾಗಮೋಹನ್ ದಾಸ್ ಶಿಫಾರಸನ್ನು ಸಚಿವ ಸಂಪುಟ ಸಭೆಯಲ್ಲಿ ಯಥಾವತ್ ಒಪ್ಪಿಕೊಳ್ಳಲಾಗಿದೆ. ವಿಧಾನಸೌಧದಲ್ಲಿ‌ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಎಸ್​ಟಿಗೆ 17% ಹಾಗೂ ಎಸ್​ಸಿಗೆ 7% ಮೀಸಲಾತಿ ಹೆಚ್ಚಿಸಲು ಸಮ್ಮತಿ ಸೂಚಿಸಲಾಗಿದೆ. ಈ ಸಂಬಂಧ ಸರ್ಕಾರಿ ಆದೇಶ ಹೊರಡಿಸಲು ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.

ಮೀಸಲಾತಿ ಹೆಚ್ಚಳ ಸಂಬಂಧ ತಕ್ಷಣ ಸರ್ಕಾರಿ ಆದೇಶ ಹೊರಡಿಸಿ ಜಾರಿ ಮಾಡಲು ನಿರ್ಧಾರ‌ ಮಾಡಲಾಗಿದೆ. ಎರಡು ಮೂರು ದಿನಗಳಲ್ಲಿ ಸರ್ಕಾರಿ ಆದೇಶ ಹೊರಬೀಳಲಿದೆ. ಸರ್ಕಾರಿ ಆದೇಶದಲ್ಲಿ ಯಾವ ರೀತಿ ಮೀಸಲಾತಿ ಕಲ್ಪಿಸಲಾಗುತ್ತೆ ಎಂಬ ಬಗ್ಗೆ ವಿವರವಾಗಿ ಉಲ್ಲೇಖಿಸಲಾಗುತ್ತದೆ ಎಂದರು‌.

ಮೀಸಲಾತಿ ಪ್ರಮಾಣ ಶೇಕಡ 50ರಷ್ಟನ್ನು ಮೀರಬಾರದು ಎಂದು ಸುಪ್ರೀಂಕೋರ್ಟ್ ಹೇಳಿದೆ. ಆ ಹಿನ್ನೆಲೆ ಸಂವಿಧಾನದ ಪರಿಚ್ಛೇದ 9ರ ವ್ಯಾಪ್ತಿಗೆ ಕರ್ನಾಟಕದ ಮೀಸಲಾತಿ ವಿಷಯವನ್ನು ಸೇರಿಸಿ ಮೀಸಲಾತಿ ಹೆಚ್ಚಿಸಲಾಗುತ್ತದೆ. ಇದರಿಂದ ನ್ಯಾಯಾಲಯದ ಪರಿಶೀಲನೆ ವ್ಯಾಪ್ತಿಯಿಂದ ಹೊರಗಿಡಲು ಸಾಧ್ಯವಾಗುತ್ತದೆ. ತಮಿಳುನಾಡಿನಲ್ಲಿ ಶೆಡ್ಯೂಲ್ 9ಕ್ಕೆ ಸೇರಿಸಿ ಮೀಸಲಾತಿ ನೀಡಲಾಗಿದೆ. ಹೀಗಾಗಿ ಸುಪ್ರೀಂಕೋರ್ಟ್ ಅಲ್ಲಿನ‌ ಮೀಸಲಾತಿಗೆ ತಡೆಯಾಜ್ಞೆ ನೀಡಲು ಸಾಧ್ಯವಾಗಿಲ್ಲ. ಇಲ್ಲೂ ಶೆಡ್ಯೂಲ್ 9 ವ್ಯಾಪ್ತಿಗೆ ಮೀಸಲಾತಿ ಸೇರಿಸುವ ಸಂಬಂಧ ಚರ್ಚೆ ನಡೆಸಿ ಕೇಂದ್ರಕ್ಕೆ ಮುಂದೆ ಶಿಫಾರಸು ಕಳುಹಿಸಲಾಗುತ್ತದೆ ಎಂದು ಇದೇ ವೇಳೆ ತಿಳಿಸಿದರು.

ಸಚಿವ ಜೆ.ಸಿ.ಮಾಧುಸ್ವಾಮಿ

ಎಸ್​ಸಿ, ಎಸ್​ಟಿ ಮೀಸಲಾತಿ ಹೆಚ್ಚಳ ನಮ್ಮ ಬದ್ಧತೆಯಾಗಿದೆ. ಬೇರೆ ಸಮುದಾಯದವರಿಗೆ ಮೀಸಲಾತಿ ಬಗ್ಗೆನೂ ಚರ್ಚೆ ಮಾಡುತ್ತೇವೆ.‌ ಈ ಸಚಿವ ಸಂಪುಟ ಸಭೆಯಲ್ಲಿ ಆ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ. ವೈಜ್ಞಾನಿಕವಾಗಿ ಚರ್ಚೆಯಾಗದೇ, ಆಯೋಗ ಶಿಫಾರಸು ಇಲ್ಲದೇ ಬೇರೆ ಸಮುದಾಯಗಳಿಗೆ ಮೀಸಲಾತಿ ಕೊಡಲು ಆಗುವುದಿಲ್ಲ. ಬೇರೆ ಸಮುದಾಯಗಳಿಗೆ ಮೀಸಲಾತಿ ನೀಡುವ ವಿಚಾರ ಜೇನುಗೂಡಿಗೆ ಕಲ್ಲು ಎಸೆದ ಹಾಗಾಗುತ್ತದೆ ಎಂದು ಸೂಚ್ಯವಾಗಿ ತಿಳಿಸಿದರು.

ಒಳಮೀಸಲಾತಿ‌ ಕೊಡಬೇಕು ಎಂದು ಸದಾಶಿವ ಆಯೋಗ ಶಿಫಾರಸು ಮಾಡಿದೆ. ಅದನ್ನು ನಾಗಮೋಹನ್ ದಾಸ್ ಆಯೋಗ ತನ್ನ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಎಸ್​ಸಿ, ಎಸ್​ಟಿಯಲ್ಲಿ ಜನಾಂಗದೊಳಗೆ ಒಳ ಮೀಸಲಾತಿ ಕೊಡುವ ಬಗ್ಗೆ ಕಾನೂನು ಸಚಿವ ನೇತೃತ್ವದ ಸಮಿತಿ ವರದಿ ನೀಡಿದ ಬಳಿಕ ನಿರ್ಧಾರ ಕೈಗೊಳ್ಳಲಾಗುತ್ತದೆ. ಒಳ‌ಮೀಸಲಾತಿ ಸಂಬಂಧ ಸದಾಶಿವ ಆಯೋಗದ ವರದಿಯ ಅಧ್ಯಯನ ‌ನಡೆಸಿ ಮುಂದೆ ತೀರ್ಮಾನ ಕೈಗೊಳ್ಳಲಾಗುತ್ತದೆ.

ಎಸ್​ಸಿ ಮತ್ತು ಎಸ್​ಟಿ ಮೀಸಲಾತಿ ಹೆಚ್ಚಳದಿಂದ ಇತರ ಯಾವುದೇ ಸಮುದಾಯಗಳ ಮೀಸಲಾತಿ ಕಡಿತವಾಗುವ ಬಗ್ಗೆ ಆದೇಶದಲ್ಲಿ ಸ್ಪಷ್ಟಪಡಿಸಲಾಗುತ್ತದೆ.

ಇದನ್ನೂ ಓದಿ: ಈಡೇರಿದ ಮೀಸಲಾತಿ ಬೇಡಿಕೆ.. ನನ್ನನ್ನು ಗೇಲಿ ಮಾಡುತ್ತಿದ್ದವರಿಗೆ ಈಗ ನೆಮ್ಮದಿ ಸಿಕ್ಕಿದೆ.. ಸಚಿವ ಶ್ರೀರಾಮುಲು

Last Updated : Oct 8, 2022, 2:32 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.